ನಟ ಶಾರುಖ್ ಖಾನ್ (Shah Rukh Khan) ಅವರು ಹಲವು ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅನೇಕ ಕಡೆಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ‘ಪಠಾಣ್’ ಸಿನಿಮಾದ ಯಶಸ್ಸಿನ ಬಳಿಕ ಅವರು ಸಖತ್ ಬ್ಯುಸಿ ಆಗಿದ್ದಾರೆ. ಈ ಚಿತ್ರ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದರೂ ಕೂಡ ಶಾರುಖ್ ಖಾನ್ ವಿಶ್ರಾಂತಿ ಪಡೆಯುವ ಮೂಡ್ನಲ್ಲಿ ಇಲ್ಲ. ಸ್ವಲ್ಪವೂ ಬ್ರೇಕ್ ನೀಡದೇ ಅವರು ಮುಂದಿನ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ಕಾಶ್ಮೀರಕ್ಕೆ (Kashmir) ತೆರಳಿದ್ದಾರೆ. ಆ ಸಂದರ್ಭದ ವಿಡಿಯೋಗಳು ವೈರಲ್ ಆಗಿವೆ. ಮುಂಬೈನಿಂದ ಏಕಾಏಕಿ ಕಾಶ್ಮೀರಕ್ಕೆ ಶಾರುಖ್ ಅವರು ಪ್ರಯಾಣ ಬೆಳೆಸಿದ್ದು ಯಾಕೆ? ಅದಕ್ಕೆ ಅವರ ಕಡೆಯಿಂದ ಉತ್ತರ ಸಿಕ್ಕಿಲ್ಲ. ಮೂಲಗಳ ಪ್ರಕಾರ ಅವರು ‘ಡಂಕಿ’ ಸಿನಿಮಾದ (Dunki Movie) ಶೂಟಿಂಗ್ ಸಲುವಾಗಿ ಕಾಶ್ಮೀರಕ್ಕೆ ತೆರಳಿದ್ದಾರೆ. ಅಲ್ಲಿನ ಜನರು ಬಹಳ ಪ್ರೀತಿಯಿಂದ ಅವರನ್ನು ಬರಮಾಡಿಕೊಂಡಿದ್ದಾರೆ.
ಶಾರುಖ್ ಖಾನ್ ಅವರು ಬಹಳ ವರ್ಷಗಳ ನಂತರ ಕಾಶ್ಮೀರಕ್ಕೆ ತೆರಳಿರುವುದರಿಂದ ಈ ಭೇಟಿ ವಿಶೇಷ ಎನಿಸಿಕೊಂಡಿದೆ. 2012ರಲ್ಲಿ ‘ಜಬ್ ತಕ್ ಹೈ ಜಾನ್’ ಸಿನಿಮಾದ ಶೂಟಿಂಗ್ಗಾಗಿ ಅವರು ಕಾಶ್ಮೀರಕ್ಕೆ ಹೋಗಿದ್ದರು. ಈಗ ಬರೋಬ್ಬರಿ 11 ವರ್ಷಗಳ ಬಳಿಕ ಅವರು ಅಲ್ಲಿಗೆ ತೆರಳಿದ್ದಾರೆ. ಅಲ್ಲಿನ ರೆಸಾರ್ಟ್ಗೆ ಅವರು ಬರುತ್ತಿದ್ದಂತೆಯೇ ಭರ್ಜರಿ ಸ್ವಾಗತ ಕೋರಲಾಗಿದೆ. ಹೂಗುಚ್ಛ ನೀಡಿ, ಶಾಲು ಹೊದಿಸಿ ಅವರನ್ನು ಬರಮಾಡಿಕೊಳ್ಳಲಾಗಿದೆ. ಶಾರುಖ್ ಖಾನ್ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಹಲವು ವರ್ಷಗಳ ಬಳಿಕ ಕಾಶ್ಮೀರಕ್ಕೆ ಬಂದಿರುವ ಶಾರುಖ್ ಖಾನ್ ಅವರನ್ನು ನೋಡಲು ಅಲ್ಲಿನ ಫ್ಯಾನ್ಸ್ ಮುಗಿಬಿದ್ದಿದ್ದಾರೆ.
Shah Rukh Khan: ಶಾರುಖ್ ಮೊದಲ ಮನೆ ಖರೀದಿಸಿದಾಗ ಹೇಗಿತ್ತು ಪರಿಸ್ಥಿತಿ? ಕಷ್ಟದ ದಿನಗಳ ನೆನಪಿಸಿಕೊಂಡ ನಟ
ಅಭಿಮಾನಿಗಳ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅದನ್ನು ನೋಡಿ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಡಂಕಿ’ ಸಿನಿಮಾಗೆ ರಾಜ್ಕುಮಾರ್ ಹಿರಾನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘3 ಈಡಿಯಟ್ಸ್’, ‘ಪಿಕೆ’, ‘ಸಂಜು’ ಮುಂತಾದ ಸೂಪರ್ ಹಿಟ್ ಸಿನಿಮಾ ನೀಡಿದ ಅವರ ಕಸುಬಿನ ಬಗ್ಗೆ ಎಲ್ಲರಿಗೂ ಭರವಸೆ ಇದೆ. ಹಾಗಾಗಿ ಈಗ ‘ಡಂಕಿ’ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ.
Shah Rukh Khan spotted entering the hotel in Sonamarg ? pic.twitter.com/CL7CBwsv9d
— Aryan (@tumhidekhonaa) April 24, 2023
‘ಡಂಕಿ’ ಮಾತ್ರವಲ್ಲದೇ ‘ಜವಾನ್’ ಸಿನಿಮಾದಲ್ಲೂ ಶಾರುಖ್ ಖಾನ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅಟ್ಲಿ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಶಾರುಖ್ ಖಾನ್ಗೆ ಜೋಡಿಯಾಗಿ ನಯನತಾರಾ ಅಭಿನಯಿಸಿದ್ದಾರೆ. ಜೂನ್ 2ರಂದು ಬಿಡುಗಡೆ ಆಗಲಿರುವ ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.