AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?

ಭಾರತದ ‘ಆಪರೇಷನ್ ಸುಂದರ್’ ದಾಳಿಯ ಬಗ್ಗೆ ಶಾರುಖ್ ಖಾನ್ ಅವರ ಮೌನ ಗಮನ ಸೆಳೆದಿದೆ. ಅವರ ಪಾಕಿಸ್ತಾನಿ ಹಿನ್ನೆಲೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಸಲ್ಮಾನ್ ಖಾನ್ ಅವರು ಈ ಮೊದಲು ಮೌನ ತಾಳಿದ್ದರು ಮತ್ತು ಕದನ ವಿರಾಮದ ಬಗ್ಗೆ ಟ್ವೀಟ್ ಮಾಡಿ ಟ್ರೋಲ್ ಆದರು.

ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?
Shah Rukh Khan
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:May 13, 2025 | 7:47 AM

Share

ಪಾಕಿಸ್ತಾನದ ಉಗ್ರರು ಪಹಲ್ಗಾಮ್​ನಲ್ಲಿ ನಡೆಸಿದ ದಾಳಿಗೆ ಭಾರತ ಪ್ರತ್ಯುತ್ತರ ನೀಡಿದೆ. ಪಾಕ್​ಗೆ ನಡುಕ ಹುಟ್ಟಿಸುವ ರೀತಿಯಲ್ಲಿ ದಾಳಿ ಮಾಡುತ್ತಿದೆ. ಇದಕ್ಕೆ ‘ಆಪರೇಷನ್ ಸಿಂದೂರ್’ (Operation Sindoor) ಎನ್ನುವ ಟೈಟಲ್ ಇಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಟ್ವೀಟ್ ಮಾಡುತ್ತಿದ್ದಾರೆ ಮತ್ತು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಆದರೆ, ಶಾರುಖ್ ಖಾನ್ ಅವರು ಈ ಬಗ್ಗೆ ಯಾವುದೇ ಟ್ವೀಟ್ ಮಾಡದೆ ಸುದ್ದಿ ಆಗಿದ್ದಾರೆ. ಇದಕ್ಕೆ ಕಾರಣ ಏನಿರಬಹುದು ಎಂದು ಅನೇಕರು ಚರ್ಚೆ ನಡೆಸುತ್ತಿದ್ದಾರೆ.

ಶಾರುಖ್ ಖಾನ್ ಅವರು ಹಲವು ಘಟನೆ ನಡೆದಾಗ ಟ್ವೀಟ್ ಮಾಡಿದ್ದು ಇದೆ. ಆದರೆ, ಆಪರೇಷನ್ ಸಿಂದೂರ್ ಬಗ್ಗೆ ಅವರು ಯಾವುದೇ ಟ್ವೀಟ್ ಮಾಡಿಲ್ಲ. ಅವರು ಪಹಲ್ಗಾಮ್ ದಾಳಿಯನ್ನು ಖಂಡಿಸಿದ್ದರು ನಿಜ. ಆದರೆ, ಭಾರತದ ಪ್ರತಿ ದಾಳಿಯನ್ನು ಬೆಂಬಲಿಸಿಯೇ ಇಲ್ಲ. ಇದನ್ನು ಅವರ ಅಭಿಮಾನಿಗಳೇ ಪ್ರಶ್ನೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಇದಕ್ಕೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ
Image
‘ಕೂಲಿ’ ಸಿನಿಮಾದ ಬಹುತೇಕ ಶೂಟ್​ನ ಬಾಡಿ ಡಬಲ್​ ಮೂಲಕವೇ ಮುಗಿಸಿದ ನಿರ್ದೇಶಕ
Image
ಕಲರ್ಸ್​​ ಧಾರಾವಾಹಿಯಲ್ಲಿ ಗೌತಮಿ ಜಾಧವ್; ಪ್ರೋಮೋ ಮೂಲಕ ಬಿಗ್ ಸರ್​ಪ್ರೈಸ್
Image
‘ಸದಾ ಹೃದಯದಲ್ಲಿರುತ್ತೀರಿ’; ರಾಕೇಶ್ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್
Image
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ

‘ಎರಡೂ ಕಡೆಗಳಲ್ಲಿ ಪಾಯಿಂಟ್ ಇದೆ. ನನ್ನ ಕುಟುಂಬ ಪಾಕಿಸ್ತಾನದ ಹಿನ್ನೆಲೆ ಹೊಂದಿದೆ. ನನ್ನ ತಂದೆ ಅಲ್ಲಿ ಹುಟ್ಟಿದವರು. ನನ್ನ ತಂದೆಯ ಕುಟುಂಬ ಪಾಕಿಸ್ತಾನದಲ್ಲಿದೆ. ಅವರು ಒಳ್ಳೆಯ ನೆರೆಹೊರೆಯುವರು ಎಂದು ಹೇಳೋಣ, ನಾವು ಒಳ್ಳೆಯ ನೆರೆಹೊರೆಯವರು’ ಎಂದು ಶಾರುಖ್ ಖಾನ್ ಅವರು ಹೇಳಿದ್ದರು. ಈ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ.

ಈ ಮೊದಲು ಸಲ್ಮಾನ್ ಖಾನ್ ಅವರು ‘ಆಪರೇಷನ್ ಸಿಂದೂರ್’ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದರು. ಆ ಟ್ವೀಟ್​ನ ಆ ಬಳಿಕ ಅವರು ಡಿಲೀಟ್ ಮಾಡಿದ್ದರು. ಇದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾದವು.

ಇದನ್ನೂ ಓದಿ: 21 ಕೋಟಿ ರೂ. ಬೆಲೆಯ ವಾಚ್ ಧರಿಸಿ ಎಲ್ಲರನ್ನೂ ದಂಗುಬಡಿಸಿದ ಶಾರುಖ್ ಖಾನ್

ಶಾರುಖ್ ಖಾನ್ ಅವರು ‘ಕಿಂಗ್’ ಹೆಸರಿನ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ಸುಹಾನಾ ಖಾನ್ ಅವರು ನಾಯಕಿ ಆಗಿ ನಟಿಸುತ್ತಿದ್ದಾರೆ. ಅವರದ್ದೇ ಬ್ಯಾನರ್ ಮೂಲಕ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Tue, 13 May 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ