AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ನಿನ್ನ ಜತೆ ಸದಾ ನಾನಿರುತ್ತೇನೆ‘; ಶಿಲ್ಪಾ ಶೆಟ್ಟಿಗೆ ಧೈರ್ಯ ತುಂಬಿದ ಸಹೋದರಿ ಶಮಿತಾ ಶೆಟ್ಟಿ

ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ‘ಹಂಗಾಮಾ 2’ ಚಿತ್ರದ ಮೂಲಕ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ.

’ನಿನ್ನ ಜತೆ ಸದಾ ನಾನಿರುತ್ತೇನೆ‘; ಶಿಲ್ಪಾ ಶೆಟ್ಟಿಗೆ ಧೈರ್ಯ ತುಂಬಿದ ಸಹೋದರಿ ಶಮಿತಾ ಶೆಟ್ಟಿ
ಶಮಿತಾ ಶೆಟ್ಟಿಗೆ ಆಂಟಿ ಎಂದ ನಟಿ; ಜಗಳಕ್ಕೆ ಇಳಿದ ಶಿಲ್ಪಾ ಶೆಟ್ಟಿ ತಂಗಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 24, 2021 | 6:39 PM

Share

ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ (Raj Kundra) ನೀಲಿ ಚಿತ್ರಗಳ ದಂಧೆಯಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಇದರಿಂದ ಶಿಲ್ಪಾ ಶೆಟ್ಟಿಗೂ ಕೆಟ್ಟ ಹೆಸರು ಬಂದಿದೆ. ಮಾಡೆಲ್​ ಮತ್ತು ನಟಿಯರನ್ನು ಬಳಸಿಕೊಂಡು ರಾಜ್​ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು (Porn) ಮಾಡುತ್ತಿದ್ದರು ಎಂಬ ಆರೋಪ ಎದುರಾಗಿದೆ. ಇದರ ಮಧ್ಯೆಯೇ ಶಿಲ್ಪಾ ಶೆಟ್ಟಿ ನಟನೆಯ ಹಂಗಾಮಾ 2 ಸಿನಿಮಾ ರಿಲೀಸ್​ ಆಗಿದೆ. ಈ ಸಿನಿಮಾಗೆ ಶುಭಾಶಯಗಳ ಸುರಿಮಳೆ ಹರಿದು ಬಂದಿದೆ.

ಬಹುಕಾಲದ ಬಳಿಕ ಶಿಲ್ಪಾ ಶೆಟ್ಟಿ ನಟನೆಗೆ ಮರಳಿದ್ದಾರೆ. ‘ಹಂಗಾಮಾ 2’ ಚಿತ್ರದ ಮೂಲಕ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ಜು.23ರಂದು ಬಿಡುಗಡೆ ಆಗಿದೆ. ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಓಟಿಟಿ ಮೂಲಕ ರಿಲೀಸ್​ ಆಗಿರುವ ಈ ಚಿತ್ರಕ್ಕೆ ಶಿಲ್ಪಾ ಸಹೋದರಿ ಶಮಿತಾ ಶೆಟ್ಟಿ ಶುಭ ಕೋರಿದ್ದಾರೆ.

’14 ವರ್ಷಗಳ ನಂತರ ನಿನ್ನ ನಟನೆಯ ಹಂಗಾಮಾ 2 ರಿಲೀಸ್​ ಆಗುತ್ತಿದೆ. ನಿನಗೆ ಶುಭವಾಗಲಿ. ನೀನು ಇದಕ್ಕಾಗಿ ಸಾಕಷ್ಟು ಪರಿಶ್ರಮ ಪಟ್ಟಿದ್ದೀಯಾ ಎನ್ನುವುದು ಗೊತ್ತು. ನಾನು ನಿನ್ನ ಜತೆ ಸದಾ ಇರುತ್ತೇನೆ. ನೀನು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದೀಯಾ. ಪ್ರತಿ ಬಾರಿ ಮತ್ತಷ್ಟು ಸ್ಟ್ರಾಂಗ್​ ಆಗುತ್ತಿದ್ದೀಯಾ. ಈ ಕಷ್ಟವೂ ಕಳೆದು ಹೋಗುತ್ತದೆ. ಹಂಗಾಮಾ 2 ತಂಡಕ್ಕೆ ಆಲ್​ ದಿ ಬೆಸ್ಟ್​ ಎಂದಿದ್ದಾರೆ’ ಶಿಲ್ಪಾ.

‘ಯೋಗ ಕಲಿಸಿದ ಪಾಠಗಳನ್ನು ನಾನು ನಂಬುತ್ತೇನೆ ಮತ್ತು ಪಾಲಿಸುತ್ತೇನೆ. ಬದುಕು ಇರುವುದೇ ಈ ಕ್ಷಣದಲ್ಲಿ. ಒಂದು ಒಳ್ಳೆಯ ಸಿನಿಮಾ ಮಾಡಲು ‘ಹಂಗಮಾ 2’ ತಂಡ ಶ್ರಮಿಸಿದೆ. ಎಂದಿಗೂ ಸಿನಿಮಾಗೆ ತೊಂದರೆ ಆಗಬಾರದು. ಹಾಗಾಗಿ, ಇಂದು ನೀವು ನಿಮ್ಮ ಕುಟುಂಬ ಸಮೇತ ಈ ಸಿನಿಮಾ ನೋಡಿ ಅಂತ ನಾನು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್​ ಮಾಡಿದ್ದರು.

ಜು.27ರವರೆಗೂ ರಾಜ್​ ಕುಂದ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆ ಮೇಲೂ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ತನಿಖೆ ವೇಳೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತನಿಖೆಗೆ ರಾಜ್​ ಕುಂದ್ರಾ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಪೂನಂ ಪಾಂಡೆ ಸೇರಿದಂತೆ ಅನೇಕ ನಟಿಯರು ಅವರ ಮೇಲೆ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!