AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ನೋಡಲು ರೋಲ್ಸ್ ರಾಯ್ಸ್​ನಲ್ಲಿ ಬಂದ ಶಾರುಖ್ ಖಾನ್

ನಟಿ ದೀಪಿಕಾ ಪಡುಕೋಣೆ ಅವರು ತಾಯಿಯಾದ ಸುದ್ದಿ ತಿಳಿದು ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಖುಷಿ ಆಗಿದೆ. ಸೆಪ್ಟೆಂಬರ್​ 8ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಪಡುಕೋಣೆ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಕೇಶ್ ಅಂಬಾನಿ ಅವರು ಆಸ್ಪತ್ರೆಗೆ ತೆರಳಿ ತಾಯಿ-ಮಗುವನ್ನು ನೋಡಿಬಂದಿದ್ದಾರೆ. ಈಗ ಶಾರುಖ್ ಖಾನ್ ಕೂಡ ದೀಪಿಕಾನ ಭೇಟಿ ಮಾಡಿದ್ದಾರೆ.

ದೀಪಿಕಾ ಪಡುಕೋಣೆ ನೋಡಲು ರೋಲ್ಸ್ ರಾಯ್ಸ್​ನಲ್ಲಿ ಬಂದ ಶಾರುಖ್ ಖಾನ್
ಶಾರುಖ್ ಖಾನ್-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on:Sep 13, 2024 | 10:08 AM

Share

ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಕೋಸ್ಟಾರ್​ಗಳಾಗಿ ಗಮನ ಸೆಳೆದಿದ್ದಾರೆ. ಮುಂಬೈನ ಎಚ್​ಎನ್​ ರಿಲೈನ್ಸ್ ಫೌಂಡೇಷನ್ ಆಸ್ಪತ್ರೆಯಲ್ಲಿ ದೀಪಿಕಾ ಅವರು ಸೆಪ್ಟೆಂಬರ್ 8ರಂದು ಮಗಳಿಗೆ ಜನ್ಮನೀಡಿದರು. ಈಗ ಶಾರುಖ್ ಖಾನ್ ಅವರು ದೀಪಿಕಾನ ಭೇಟಿ ಆಗಿದ್ದಾರೆ. ತಾಯಿ ಹಾಗೂ ಮಗುವಿನ ಆರೋಗ್ಯ ವಿಚಾರಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಅವರು ತಮ್ಮ ರೋಲ್ಸ್ ರಾಯ್ಸ್​ನಲ್ಲಿ ಆಗಮಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಅವರು ದೀಪಿಕಾ-ರಣವೀರ್ ಅವರನ್ನು ಮಾತನಾಡಿಸಿದ್ದಾರೆ. ಮಗುವನ್ನು ನೋಡಿ ಹರಸಿದ್ದಾರೆ. ಈ ದಂಪತಿಗೆ ಅನೇಕ ಗಣ್ಯರು ಬಂದು ಶುಭಾಶಯ ಕೋರುತ್ತಾ ಇದ್ದಾರೆ. ಇತ್ತೀಚೆಗೆ ಮುಕೇಶ್ ಅಂಬಾನಿ ಅವರು ಆಸ್ಪತ್ರೆಗೆ ತೆರಳಿ ದಂಪತಿಗೆ ಶುಭ ಕೋರಿದ್ದರು.

ದೀಪಿಕಾ ಹಾಗೂ ರಣವೀರ್ ಅವರು ಇನ್​ಸ್ಟಾಗ್ರಾಮ್ ಮೂಲಕ ಮಗುವಿನ ಆಗಮನದ ಬಗ್ಗೆ ಮಾಹಿತಿ ನೀಡಿದ್ದರು. ಈ ಪೋಸ್ಟ್​ಗೆ ಆಲಿಯಾ ಭಟ್, ಪ್ರಿಯಾಂಕಾ ಚೋಪ್ರಾ, ಕತ್ರಿನಾ ಕೈಫ್. ಸಾರಾ ಅಲಿ ಖಾನ್ ಸೇರಿದಂತೆ ಅನೇಕರು ದಂಪತಿಗೆ ಶುಭಾಶಯ ತಿಳಿಸಿದ್ದಾರೆ.

ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ‘ಓಂ ಶಾಂತಿ ಓಂ’ ಚಿತ್ರದಿಂದ ಹಿಡಿದು ಇತ್ತೀಚೆಗೆ ರಿಲೀಸ್ ಆದ ‘ಪಠಾಣ್’ ಸಿನಿಮಾದವರೆಗೆ ಅನೇಕ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರ ಜೋಡಿಯನ್ನು ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಮಗುವಿಗಾಗಿ ದುಬೈನಲ್ಲಿ ಶಾಪಿಂಗ್ ಮಾಡಿ ಟ್ರೋಲ್ ಆದ ರಾಖಿ ಸಾವಂತ್

ದೀಪಿಕಾ ಪಡುಕೋಣೆ ಅವರು ಸದ್ಯಕ್ಕೆ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಿದ್ದಾರೆ. ಅವರು ಮಗುವಿನ ಆರೈಕೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳಲಿದ್ದಾರೆ. ಈಗ ಅವರ ಕೈಯಲ್ಲಿ ಯಾವುದೇ ಸಿನಿಮಾ ಇಲ್ಲ. ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​ನಲ್ಲಿ ದೀಪಿಕಾ ಕೂಡ ಇರುವ ಅನಿವಾರ್ಯತೆ ಇರುವುದರಿಂದ ಅವರು ಆ ಸಿನಿಮಾನ ಮಾಡಲೇಬೇಕಿದೆ. 2025ರ ಮಾರ್ಚ್​ ವೇಳೆಗೆ ಅವರು ಶೂಟಿಂಗ್ ಆರಂಭಿಸೋ ಸಾಧ್ಯತೆ ಇದೆ. ರಣವೀರ್ ಸಿಂಗ್ ಕೂಡ ಕೆಲಸಕ್ಕೆ ರಜೆ ತೆಗೆದುಕೊಂಡಿದ್ದಾರೆ. ಅವರು ‘ಸಿಂಗಂ ಅಗೇನ್’, ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಡಾನ್ 3’ ಚಿತ್ರಕ್ಕೆ ಕಿಯಾರಾ ಅಡ್ವಾಣಿ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:49 am, Fri, 13 September 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!