Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

Pathaan Movie | Censor Certificate: ‘ಬೇಷರಂ ರಂಗ್​..’ ಹಾಡಿನ ಮೂರು ಕಡೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ದೀಪಿಕಾ ಪಡುಕೋಣೆ ಅವರ ಕೆಲವು ಕ್ಲೋಸಪ್​ ಶಾಟ್​ಗಳನ್ನು ತೆಗೆದುಹಾಕಲಾಗಿದೆ.

Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ
ಶಾರುಖ್ ಖಾನ್, ದೀಪಿಕಾ ಪಡುಕೋಣೆ
Follow us
TV9 Web
| Updated By: ಮದನ್​ ಕುಮಾರ್​

Updated on: Jan 05, 2023 | 4:32 PM

ಬಹುನಿರೀಕ್ಷಿತ ‘ಪಠಾಣ್​’ ಸಿನಿಮಾ (Pathaan Movie) ಕುರಿತಂತೆ ಅನೇಕ ಇಂಟರೆಸ್ಟಿಂಗ್​ ಸುದ್ದಿಗಳು ಕೇಳಿಬರುತ್ತಿದೆ. ಒಂದು ವರ್ಗದ ಜನರು ಈ ಸಿನಿಮಾಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ‘ಪಠಾಣ್​’ ಚಿತ್ರದಲ್ಲಿ ಹಲವು ಬದಲಾವಣೆಗಳನ್ನು ಮಾಡುವಂತೆ ಸೆನ್ಸಾರ್​ ಮಂಡಳಿ ಅಧಿಕಾರಿಗಳು ಸೂಚಿಸಿದ ಬಗ್ಗೆಯೂ ಇತ್ತೀಚೆಗೆ ಸುದ್ದಿ ಆಗಿತ್ತು. ಈಗ ಈ ಸಿನಿಮಾಗೆ ಸೆನ್ಸಾರ್​ ಮಂಡಳಿಯಿಂದ ‘ಯು/ಎ’ ಪ್ರಮಾಣಪತ್ರ ಸಿಕ್ಕಿದೆ. ಶಾರುಖ್​ ಖಾನ್​ (Shah Rukh Khan) ಅಭಿಮಾನಿಗಳಿಗೆ ಇದರಿಂದ ಖುಷಿ ಆಗಿದೆ. ಆದರೆ ಹಲವು ಕಡೆಗಳಲ್ಲಿ ಕತ್ತರಿ ಹಾಕಲಾಗಿದೆ. ಅಚ್ಚರಿ ಏನೆಂದರೆ ‘ಪಠಾಣ್​’ ಚಿತ್ರದಲ್ಲಿ ಬರುವ ‘ಪ್ರಧಾನ ಮಂತ್ರಿ’ (Prime Minister) ಎಂಬ ಪದವನ್ನು ಅಧ್ಯಕ್ಷ ಅಥವಾ ಮಂತ್ರಿ ಎಂದು ಬದಲಿಸಲಾಗಿದೆ. ಈ ಕುರಿತು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

‘ಪಠಾಣ್​’ ಚಿತ್ರದ ‘ಬೇಷರಂ ರಂಗ್​..’ ಹಾಡು ರಿಲೀಸ್​ ಆದಾಗಿನಿಂದ ಇಲ್ಲಿಯತನಕ ಅನೇಕ ವಿವಾದಗಳು ಹುಟ್ಟಿಕೊಂಡಿವೆ. ಹಾಗಾಗಿ ಬಹಳ ಕಟ್ಟುನಿಟ್ಟಾಗಿ ಸೆನ್ಸಾರ್​ ಮಂಡಳಿ ಸದಸ್ಯರು ಕತ್ತರಿ ಪ್ರಯೋಗ ಮಾಡಿದ್ದಾರೆ. ‘ಪ್ರಧಾನ ಮಂತ್ರಿ ಕಚೇರಿ’ ಎಂಬ ಪದವನ್ನು ತೆಗೆದು ಹಾಕಲಾಗಿದೆ. 13 ಕಡೆಗಳಲ್ಲಿ ಪ್ರಧಾನಿ ಮಂತ್ರಿ ಬದಲಿಗೆ ಬೇರೆ ಪದವನ್ನು ಹಾಕಲಾಗಿದೆ.

ಇದನ್ನೂ ಓದಿ: Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ವಿವಾದ ಹುಟ್ಟುಹಾಕಿರುವ ‘ಬೇಷರಂ ರಂಗ್​..’ ಹಾಡಿನ ಮೂರು ಕಡೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ದೀಪಿಕಾ ಪಡುಕೋಣೆ ಅವರ ಕೆಲವು ಕ್ಲೋಸಪ್​ ಶಾಟ್​ಗಳನ್ನು ತೆಗೆದುಹಾಕಲಾಗಿದೆ. ಕೇಸರಿ ಬಿಕಿನಿಗೆ ಸಂಬಂಧಿಸಿದಂತೆ ಯಾವ ಬದಲಾವಣೆ ಮಾಡಲಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಜನವರಿ 25ರಂದು ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ. ಚಿತ್ರದ ಒಟ್ಟು ಅವಧಿ 2 ಗಂಟೆ 26 ನಿಮಿಷ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Bajrang Dal: ‘ಪಠಾಣ್​’ ಚಿತ್ರದ ಪ್ರಚಾರಕ್ಕೆ ಭಜರಂಗ ದಳ ಅಡ್ಡಿ; ಚಿತ್ರಮಂದಿರಕ್ಕೆ ನುಗ್ಗಿ ದಾಂಧಲೆ

ನಿಯಮಾವಳಿಗಳ ಪ್ರಕಾರವೇ ಸೆನ್ಸಾರ್​ ಪ್ರಕ್ರಿಯೆ ಮಾಡಲಾಗಿದೆ ಎಂದು ಸೆನ್ಸಾರ್​ ಮಂಡಳಿ ಅಧ್ಯಕ್ಷ ಪ್ರಸೂನ್​ ಜೋಶಿ ಹೇಳಿದ್ದಾರೆ. ‘ಪಠಾಣ್​’ ಚಿತ್ರದ ಶೀರ್ಷಿಕೆ ಬದಲಾಗಬೇಕು ಎಂದು ಕೆಲವರು ಒತ್ತಾಯ ಹೇರಿದ್ದರು. ಆದರೆ ಶೀರ್ಷಿಕೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಜನವರಿ 25ರಂದು ಅದ್ದೂರಿಯಾಗಿ ಈ ಸಿನಿಮಾ ರಿಲೀಸ್​ ಆಗಲಿದೆ.

‘ಪಠಾಣ್​’ ಚಿತ್ರಕ್ಕೆ ಭಜರಂಗ ದಳದ ವಿರೋಧ:

ಭಜರಂಗ ದಳ ಕಾರ್ಯಕರ್ತರು ‘ಪಠಾಣ್​’ ಪ್ರಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಗುಜರಾತ್​ನಲ್ಲಿ ನಡೆದಿದೆ. ಚಿತ್ರಮಂದಿರವೊಂದರಲ್ಲಿ ಈ ಚಿತ್ರದ ಪೋಸ್ಟರ್​ ಮತ್ತು ಸ್ಟ್ಯಾಂಡಿಗಳನ್ನು ಹಾಕಲಾಗಿತ್ತು. ಅದನ್ನು ಕಿತ್ತು ಹಾಕುವ ಮೂಲಕ ಭಜರಂಗ ದಳದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ