ತಿರುಪತಿಗೆ ಭೇಟಿ ನೀಡಲು ರೆಡಿ ಆದ ಶಾರುಖ್ ಖಾನ್; ವ್ಯಕ್ತವಾಗುತ್ತಿದೆ ಭಾರೀ ವಿರೋಧ

ಶಾರುಖ್ ಖಾನ್ ಅವರ ಪತ್ನಿ ಗೌರಿ ಹಿಂದೂ ಆಗಿದ್ದರು. ಈ ಕಾರಣದಿಂದ ಶಾರುಖ್ ಖಾನ್ ಹಿಂದೂ ಧರ್ಮದ ಬಗ್ಗೆ ಒಲವು ಹೊಂದಿದ್ದಾರೆ. ಅವರು ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸುತ್ತಾರೆ. ಈ ಮೊದಲು ಅವರು ಅನೇಕ ದೇವಾಲಯಗಳಿಗೆ ಭೇಟಿ ನೀಡಿದ್ದರು. ಈಗ ಅವರು ತಿರುಪತಿಗೆ ಭೇಟಿ ನೀಡಲು ರೆಡಿ ಆಗಿದ್ದಾರೆ.

ತಿರುಪತಿಗೆ ಭೇಟಿ ನೀಡಲು ರೆಡಿ ಆದ ಶಾರುಖ್ ಖಾನ್; ವ್ಯಕ್ತವಾಗುತ್ತಿದೆ ಭಾರೀ ವಿರೋಧ
ಶಾರುಖ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on:Sep 05, 2023 | 8:06 AM

ನಟ ಶಾರುಖ್ ಖಾನ್ (Shah Rukh Khan) ಅವರು ಹಿಂದೂ ಧರ್ಮದ ಬಗ್ಗೆ, ಹಿಂದೂ ದೇವರ ಬಗ್ಗೆ ನಂಬಿಕೆ ಹೊಂದಿದ್ದಾರೆ. ‘ಪಠಾಣ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಅವರು ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದರು. ಈಗ ‘ಜವಾನ್’ ರಿಲೀಸ್ ವೇಳೆಯೂ ಅವರು ಇದನ್ನೇ ಮಾಡುತ್ತಿದ್ದಾರೆ. ಇತ್ತೀಚೆಗೆ ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ಮಂದಿರಕ್ಕೆ ಶಾರುಖ್ ಭೇಟಿ ನೀಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಈಗ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಅವರು ರೆಡಿ ಆಗಿದ್ದಾರೆ. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಶಾರುಖ್ ಖಾನ್ ಅವರ ಪತ್ನಿ ಗೌರಿ ಹಿಂದೂ ಆಗಿದ್ದರು. ಈ ಕಾರಣದಿಂದ ಶಾರುಖ್ ಖಾನ್ ಹಿಂದೂ ಧರ್ಮದ ಬಗ್ಗೆ ಒಲವು ಹೊಂದಿದ್ದಾರೆ. ಅವರು ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶನ ಮೂರ್ತಿಗೆ ಪೂಜೆ ಸಲ್ಲಿಸುತ್ತಾರೆ. ಈ ಮೊದಲು ಅವರು ಅನೇಕ ದೇವಾಲಯಗಳಿಗೆ ಭೇಟಿ ನೀಡಿದ್ದರು. ಈಗ ಅವರು ತಿರುಪತಿಗೆ ಭೇಟಿ ನೀಡಲು ರೆಡಿ ಆಗಿದ್ದಾರೆ.

ಸೆಪ್ಟೆಂಬರ್ 4ರಂದು ಶಾರುಖ್ ಖಾನ್ ಅವರು ತಿರುಪತಿಗೆ ಆಗಮಿಸಿದ್ದಾರೆ. ಇಂದು (ಸೆಪ್ಟೆಂಬರ್ 5) ಶಾರುಖ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ. ಆದರೆ, ಇದನ್ನು ಕೆಲವರು ವಿರೋಧಿಸಿದ್ದಾರೆ. ‘ದೇವಸ್ಥಾನದ ಆಡಳಿಯ ಮಂಡಳಿಯವರು ಇವರುಗಳನ್ನು ಏಕೆ ಸೇರಿಸಿಕೊಳ್ಳಬೇಕು’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಶಾರುಖ್ ಖಾನ್ ಅವರಿಗೆ ದೇವಸ್ಥಾನದ ಒಳಗೆ ಪ್ರವೇಶ ನೀಡಬಾರದು ಎಂದು ಅನೇಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ಶಾರುಖ್​ ಖಾನ್​ಗೆ ಹೇಳಿ ಜವಾನ್​ ಚಿತ್ರದ ಟಿಕೆಟ್​ ಕೊಡಿಸಿ ಪ್ಲೀಸ್​’: ವಿವೇಕ್​ ಅಗ್ನಿಹೋತ್ರಿ ಬಹಿರಂಗ ಮನವಿ

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈಗಾಗಲೇ ಅಡ್ವಾನ್ಸ್ ಬುಕಿಂಗ್​ನಲ್ಲಿ ಸಿನಿಮಾ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಅಟ್ಲಿ ನಿರ್ದೇಶನ ಇದೆ. ನಯನತಾರಾ, ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಸಾನ್ಯಾ ಮಲ್ಹೋತ್ರಾ ಮೊದಲಾದವರು ಈ ಚಿತ್ರದಲ್ಲಿ ಮುಖ್ಯಪಾತ್ರ ನಿಭಾಯಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:46 am, Tue, 5 September 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ