ಜೂನಿಯರ್​ ಎನ್​ಟಿಆರ್ ಚಿತ್ರದಲ್ಲಿ ಶಾರುಖ್ ಖಾನ್; ಸಿಕ್ತು ಬಿಗ್ ಅಪ್​ಡೇಟ್

ಯಶ್ ರಾಜ್ ಫಿಲ್ಮ್ಸ್​ ಸಂಸ್ಥೆ ‘ವಾರ್ 2’ ಚಿತ್ರಕ್ಕೆ ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಆ್ಯಕ್ಷನ್ ದೃಶ್ಯಗಳನ್ನು ಮುಂಬೈನಲ್ಲಿ ಶೂಟ್ ಮಾಡಲಾಗುತ್ತಿದೆ. 40ಕ್ಕೂ ಅಧಿಕ ಮಂದಿಯ ಜೊತೆ ಜೂನಿಯರ್ ಎನ್​ಟಿಆರ್ ಫೈಟ್ ಮಾಡುವ ದೃಶ್ಯ ಇರಲಿದೆ.  

ಜೂನಿಯರ್​ ಎನ್​ಟಿಆರ್ ಚಿತ್ರದಲ್ಲಿ ಶಾರುಖ್ ಖಾನ್; ಸಿಕ್ತು ಬಿಗ್ ಅಪ್​ಡೇಟ್
ಶಾರುಖ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Oct 22, 2024 | 10:49 AM

‘ವಾರ್’ ಸಿನಿಮಾ ಗೆಲುವಿನ ಬಳಿಕ ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ‘ವಾರ್ 2’ ಸಿನಿಮಾ ಶೂಟ್​ನಲ್ಲಿ ತೊಡಗಿಕೊಂಡಿದೆ. ಈ ಚಿತ್ರದಲ್ಲಿ ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್​ ಹಾಗೂ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಅಯಾನ್ ಮುಖರ್ಜಿ ನಿರ್ದೇಶನ ಮಾಡುತ್ತಿದ್ದು, ಆ್ಯಕ್ಷನ್​ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಈಗ ಸದ್ಯ ಮುಂಬೈನಲ್ಲಿ ಈ ಸಿನಿಮಾದ ಶೂಟ್ ನಡೆಯುತ್ತಿದೆ. ಈ ಚಿತ್ರದಲ್ಲಿ ಹೃತಿಕ್ ಅತಿಥಿ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ.

ಯಶ್ ರಾಜ್ ಫಿಲ್ಮ್ಸ್​ ಸಂಸ್ಥೆ ‘ವಾರ್ 2’ ಚಿತ್ರಕ್ಕೆ ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಆ್ಯಕ್ಷನ್ ದೃಶ್ಯಗಳನ್ನು ಮುಂಬೈನಲ್ಲಿ ಶೂಟ್ ಮಾಡಲಾಗುತ್ತಿದೆ. 40ಕ್ಕೂ ಅಧಿಕ ಮಂದಿಯ ಜೊತೆ ಜೂನಿಯರ್ ಎನ್​ಟಿಆರ್ ಫೈಟ್ ಮಾಡುವ ದೃಶ್ಯ ಇರಲಿದೆ.

‘ವಾರ್’ ಚಿತ್ರದಲ್ಲಿ ಈಗಾಗಲೇ ಹೃತಿಕ್ ಪಾತ್ರ ಹೈಲೈಟ್ ಆಗಿದೆ. ಹೀಗಾಗಿ, ‘ವಾರ್ 2’ ಚಿತ್ರದಲ್ಲಿ ಮತ್ತೆ ಆರಂಭದಿಂದ ಅವರ ಪಾತ್ರಕ್ಕೆ ಬಿಲ್ಡಪ್ ಕೊಡಬೇಕು ಎಂಬುದಿಲ್ಲ. ಆದರೆ, ಜೂನಿಯರ್ ಎನ್​ಟಿಆರ್ ಪಾತ್ರಕ್ಕೆ ಹಾಗಲ್ಲ. ಅವರ ಪಾತ್ರವನ್ನು ಹೆಚ್ಚು ಹೈಲೈಟ್ ಮಾಡುವುದು ಅನಿವಾರ್ಯ ಆಗಿದೆ. ಈ ಕಾರಣದಿಂದಲೇ ಅಯಾನ್ ಮುಖರ್ಜಿ ಅವರು ಹೆಚ್ಚು ರಾ ಆಗಿ ತಾರಕ್ ಪಾತ್ರವನ್ನು ತೋರಿಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಮೂರು ದಿನಗಳ ಕಾಲ ಶೂಟ್ ನಡೆಯಲಿದ್ದು, ಇದರಲ್ಲಿ ಸಂಪೂರ್ಣವಾಗಿ ಬಿಲ್ಡಪ್​ ದೃಶ್ಯಗಳ ಶೂಟ್ ಇರಲಿದೆ.

‘ಯಶ್ ರಾಜ್ ಫಿಲ್ಮ್ಸ್​’ ಸ್ಪೈ ಯೂನಿವರ್ಸ್ ಮಾಡಿದೆ. ಇದರ ಅಡಿಯಲ್ಲೇ ‘ವಾರ್’, ‘ಪಠಾಣ್’, ‘ಟೈಗರ್’ ಸಿನಿಮಾಗಳು ಬರುತ್ತವೆ. ಹೀಗಾಗಿ, ‘ವಾರ್ 2’ ಚಿತ್ರದಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರ ಮಾಡಬಹುದು ಎಂದು ಊಹಿಸಲಾಗಿದೆ.

ಇದನ್ನೂ ಓದಿ: ಕುಳಿತಲ್ಲೇ ನಿದ್ರಿಸುತ್ತಾರೆ ಸಂಜಯ್ ದತ್; ಅನಿವಾರ್ಯವಾಗಿ ಜೈಲಿನಲ್ಲಿ ಕಲಿತ ತಂತ್ರವಿದು  

‘ವಾರ್ 2’ ಶೂಟ್ ಭರದಿಂದ ಸಾಗುತ್ತಿದೆ. ಮುಂದಿನ ವರ್ಷದ ಮೇ ಅಂತ್ಯದಲ್ಲಿ ಶೂಟಿಂಗ್ ಪೂರ್ಣಗೊಳಿಸುವ ಆಲೋಚನೆ ಅವರಿಗೆ ಇದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 2025ರಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರವು ಹಲವು ಭಾಷೆಗೆ ಡಬ್ ಆಗಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್