ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದ ಮಗ ಆರ್ಯನ್​​ಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡ ಶಾರುಖ್​ ಖಾನ್​

ಕಾರ್ಡಿಲಿಯಾ ಕ್ರೂಸ್ ಶಿಪ್​ನಲ್ಲಿ ಈ ಪಾರ್ಟಿ ನಡೆಯುತ್ತಿತ್ತು. ಆರ್ಯನ್​ ಖಾನ್​ ಸೇರಿ ಸಾಕಷ್ಟು ಪ್ರತಿಷ್ಠಿತ ಕುಟುಂಬದ ಮಕ್ಕಳು ಈ ಪಾರ್ಟಿಗೆ ಹಾಜರಿ ಹಾಕಿದ್ದರು. ಈ ಪಾರ್ಟಿಗೆ ಎಂಟ್ರಿ ಫೀ 80 ಸಾವಿರ ರೂಪಾಯಿ ಇದೆ ಎನ್ನುವ ಬಗ್ಗೆ ವರದಿಯಾಗಿದೆ.

ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದ ಮಗ ಆರ್ಯನ್​​ಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡ ಶಾರುಖ್​ ಖಾನ್​
ಶಾರುಖ್​ ಖಾನ್​ ಕುಟುಂಬ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 03, 2021 | 3:42 PM

ಬಾಲಿವುಡ್​ ಖ್ಯಾತ ನಟ ಶಾರುಖ್​ ಖಾನ್​ ನಟನೆಯಿಂದ ಅಂತರ ಕಾಯ್ದುಕೊಂಡು ಕೆಲ ವರ್ಷಗಳು ಕಳೆದಿದ್ದವು. ಈಗ ಅವರು ಖ್ಯಾತ ನಿರ್ದೇಶಕರ ಜತೆ ಸಿನಿಮಾ ಮಾಡೋಕೆ ರೆಡಿ ಆಗಿದ್ದಾರೆ. ಅವರು ಚಿತ್ರೀಕರಣದಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಅವರ ಮಗ ಆರ್ಯನ್​ ಖಾನ್​ ಕುಟುಂಬದ ಘನತೆಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿದೆ. ಇದರಿಂದ ಶಾರುಖ್ ವಿಚಲಿತರಾಗಿದ್ದಾರೆ. ಅಲ್ಲದೆ, ಅವರು ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕಾರ್ಡಿಲಿಯಾ ಕ್ರೂಸ್ ಶಿಪ್​ನಲ್ಲಿ ಈ ಪಾರ್ಟಿ ನಡೆಯುತ್ತಿತ್ತು. ಆರ್ಯನ್​ ಖಾನ್​ ಸೇರಿ ಸಾಕಷ್ಟು ಪ್ರತಿಷ್ಠಿತ ಕುಟುಂಬದ ಮಕ್ಕಳು ಈ ಪಾರ್ಟಿಗೆ ಹಾಜರಿ ಹಾಕಿದ್ದರು. ಈ ಪಾರ್ಟಿಗೆ ಎಂಟ್ರಿ ಫೀ 80 ಸಾವಿರ ರೂಪಾಯಿ ಇದೆ ಎನ್ನುವ ಬಗ್ಗೆ ವರದಿಯಾಗಿದೆ. ರೇವ್​ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಡಿಲಿಯಾ ಕ್ರೂಸ್ ಶಿಪ್​ಮೇಲೆ ದಾಳಿ ನಡೆದಿದೆ. ಈ ವೇಳೆ ಆರ್ಯನ್​ ಅವರನ್ನು ವಶಕ್ಕೆ ಪಡೆಯಲಾಗಿದೆ. ಇಲ್ಲಿಯವರೆಗೆ ಅವರ ಬಂಧನ ಆಗಿಲ್ಲ.

ಮಗನನ್ನು ಎನ್​ಸಿಬಿ ಅವರು ವಶಕ್ಕೆ ಪಡೆಯುತ್ತಿದ್ದಂತೆ ಶಾರುಖ್​ ಖಾನ್​ಗೆ ಟೆನ್ಷನ್​ ಶುರುವಾಗಿದೆ. ಶಾರುಖ್​ ‘ಪಠಾಣ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಹಾಡಿನ ಶೂಟಿಂಗ್​ಗೆ ಅವರು ಸ್ಪೇನ್​ಗೆ ತೆರಳಬೇಕಿತ್ತು. ಆದರೆ, ಮಗನ ಭವಿಷ್ಯದ ದೃಷ್ಟಿಯಿಂದ ಸ್ಪೇನ್​ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಶಾರುಖ್​ ಮುಂಬೈನಲ್ಲಿ ಇದ್ದರೆ ಅವರೇ ಮುಂದೆನಿಂತು ಎಲ್ಲವನ್ನೂ ನೋಡಿಕೊಳ್ಳಬಹುದು. ಒಂದೊಮ್ಮೆ ಸ್ಪೇನ್​ಗೆ ತೆರಳಿದರೆ ಅಲ್ಲಿಂದ ಎಲ್ಲವನ್ನೂ ನಿಭಾಯಿಸುವುದು ಕಷ್ಟ. ಇನ್ನು, ಆರ್ಯನ್​ ವಿರುದ್ಧ ಡ್ರಗ್​ ಕೇಸ್​ ಬೀಳದಂತೆ ನೋಡಿಕೊಳ್ಳುವುದು ಶಾರುಖ್​ಗೆ ತುಂಬಾನೇ ಮುಖ್ಯ. ಒಂದೊಮ್ಮೆ ಆರ್ಯನ್​ ಪ್ರಕರಣ ದಾಖಲಾದರೆ, ಅವರ ವೃತ್ತಿ ಜೀವನಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ಶಾರುಖ್​ ಮುಂಬೈನಲ್ಲೇ ಇದ್ದು, ಮಗನನ್ನು ಈ ಪ್ರಕರಣದಿಂದ ಹೊರ ತರಲು ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:  ಡ್ರಗ್ಸ್​ ಪಾರ್ಟಿ: ಎನ್​ಸಿಬಿ ಬಲೆಗೆ ಬಿದ್ದ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ