AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಗಂಡನಿಗಿಂತ ನಿಮ್ಮನ್ನು ಹೆಚ್ಚು ಪ್ರೀತಿಸುವೆ’ ಎಂದ ಮಹಿಳಾ ಅಭಿಮಾನಿ; ಶಾರುಖ್ ಖಾನ್ ಉತ್ತರ ಏನು?

ಖ್ಯಾತ ನಟ ಶಾರುಖ್ ಖಾನ್ ಜನಿಸಿದ್ದು ದೆಹಲಿಯಲ್ಲಾದರೂ, ಅವರ ಬಾಲ್ಯದ ಮೊದಲ 5 ವರ್ಷಗಳನ್ನು ಮಂಗಳೂರಿನಲ್ಲಿ ಕಳೆದಿದ್ದರು. ಆದ್ದರಿಂದ ಅವರಿಗೆ ಈ ಊರಿನ ಬಗ್ಗೆ ವಿಶೇಷ ಪ್ರೀತಿ ಇದೆ. ಖಾಸಗಿ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿರುವ ಅವರು ಅಭಿಮಾನಿಗಳ ಜೊತೆ ಸಂವಾದ ನಡೆಸಿದರು.

‘ನನ್ನ ಗಂಡನಿಗಿಂತ ನಿಮ್ಮನ್ನು ಹೆಚ್ಚು ಪ್ರೀತಿಸುವೆ’ ಎಂದ ಮಹಿಳಾ ಅಭಿಮಾನಿ; ಶಾರುಖ್ ಖಾನ್ ಉತ್ತರ ಏನು?
Shah Rukh Khan
ಮದನ್​ ಕುಮಾರ್​
|

Updated on: Jun 26, 2026 | 7:04 PM

Share

ಮುಖ್ಯಾಂಶಗಳು

  • ಮಂಗಳೂರಿನಲ್ಲಿ ಅಭಿಮಾನಿಗಳ ಜೊತೆ ಸಂವಾದ ನಡೆಸಿದ ಶಾರುಖ್ ಖಾನ್.
  • ಮಹಿಳಾ ಅಭಿಮಾನಿಯ ಪ್ರೀತಿ ಭರಿತ ಮಾತುಗಳಿಗೆ ಕಿಂಗ್ ಖಾನ್ ಉತ್ತರ.
  • ಶಾರುಖ್ ಖಾನ್ ಹೇಳಿದ ಮಾತುಗಳನ್ನು ಕೇಳಿ ಫಿದಾ ಆದ ಅಭಿಮಾನಿಗಳು.

ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ (Shah Rukh Khan) ಅವರ ಸಮಯಪ್ರಜ್ಞೆ ಮತ್ತು ಹಾಸ್ಯ ಪ್ರಜ್ಞೆ ಎಂಥದ್ದು ಎಂಬುದು ಎಲ್ಲರಿಗೂ ಗೊತ್ತು. ಇತ್ತೀಚೆಗೆ ಮಂಗಳೂರಿನಲ್ಲಿ (Mangalore) ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಅನಿರೀಕ್ಷಿತವಾಗಿ ವ್ಯಕ್ತಪಡಿಸಿದ ಪ್ರೀತಿಯ ಮಾತು, ಇಡೀ ಸಂಜೆಯ ಅತ್ಯಂತ ತಮಾಷೆಯ ಕ್ಷಣವಾಗಿ ಬದಲಾಯಿತು. ಆ ಅಭಿಮಾನಿ, ‘ನಾನು ನನ್ನ ಗಂಡನಿಗಿಂತಲೂ ನಿಮ್ಮನ್ನು ಹೆಚ್ಚಾಗಿ ಪ್ರೀತಿಸುತ್ತೇನೆ’ ಎಂದು ವೇದಿಕೆ ಮೇಲಿದ್ದ ಶಾರುಖ್ ಅವರಿಗೆ ಹೇಳಿದರು. ಇದಕ್ಕೆ ಕಿಂಚಿತ್ತೂ ತಡಮಾಡದ ಶಾರುಖ್, ‘ಇದನ್ನೆಲ್ಲಾ ನೀವು ನನಗೆ ಖಾಸಗಿಯಾಗಿ ಹೇಳಬೇಕಿತ್ತು’ ಎಂದು ಹಾಸ್ಯ ಚಟಾಕಿ ಹಾರಿಸುವ ಮೂಲಕ ಇಡೀ ಸಭಿಕರು ನಗೆಗಡಲಲ್ಲಿ ತೇಲುವಂತೆ ಮಾಡಿದರು.

ರಿಯಲ್ ಎಸ್ಟೇಟ್ ಕಂಪನಿಯೊಂದು ಮಂಗಳೂರಿನಲ್ಲಿ ಆಯೋಜಿಸಿದ್ದ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾರುಖ್ ಖಾನ್ ಅವರು ಕರ್ನಾಟಕದ ಕರಾವಳಿ ನಗರಿಗೆ ಆಗಮಿಸಿದ್ದರು. ತಮ್ಮ ಸೂಪರ್ ಹಿಟ್ ಹಾಡುಗಳಿಗೆ ಭರ್ಜರಿ ಹೆಜ್ಜೆ ಹಾಕಿದ ಕಿಂಗ್ ಖಾನ್, ನೆರೆದಿದ್ದ ಪ್ರೇಕ್ಷಕರೊಂದಿಗೆ ಸಖತ್ ಆಗಿ ಸಂವಾದ ನಡೆಸಿದರು. ಆ ಸಂದರ್ಭದ ವಿಡಿಯೋಗಳು ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯಕ್ರಮದ ಹಲವು ವಿಡಿಯೋಗಳು ಹರಿದಾಡುತ್ತಿವೆ. ಅದರಲ್ಲಿ ಮಹಿಳಾ ಅಭಿಮಾನಿಯೊಬ್ಬರು ತಮಗಿರುವ ಅಪಾರ ಪ್ರೀತಿಯನ್ನು ವ್ಯಕ್ತಪಡಿಸಿದಾಗ, ಶಾರುಖ್ ಖಾನ್ ತಮ್ಮದೇ ಆದ ಸಿಗ್ನೇಚರ್ ಸ್ಟೈಲ್‌ನಲ್ಲಿ ನಗುತ್ತಾ, ‘ಯೇ ಸಬ್ ಅಕೇಲೆ ಮೇ ಬತಾನಾ ಚಾಹಿಯೇ ನಾ (ಇದೆಲ್ಲವನ್ನೂ ರಹಸ್ಯವಾಗಿ ಒಂಟಿಯಾಗಿ ಇದ್ದಾಗ ಹೇಳಬೇಕಿತ್ತು)’ ಎಂದು ಹಿಂದಿಯಲ್ಲಿ ಕಾಲೆಳೆದರು.

ನಂತರ ಗಂಭೀರವಾಗಿ ಮಾತನಾಡಿದ ಅವರು, ‘ಇದು ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ರೀತಿ ಎಂದು ನನಗೆ ಗೊತ್ತು. ನಿಮ್ಮ ಭಾವನೆಗಳು ನನಗೆ ಅರ್ಥವಾಗುತ್ತವೆ. ನಿಮ್ಮ ಪತಿಗೂ ಇದು ಖಂಡಿತ ಅರ್ಥವಾಗುತ್ತದೆ ಎಂದು ಭಾವಿಸುತ್ತೇನೆ. ನಾನು ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ. ನಿಮ್ಮ ಪತಿ ಹಾಗೂ ನಿಮ್ಮ ಇಡೀ ಕುಟುಂಬಕ್ಕೆ ನನ್ನ ಪ್ರೀತಿ. ತುಂಬಾ ಧನ್ಯವಾದಗಳು’ ಎಂದು ಅಭಿಮಾನಿಯ ಗೌರವವನ್ನು ಹೆಚ್ಚಿಸಿದರು.

ಇದನ್ನೂ ಓದಿ: ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ

ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ‘ನಮಸ್ಕಾರ’ ಎಂದು ಮಾತು ಆರಂಭಿಸಿದ ಶಾರುಖ್, ಕರಾವಳಿ ಜನರ ಪ್ರೀತಿಗೆ ಮನಸೋತರು. ‘ಧನ್ಯವಾದಗಳು ಮಂಗಳೂರು! ನಾನು ಇಲ್ಲಿಗೆ ಬರುವಾಗ ಯಾವ ರೀತಿಯ ಪ್ರತಿಕ್ರಿಯೆ ಸಿಗಬಹುದು ಎಂದು ತಿಳಿದಿರಲಿಲ್ಲ. ಆದರೆ ಏರ್‌ಪೋರ್ಟ್‌ನಿಂದ ಹಿಡಿದು ಇಲ್ಲಿಯವರೆಗೆ ನೀವು ತೋರಿದ ಪ್ರೀತಿ, ಉತ್ಸಾಹ ಮತ್ತು ಒಳ್ಳೆಯತನ ನಿಜಕ್ಕೂ ಅದ್ಭುತವಾಗಿತ್ತು’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್