AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10ನೇ ಕ್ಲಾಸ್​ನಲ್ಲಿ ರಣಬೀರ್​ ಕಪೂರ್​ ಪಡೆದ ಅಂಕ ಎಷ್ಟು? ನಿರೀಕ್ಷಿಸಿದ್ದೇ ಬೇರೆ, ಆಗಿದ್ದೇ ಬೇರೆ

Ranbir Kapoor: ರಣಬೀರ್​ ಕಪೂರ್​ ಅವರದ್ದು ಫಿಲ್ಮಿ ಕುಟುಂಬ. ಈ ಕುಟುಂಬದ ಯಾರೊಬ್ಬರೂ ಕೂಡ ಶಿಕ್ಷಣದ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಿರಲಿಲ್ಲ.

10ನೇ ಕ್ಲಾಸ್​ನಲ್ಲಿ ರಣಬೀರ್​ ಕಪೂರ್​ ಪಡೆದ ಅಂಕ ಎಷ್ಟು? ನಿರೀಕ್ಷಿಸಿದ್ದೇ ಬೇರೆ, ಆಗಿದ್ದೇ ಬೇರೆ
ರಣಬೀರ್ ಕಪೂರ್
TV9 Web
| Updated By: ಮದನ್​ ಕುಮಾರ್​|

Updated on:Jul 10, 2022 | 2:47 PM

Share

ನಟ ರಣಬೀರ್​ ಕಪೂರ್ (Ranbir Kapoor)​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟನಾಗಿದ್ದಾರೆ. ಹಲವು ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈಗ ಅವರು ಬ್ಯಾಕ್​ ಟು ಬ್ಯಾಕ್​ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ರಣಬೀರ್​ ಕಪೂರ್​ ನಟಿಸಿರುವ ‘ಶಂಷೇರಾ’ ಸಿನಿಮಾ (Shamshera) ಬಿಡುಗಡೆಗೆ ಸಜ್ಜಾಗಿದೆ. ಬಳಿಕ ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗಲಿದೆ. ಕೆಲವೇ ತಿಂಗಳ ಹಿಂದೆ ಅವರು ಆಲಿಯಾ ಭಟ್​ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸೆಲೆಬ್ರಿಟಿಗಳ ಖಾಸಗಿ ಬದುಕಿನ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳಿಗೆ ಸದಾ ಆಸಕ್ತಿ ಇರುತ್ತದೆ. ತಮ್ಮ ನೆಚ್ಚಿನ ನಟ-ನಟಿ ಓದಿದ್ದು ಯಾವ ಶಾಲೆಯಲ್ಲಿ? ಅವರು ತೆಗೆದುಕೊಂಡ ಮಾರ್ಕ್ಸ್​ ಎಷ್ಟು? ಇಂಥ ಪ್ರಶ್ನೆಗೆ ಫ್ಯಾನ್ಸ್​ ಉತ್ತರ ಹುಡುಕುತ್ತಲೇ ಇರುತ್ತಾರೆ. ರಣಬೀರ್​ ಕಪೂರ್​ ಅವರು ತಮ್ಮ 10ನೇ ತರಗತಿಯ ( SSLC) ಅಂಕದ ಬಗ್ಗೆ ಮಾತನಾಡಿದ್ದಾರೆ.

ರಣಬೀರ್​ ಕಪೂರ್​ ಅವರದ್ದು ಫಿಲ್ಮಿ ಕುಟುಂಬ. ಅವರ ಮುತ್ತಾತ ಪೃಥ್ವಿರಾಜ್​ ಕಪೂರ್​ ಕಾಲದಿಂದಲೂ ಅವರ ಫ್ಯಾಮಿಲಿಯವರು ಸಿನಿಮಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಈ ಕುಟುಂಬದ ಯಾರೊಬ್ಬರೂ ಕೂಡ ಶಿಕ್ಷಣದ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಿರಲಿಲ್ಲ. ಅವರ ಫ್ಯಾಮಿಲಿಯಲ್ಲಿ ಮೊದಲು 10ನೇ ತರಗತಿ ಪಾಸ್​ ಮಾಡಿದ್ದೇ ರಣಬೀರ್​ ಕಪೂರ್​ ಎಂಬುದು ಅಚ್ಚರಿಯ ವಿಚಾರ. ಈ ಬಗ್ಗೆ ಅವರೇ ಸ್ವತಃ ಹೇಳಿದ್ದಾರೆ.

‘ಶಂಷೇರಾ’ ಸಿನಿಮಾದ ಪ್ರಚಾರಕ್ಕಾಗಿ ಅನೇಕ ಕಡೆಗಳಲ್ಲಿ ರಣಬೀರ್​ ಕಪೂರ್ ಅವರು ಸಂದರ್ಶನ ನೀಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಇನ್​ಫ್ಲ್ಯೂಯನ್ಸರ್​ ಆದ ಡಾಲಿ ಸಿಂಗ್​ ಅವರಿಗೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಎಜ್ಯುಕೇಷನ್​ ಕುರಿತು ಮಾತನಾಡಿದ್ದಾರೆ. ‘ವಿದ್ಯಾಭ್ಯಾಸದಲ್ಲಿ ನಾನು ತುಂಬ ವೀಕ್​ ಆಗಿದ್ದೆ. ನನ್ನ ಬಗ್ಗೆ ನಮ್ಮ ಕುಟುಂಬದವರಿಗೆ ಯಾವುದೇ ನಿರೀಕ್ಷೆ ಇರಲಿಲ್ಲ. 10ನೇ ತರಗತಿಯಲ್ಲಿ ನಾನು ಶೇಕಡ 53.4 ಅಂಕ ಪಡೆದುಕೊಂಡೆ. ಅದಕ್ಕಾಗಿ ನಮ್ಮ ಫ್ಯಾಮಿಲಿಯವರಿಗೆ ತುಂಬ ಖುಷಿ ಆಯಿತು. ದೊಡ್ಡ ಪಾರ್ಟಿ ಅರೇಂಜ್​ ಮಾಡಿದ್ದರು’ ಎಂದಿದ್ದಾರೆ ರಣಬೀರ್​ ಕಪೂರ್​.

ಇದನ್ನೂ ಓದಿ
Image
Alia Bhatt: ಪತ್ನಿ ಆಲಿಯಾ ಗರ್ಭಿಣಿ, ಆದ್ರೆ ಬೇರೆ ನಟಿ ಜೊತೆ ಹೆಚ್ಚಿತು ರಣಬೀರ್​ ಹಾಟ್ನೆಸ್​; ಎಚ್ಚರಿಕೆ ನೀಡಿದ ಫ್ಯಾನ್ಸ್
Image
Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

ಇದನ್ನೂ ಓದಿ: Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​

‘ಶಂಷೇರಾ’ ಚಿತ್ರದಲ್ಲಿ ರಣಬೀರ್​ ಕಪೂರ್ ಅವರಿಗೆ ದ್ವಿಪಾತ್ರ ಇದೆ. ನಾಯಕಿಯಾಗಿ ವಾಣಿ ಕಪೂರ್​ ನಟಿಸಿದ್ದಾರೆ. ಮುಖ್ಯ ಪಾತ್ರವೊಂದರಲ್ಲಿ ಸಂಜಯ್​ ದತ್​ ನಟಿಸಿದ್ದಾರೆ. ಕರಣ್​ ಮಲ್ಹೋತ್ರಾ ನಿರ್ದೇಶನ ಮಾಡಿರುವ ಈ ಸಿನಿಮಾ ಜುಲೈ 22ಕ್ಕೆ ಬಿಡುಗಡೆ ಆಗಲಿದೆ.

Published On - 2:47 pm, Sun, 10 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ