ಶಾರುಖ್ ಖಾನ್ ಹೊಸ ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿ: ಸೂಪರ್ ಹಿಟ್ ಗ್ಯಾರೆಂಟಿ

Shah Rukh Khan: ಶಾರುಖ್ ಖಾನ್​ಗೆ 2023 ಅದೃಷ್ಟದ ವರ್ಷವಾಗಿದೆ. ಶಾರುಖ್ ಖಾನ್​ರ ಹೊಸ ಸಿನಿಮಾ ಇದೇ ವರ್ಷದಲ್ಲೇ ಬಿಡುಗಡೆ ಆಗಲಿದೆ. ಆ ಸಿನಿಮಾ ಸಹ ಸೂಪರ್-ಡೂಪರ್ ಹಿಟ್ ಆಗುವ ಸಕಲ ಸಾಧ್ಯತೆಗಳಿವೆ.

ಶಾರುಖ್ ಖಾನ್ ಹೊಸ ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿ: ಸೂಪರ್ ಹಿಟ್ ಗ್ಯಾರೆಂಟಿ
ಶಾರುಖ್ ಖಾನ್
Follow us
ಮಂಜುನಾಥ ಸಿ.
|

Updated on: Sep 26, 2023 | 5:24 PM

ಶಾರುಖ್ ಖಾನ್ (Shah Rukh Khan)​ ಮುಟ್ಟಿದ್ದೆಲ್ಲವೂ ಚಿನ್ನವಾಗುತ್ತಿದೆ. ಕಳೆದ ಕೆಲ ವರ್ಷಗಳಿಂದ ಅನುಭವಿಸಿದ್ದ ಸತತ ಸೋಲು, ಮಗನ ಬಂಧನ ಇನ್ನಿತರೆ ನೋವುಗಳಿಂದ ತತ್ತರಿಸಿದ್ದ ಶಾರುಖ್ ಖಾನ್​ಗೆ 2023 ವೃತ್ತಿ ಜೀವನದಲ್ಲಿಯೇ ಅದೃಷ್ಟದ ವರ್ಷವಾಗಿ ಮಾರ್ಪಟ್ಟಂತಿದೆ.

2023ರಲ್ಲಿ ಈವರೆಗೆ ಶಾರುಖ್ ಖಾನ್​ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿದ್ದು, ಎರಡೂ ಸಿನಿಮಾಗಳೂ ಸೂಪರ್-ಡೂಪರ್ ಹಿಟ್ ಆಗಿದೆ. ಇದೇ ವರ್ಷದ ಜುಲೈನಲ್ಲಿ ಬಿಡುಗಡೆ ಆದ ‘ಪಠಾಣ್’ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಅದರ ಬಳಿಕ ಇತ್ತೀಚೆಗೆ ಬಿಡುಗಡೆ ಆದ ‘ಜವಾನ್’ ಸಿನಿಮಾ ಸಹ ದೊಡ್ಡ ಹಿಟ್ ಆಗಿದೆ. ‘ಜವಾನ್’ ಸಿನಿಮಾ 1000 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ಇದೇ ವರ್ಷ ಶಾರುಖ್ ಖಾನ್​ರ ಮತ್ತೊಂದು ಸಿನಿಮಾ ಸಹ ತೆರೆಗೆ ಬರಲಿದ್ದು, ಆ ಸಿನಿಮಾ ಸಹ ದೊಡ್ಡ ಬ್ಲಾಕ್ ಬಸ್ಟರ್ ಆಗುವ ಸಾಧ್ಯತೆ ದಟ್ಟವಾಗಿದೆ.

‘ಜವಾನ್’ ಸಿನಿಮಾ ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಶಾರುಖ್ ಖಾನ್ ತಮ್ಮ ಮುಂದಿನ ಸಿನಿಮಾ ‘ಡಂಕಿ’ ಚಿತ್ರೀಕರಣವನ್ನು ಶುರು ಮಾಡಿದ್ದರು. ಭಾರತದ ಟಾಪ್ ನಿರ್ದೇಶಕರಲ್ಲಿ ಅಗ್ರಗಣ್ಯರಾಗಿರುವ ರಾಜ್​ಕುಮಾರ್ ಹಿರಾನಿ ‘ಡಂಕಿ’ಯ ನಿರ್ದೇಶಕರಾಗಿದ್ದು, ‘ಡಂಕಿ’ ಸಹ ದೊಡ್ಡ ಹಿಟ್ ಆಗುವುದು ಖಾತ್ರಿ ಎನ್ನಲಾಗುತ್ತಿದೆ.

ಇದನ್ನೂ ಓದಿ:ಶಾರುಖ್ ಖಾನ್ ಬಳಿಕ ಮತ್ತೊಬ್ಬ ಸ್ಟಾರ್ ಜೊತೆ ನಯನತಾರಾ ನಟನೆ, 16 ವರ್ಷದ ಬಳಿಕ ಮತ್ತೆ ಒಂದು

‘ಡಂಕಿ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು, ಆ ಸಿನಿಮಾ ಸಹ ಇದೇ ವರ್ಷ ಬಿಡುಗಡೆ ಆಗಲಿದೆ. ಸಿನಿಮಾವನ್ನು ಇದೇ ವರ್ಷ ಕ್ರಿಸ್​ಮಸ್ ವೇಳೆಗೆ ಬಿಡುಗಡೆ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ. ಸಾಮಾನ್ಯವಾಗಿ ಕ್ರಿಸ್​ಮಸ್ ಅಥವಾ ದೀಪಾವಳಿ ವೇಳೆಗೆ ಶಾರುಖ್​ ಖಾನ್​ ತಮ್ಮ ಸಿನಿಮಾ ಬಿಡುಗಡೆ ಮಾಡುವ ಪದ್ಧತಿಯನ್ನು ಹಲವು ವರ್ಷ ಇರಿಸಿಕೊಂಡಿದ್ದರು. ಈಗ ಅದೇ ಪದ್ಧತಿಯನ್ನು ಮುಂದುವರೆಸಿ ‘ಡಂಕಿ’ ಸಿನಿಮಾವನ್ನು ಕ್ರಿಸ್​ಮಸ್ ವೇಳೆಗೆ ಬಿಡುಗಡೆ ಮಾಡಲಿದ್ದಾರೆ.

ಈ ದೀಪಾವಳಿ ಹಬ್ಬಕ್ಕೆ ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಬಿಡುಗಡೆ ಆಗಲಿಕ್ಕಿದೆ. ಆ ಸಿನಿಮಾದ ಮೇಲೂ ಬಾಲಿವುಡ್ ಚಿತ್ರಪ್ರೇಮಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಟೈಗರ್ 3’ ಸಿನಿಮಾದಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಒಂದೊಮ್ಮೆ ‘ಟೈಗರ್ 3’ ಸಿನಿಮಾ ಸಹ ಹಿಟ್ ಆದರೆ ಶಾರುಖ್ ಖಾನ್​ ಈ ವರ್ಷ ನಟಿಸಿದ ಎಲ್ಲ ಸಿನಿಮಾಗಳು ಹಿಟ್ ಆದಂತಾಗುತ್ತದೆ (‘ಡಂಕಿ’ ಪಕ್ಕಾ ಹಿಟ್ ಆಗುವ ಎಲ್ಲ ಸಾಧ್ಯತೆಗಳು ಇರುವ ಕಾರಣ).

‘ಡಂಕಿ’ ಸಿನಿಮಾವು ಅಕ್ರಮವಾಗಿ ವಲಸೆ ಮಾಡುವವರ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ತಾಪ್ಸಿ ಪನ್ನು ನಾಯಕಿ. ರಾಜ್​ಕುಮಾರ್ ಹಿರಾನಿ ಈ ಸಿನಿಮಾ ನಿರ್ದೇಶಿಸಿದ್ದಾರೆ. ‘ಮುನ್ನಾಭಾಯ್ ಎಂಬಿಬಿಎಸ್’, ‘ಲಗೇ ರಹೋ ಮುನ್ನಾಭಾಯಿ’, ‘3 ಇಡಿಯಟ್ಸ್’, ‘ಪಿಕೆ’, ‘ಸಂಜು’ ಅಂಥಹಾ ಸೂಪರ್-ಡೂಪರ್ ಹಿಟ್ ಸಿನಿಮಾಗಳನ್ನು ರಾಜ್​ಕುಮಾರ್ ಹಿರಾನಿ ಈವರೆಗೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ