Shah Rukh Khan: ಶಾರುಖ್ ಖಾನ್ ಸಿನಿಮಾದಲ್ಲಿ ಹಲವು ಭಾಷೆಯ ನಟರು! ಕನ್ನಡದಿಂದ ಯಾರು?

ಶಾರುಖ್ ಖಾನ್ ನಟನೆಯ 'ಜವಾನ್' ಸಿನಿಮಾ ಸಿನಿಮಾದಲ್ಲಿ ಹಲವು ಭಾಷೆಯ ಸ್ಟಾರ್ ನಟರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಚಿತ್ರರಂಗದಿಂದ ಯಾರಿಗೆ ಬಂದಿದೆ ಬುಲಾವ್?

Shah Rukh Khan: ಶಾರುಖ್ ಖಾನ್ ಸಿನಿಮಾದಲ್ಲಿ ಹಲವು ಭಾಷೆಯ ನಟರು! ಕನ್ನಡದಿಂದ ಯಾರು?
ಶಾರುಖ್ ಖಾನ್
Follow us
ಮಂಜುನಾಥ ಸಿ.
|

Updated on:Mar 01, 2023 | 7:52 PM

ಶಾರುಖ್ ಖಾನ್ (Shah Rukh Khan) ನಟನೆಯ ಪಠಾಣ್ ಸಿನಿಮಾ ಬ್ಲಾಕ್ ಬಸ್ಟರ್ ಆಗಿರುವ ಬೆನ್ನಲ್ಲೆ ಅವರ ಹೊಸ ಸಿನಿಮಾದ ಕಡೆಗೆ ಎಲ್ಲರ ಕಣ್ಣು ಹೊರಳಿದೆ. ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ನಿರ್ದೇಶಿಸುತ್ತಿರುವ ಜವಾನ್ (Jawan) ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸುತ್ತಿದ್ದು, ಸಿನಿಮಾವನ್ನು ಹಿಟ್ ಮಾಡಿಯೇ ತೀರಲು ಹಲವು ಯತ್ನಗಳನ್ನು ಅಟ್ಲಿ ಮಾಡುತ್ತಿದ್ದಾರೆ.

‘ಪಠಾಣ್’ ಸಿನಿಮಾ ದೊಡ್ಡ ಹಿಟ್ ಆಗಿರುವ ಕಾರಣ, ‘ಜವಾನ್’ ಸಿನಿಮಾವನ್ನು ಅನ್ನು ಅದಕ್ಕಿಂತಲೂ ದೊಡ್ಡ ಹಿಟ್ ಅನ್ನಾಗಿಸಲು ಅಟ್ಲಿ ಯತ್ನಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ‘ಜವಾನ್’ ಅನ್ನು ರೂಪಿಸುತ್ತಿದ್ದು, ಇದಕ್ಕಾಗಿಯೇ ಬೇರೆ ಬೇರೆ ಭಾಷೆಯ ಟಾಪ್ ನಟರನ್ನು ಸಿನಿಮಾದಲ್ಲಿ ಅತಿಥಿ ಪಾತ್ರಗಳಲ್ಲಿ ನಟಿಸುವಂತೆ ಆಹ್ವಾನಿಸಿದ್ದಾರೆ.

ತಮಿಳಿನ ನಟ ವಿಜಯ್, ‘ಜವಾನ್’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಪಕ್ಕ ಆಗಿದೆ. ತೆಲುಗಿನ ಅಲ್ಲು ಅರ್ಜುನ್ ಅವರನ್ನು ಅತಿಥಿ ಪಾತ್ರಕ್ಕೆ ಕೇಳಲಾಗಿದೆಯಾದರೂ ಅವರು ಒಲ್ಲೆ ಎಂದಿದ್ದಾರೆ. ‘ಪುಷ್ಪ 2’ ನಲ್ಲಿ ಬ್ಯುಸಿಯಾಗಿರುವ ಅಲ್ಲು ಅರ್ಜುನ್, ಆ ಸಿನಿಮಾ ಮುಗಿಯುವವರೆಗೆ ಇನ್ಯಾವುದೇ ಸಿನಿಮಾದಲ್ಲಿ ನಟಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಮತ್ತೊಬ್ಬ ಯುವ ಸ್ಟಾರ್ ನಟನನ್ನು ಎಳೆದು ತರಲು ಅಟ್ಲಿ ಯೋಜಿಸಿದ್ದಾರೆ.

ಇನ್ನು ಕನ್ನಡ ಚಿತ್ರರಂಗದಿಂದಲೂ ಒಬ್ಬ ಸ್ಟಾರ್ ನಟರಿಗೆ ಶಾರುಖ್ ಖಾನ್ ಸಿನಿಮಾದಲ್ಲಿ ನಟಿಸಲು ಆಹ್ವಾನವಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಅದ್ಯಾರು ಎಂಬ ಬಗ್ಗೆ ಖಾತ್ರಿಯಿಲ್ಲ. ಶಿವರಾಜ್ ಕುಮಾರ್ ಅವರನ್ನು ಕನ್ನಡದ ಎಸ್​ಆರ್​ಕೆ ಎಂದೇ ಕರೆಯುತ್ತಾರೆ ಅಲ್ಲದೆ ಶಾರುಖ್-ಶಿವಣ್ಣನ ನಡುವೆ ಉತ್ತಮ ಬಾಂಧವ್ಯವೇ ಇರುವ ಕಾರಣ ಶಿವಣ್ಣನೇ ‘ಜವಾನ್’ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ.

‘ಜವಾನ್’ ಸಿನಿಮಾವು ಪಕ್ಕಾ ಆಕ್ಷನ್ ಥ್ರಿಲ್ಲರ್ ಆಗಿದ್ದು, ಸಿನಿಮಾದ ಪೋಸ್ಟರ್, ಪೋಸ್ಟರ್ ಟೀಸರ್​ಗಳು ಈಗಾಗಲೇ ಬಿಡುಗಡೆ ಆಗಿವೆ. ನಯನತಾರಾ ಈ ಸಿನಿಮಾದಲ್ಲಿ ಶಾರುಖ್ ಖಾನ್​ ಜೊತೆ ನಾಯಕಿಯಾಗಿ ನಟಿಸುತ್ತಿದ್ದು, ಯೋಗಿಬಾಬು ಹಾಗೂ ಇನ್ನೂ ಕೆಲವು ತಮಿಳು ನಟರೇ ಸಿನಿಮಾದಲ್ಲಿ ಪೋಷಕ, ಹಾಸ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಪಠಾಣ್’ ಹಿಟ್ ಆಗಿರುವ ಬೆನ್ನಲ್ಲೆ ‘ಜವಾನ್’ ಬಗ್ಗೆ ಭಾರಿ ನಿರೀಕ್ಷೆಗಳು ಗರಿಗೆದರಿದ್ದು, ಇದಕ್ಕಾಗಿ ಅಟ್ಲಿ ಸಿನಿಮಾದ ಚಿತ್ರಕತೆಯಲ್ಲಿ ಕೆಲ ಬದಲಾವಣೆಗಳನ್ನು ಸಹ ಮಾಡಿಕೊಂಡಿದ್ದಾರೆ.

‘ಜವಾನ್’ ಸಿನಿಮಾದ ಜೊತೆಗೆ ಸೋಲೆ ಕಾಣದ ಮತ್ತೊಬ್ಬ ನಿರ್ದೇಶಕನ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸುತ್ತಿದ್ದಾರೆ.  ‘ಮುನ್ನಾಭಾಯಿ ಎಂಬಿಬಿಎಸ್’, ‘ಲಗೆ ರಹೊ ಮುನ್ನಾಭಾಯಿ’, ‘3 ಈಡಿಯಟ್ಸ್’, ‘ಪಿಕೆ’ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ರಾಜ್​ಕುಮಾರ್ ಹಿರಾನಿಯ ‘ಡಂಕಿ’ ಹೆಸರಿನ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸುತ್ತಿದ್ದು ಸಿನಿಮಾದ ಚಿತ್ರೀಕರಣ ಈಗಾಗಲೇ ಚಾಲ್ತಿಯಲ್ಲಿದೆ. 2024 ರಲ್ಲಿ ‘ಡಂಕಿ’ ಬಿಡುಗಡೆ ಆಗಲಿದೆ. 2023 ರ ಅಂತ್ಯಕ್ಕೆ ‘ಜವಾನ್’ ಸಿನಿಮಾ ಬಿಡುಗಡೆ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Wed, 1 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ