
ಪಾಕಿಸ್ತಾನದ ಉಗ್ರರು ಪಹಲ್ಗಾಮ್ನಲ್ಲಿ ನಡೆಸಿದ ದಾಳಿಗೆ ಭಾರತ ಪ್ರತ್ಯುತ್ತರ ನೀಡಿದೆ. ಪಾಕ್ಗೆ ನಡುಕ ಹುಟ್ಟಿಸುವ ರೀತಿಯಲ್ಲಿ ದಾಳಿ ಮಾಡುತ್ತಿದೆ. ಇದಕ್ಕೆ ‘ಆಪರೇಷನ್ ಸಿಂದೂರ್’ (Operation Sindoor) ಎನ್ನುವ ಟೈಟಲ್ ಇಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಟ್ವೀಟ್ ಮಾಡುತ್ತಿದ್ದಾರೆ ಮತ್ತು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಆದರೆ, ಶಾರುಖ್ ಖಾನ್ ಅವರು ಈ ಬಗ್ಗೆ ಯಾವುದೇ ಟ್ವೀಟ್ ಮಾಡದೆ ಸುದ್ದಿ ಆಗಿದ್ದಾರೆ. ಇದಕ್ಕೆ ಕಾರಣ ಏನಿರಬಹುದು ಎಂದು ಅನೇಕರು ಚರ್ಚೆ ನಡೆಸುತ್ತಿದ್ದಾರೆ.
ಶಾರುಖ್ ಖಾನ್ ಅವರು ಹಲವು ಘಟನೆ ನಡೆದಾಗ ಟ್ವೀಟ್ ಮಾಡಿದ್ದು ಇದೆ. ಆದರೆ, ಆಪರೇಷನ್ ಸಿಂದೂರ್ ಬಗ್ಗೆ ಅವರು ಯಾವುದೇ ಟ್ವೀಟ್ ಮಾಡಿಲ್ಲ. ಅವರು ಪಹಲ್ಗಾಮ್ ದಾಳಿಯನ್ನು ಖಂಡಿಸಿದ್ದರು ನಿಜ. ಆದರೆ, ಭಾರತದ ಪ್ರತಿ ದಾಳಿಯನ್ನು ಬೆಂಬಲಿಸಿಯೇ ಇಲ್ಲ. ಇದನ್ನು ಅವರ ಅಭಿಮಾನಿಗಳೇ ಪ್ರಶ್ನೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಇದಕ್ಕೆ ನಾನಾ ರೀತಿಯ ಕಮೆಂಟ್ಗಳು ಬರುತ್ತಿವೆ.
‘ಎರಡೂ ಕಡೆಗಳಲ್ಲಿ ಪಾಯಿಂಟ್ ಇದೆ. ನನ್ನ ಕುಟುಂಬ ಪಾಕಿಸ್ತಾನದ ಹಿನ್ನೆಲೆ ಹೊಂದಿದೆ. ನನ್ನ ತಂದೆ ಅಲ್ಲಿ ಹುಟ್ಟಿದವರು. ನನ್ನ ತಂದೆಯ ಕುಟುಂಬ ಪಾಕಿಸ್ತಾನದಲ್ಲಿದೆ. ಅವರು ಒಳ್ಳೆಯ ನೆರೆಹೊರೆಯುವರು ಎಂದು ಹೇಳೋಣ, ನಾವು ಒಳ್ಳೆಯ ನೆರೆಹೊರೆಯವರು’ ಎಂದು ಶಾರುಖ್ ಖಾನ್ ಅವರು ಹೇಳಿದ್ದರು. ಈ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ.
ಈ ಮೊದಲು ಸಲ್ಮಾನ್ ಖಾನ್ ಅವರು ‘ಆಪರೇಷನ್ ಸಿಂದೂರ್’ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದರು. ಆ ಟ್ವೀಟ್ನ ಆ ಬಳಿಕ ಅವರು ಡಿಲೀಟ್ ಮಾಡಿದ್ದರು. ಇದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾದವು.
ಇದನ್ನೂ ಓದಿ: 21 ಕೋಟಿ ರೂ. ಬೆಲೆಯ ವಾಚ್ ಧರಿಸಿ ಎಲ್ಲರನ್ನೂ ದಂಗುಬಡಿಸಿದ ಶಾರುಖ್ ಖಾನ್
ಶಾರುಖ್ ಖಾನ್ ಅವರು ‘ಕಿಂಗ್’ ಹೆಸರಿನ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ಸುಹಾನಾ ಖಾನ್ ಅವರು ನಾಯಕಿ ಆಗಿ ನಟಿಸುತ್ತಿದ್ದಾರೆ. ಅವರದ್ದೇ ಬ್ಯಾನರ್ ಮೂಲಕ ಸಿನಿಮಾ ರಿಲೀಸ್ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:46 am, Tue, 13 May 25