AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಕೋಟಿ ಆಸ್ತಿ ಇದ್ದರೂ ಸರಳತೆ ಬಯಸುವ ಶಾರುಖ್ ಪತ್ನಿಯ ಜೀವನ ಶೈಲಿ ಹೇಗಿದೆ?

ಶಾರುಖ್​ ಖಾನ್​ ಅವರ ಪತ್ನಿ ಗೌರಿ ಖಾನ್​ ಅವರು ನಿರ್ಮಾಪಕಿಯಾಗಿ ಬ್ಯುಸಿ ಆಗಿದ್ದಾರೆ. ಅಲ್ಲದೇ, ಇಂಟೀರಿಯರ್​ ಡಿಸೈನರ್​ ಆಗಿಯೂ ಅವರು ಬೇಡಿಕೆ ಹೊಂದಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ದಿನಚರಿಯ ಬಗ್ಗೆ ಅವರು ಮಾತನಾಡಿದ್ದಾರೆ. ‘ಮಕ್ಕಳು ನನ್ನ ಮೊದಲ ಆದ್ಯತೆ’ ಎಂದು ಗೌರಿ ಖಾನ್​ ಹೇಳಿದ್ದಾರೆ.

ಸಾವಿರಾರು ಕೋಟಿ ಆಸ್ತಿ ಇದ್ದರೂ ಸರಳತೆ ಬಯಸುವ ಶಾರುಖ್ ಪತ್ನಿಯ ಜೀವನ ಶೈಲಿ ಹೇಗಿದೆ?
ಶಾರುಖ್​ ಖಾನ್​, ಗೌರಿ ಖಾನ್​
ಮದನ್​ ಕುಮಾರ್​
|

Updated on: Feb 27, 2024 | 7:01 PM

Share

ಬಾಲಿವುಡ್ ನಟ ಶಾರುಖ್​ ಖಾನ್​ (Shah Rukh Khan) ಅವರು ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಅವರ ಪತ್ನಿ ಗೌರಿ ಖಾನ್​ ಅವರು ಇಂಟೀರಿಯರ್​ ಡಿಸೈನರ್​ ಆಗಿ ಗುರುತಿಸಿಕೊಂಡಿದ್ದಾರೆ. ಮುಂಬೈನಲ್ಲಿರುವ ‘ಮನ್ನತ್​’ ಬಂಗಲೆಯಲ್ಲಿ ಅವರ ಜೀವನ ಐಷಾರಾಮಿ ಆಗಿರುತ್ತದೆ. ಹಾಗಿದ್ದರೂ ಕೂಡ ಶಾರುಖ್​ ಪತ್ನಿ ಗೌರಿ ಖಾನ್​ (Gauri Khan) ಅವರು ‘ನನ್ನದು ಸಿಂಪಲ್​ ಜೀವನ’ ಎಂದು ಹೇಳಿದ್ದಾರೆ. ಅದಕ್ಕೆ ತಕ್ಕಂತೆ ಅವರು ದಿನಚರಿ ರೂಢಿಸಿಕೊಂಡಿದ್ದಾರೆ. ಆ ಬಗ್ಗೆ ಅವರು ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಶಾರುಖ್​ ಖಾನ್​ ಅವರಿಂದಾಗಿ ತಮ್ಮ ಜೀವನ ಶೈಲಿ ಕೂಡ ಬದಲಾಗಿದೆ ಎಂದು ಅವರು ಹೇಳಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ಶಾರುಖ್​ ಖಾನ್​ ಅವರು ಮುಂಜಾನೆ ಬೇಗ ಏಳುವ ವ್ಯಕ್ತಿಯಲ್ಲ. ರಾತ್ರಿ ಎಷ್ಟು ಹೊತ್ತಿನ ತನಕ ಬೇಕಿದ್ದರೂ ಅವರು ಕೆಲಸ ಮಾಡುತ್ತಾರೆ. ಪಾರ್ಟಿಯಲ್ಲಿ ಭಾಗಿ ಆಗುತ್ತಾರೆ, ಮನೆಗೆ ಬಂದ ಅತಿಥಿಗಳನ್ನು ಸತ್ಕರಿಸುತ್ತಾರೆ. ಇಷ್ಟೆಲ್ಲ ಮುಗಿದು ಮಲಗುವ ವೇಳೆಗೆ ನಸುಕಿನ ಸಮಯ ಆಗಿರುತ್ತದೆ. ಹಾಗಾಗಿ ಅವರು ಮರುದಿನ ಏಳುವುದು ತಡವಾಗುತ್ತದೆ. ಗಾರಿ ಖಾನ್​ ಅವರಿಗೂ ಅದೇ ರೂಢಿ ಆಗಿದೆ.

‘ನಾನು ಬೇಗ ಏಳುವವಳಲ್ಲ. ಯಾಕೆಂದರೆ, ನಮ್ಮ ಮನೆಯವರೆಲ್ಲ ತಡರಾತ್ರಿ ತನಕ ಎಚ್ಚರವಾಗಿರುತ್ತಾರೆ. ಹಾಗಾಗಿ ನಾನು ಮರುದಿನ ಬೆಳಗ್ಗೆ 10 ಗಂಟೆಗೆ ಏಳುತ್ತೇನೆ. ಬೆಳಗ್ಗೆ ಕಾಫಿ ಕುಡಿಯುತ್ತೇನೆ. ನಂತರ ಜಿಮ್​, ಊಟ, ಕೆಲಸ ಮಾಡುತ್ತೇನೆ. ಮಕ್ಕಳು ನನ್ನ ಮೊದಲ ಆದ್ಯತೆ. ಅಬ್ರಾಮ್​ ಮಧ್ಯಾಹ್ನ ಊಟಕ್ಕೆ 3 ಗಂಟೆಗೆ ಬರುತ್ತಾನೆ. ಅವನ ಜೊತೆ ಸಮಯ ಕಳೆಯುತ್ತೇನೆ. ನಂತರ ಕೆಲಸಕ್ಕೆ ತೆರಳುತ್ತೇನೆ. ರಾತ್ರಿ ಊಟದ ವೇಳೆ ಮನೆಗೆ ಮರಳುತ್ತೇನೆ. ಇದು ನನ್ನ ಸರಳವಾದ ಜೀವನ’ ಎಂದು ಗೌರಿ ಖಾನ್​ ಹೇಳಿದ್ದಾರೆ.

ಇದನ್ನೂ ಓದಿ: 10 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಖರೀದಿಸಿದ ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​

ಪ್ರತಿ ದಿನ ಸಂಜೆ 7.30ಕ್ಕೆ ಮನೆಗೆ ವಾಪಸ್​ ಬರಬೇಕು ಎಂದು ಗೌರಿ ಖಾನ್​ ಬಯಸುತ್ತಾರೆ. ಆದರೆ ಕೆಲವೊಮ್ಮೆ ಕೆಲಸ ತಡವಾಗುತ್ತದೆ ಎಂದು ಅವರು ಹೇಳಿದ್ದಾರೆ. ನಿರ್ಮಾಪಕಿ ಆಗಿಯೂ ಅವರು ಬ್ಯುಸಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆಯಾದ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಕೆಲಸಗಳನ್ನು ಅವರು ನೋಡಿಕೊಳ್ಳುತ್ತಾರೆ. ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಅವರು ಪತಿ-ಪತ್ನಿಯಾಗಿ 1991ರಿಂದ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇಬ್ಬರ ನಡುವೆ ಹೊಂದಾಣಿಕೆ ಚೆನ್ನಾಗಿದೆ. ಪರಸ್ಪರ ವೃತ್ತಿ ಜೀವನಕ್ಕೆ ಅವರು ಬೆಂಬಲವಾಗಿ ನಿಂತಿದ್ದಾರೆ. ಬಹಳ ಕಷ್ಟಪಟ್ಟು ಮೇಲಕ್ಕೆ ಬಂದಿರುವ ಅವರು ಅನೇಕರಿಗೆ ಮಾದರಿ ಆಗಿದ್ದಾರೆ. 2023ರಲ್ಲಿ ಶಾರುಖ್​ ಖಾನ್​ ಅವರು ‘ಜವಾನ್​’, ‘ಪಠಾಣ್​’ ಹಾಗೂ ‘ಡಂಕಿ’ ಸಿನಿಮಾಗಳಿಗೆ ಗೆಲುವು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು