‘ಹೆಣ್ಣು ಮಗು ಬೇಕು’: ಮನದ ಆಸೆ ತಿಳಿಸಿ, ಮಕ್ಕಳನ್ನು ನೋಡಿಕೊಳ್ಳುವುದು ಕಲಿಯುತ್ತಿರುವ ರಣಬೀರ್​ ಕಪೂರ್

Ranbir Kapoor | Alia Bhatt: ಪುಟ್ಟ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸ ಅಲ್ಲ. ಅದನ್ನು ರಣಬೀರ್​ ಕಪೂರ್​ ಈಗಲೇ ಅಭ್ಯಾಸ ಮಾಡಿಕೊಳ್ಳುತ್ತಿದ್ದಾರೆ.

‘ಹೆಣ್ಣು ಮಗು ಬೇಕು’: ಮನದ ಆಸೆ ತಿಳಿಸಿ, ಮಕ್ಕಳನ್ನು ನೋಡಿಕೊಳ್ಳುವುದು ಕಲಿಯುತ್ತಿರುವ ರಣಬೀರ್​ ಕಪೂರ್
ರಣಬೀರ್ ಕಪೂರ್
Follow us
TV9 Web
| Updated By: ಮದನ್​ ಕುಮಾರ್​

Updated on: Jul 12, 2022 | 7:15 AM

ನಟ ರಣಬೀರ್​ ಕಪೂರ್​ (Ranbir Kapoor) ಅವರು ತಂದೆ ಆಗುತ್ತಿರುವ ಖುಷಿಯಲ್ಲಿ ಇದ್ದಾರೆ. ಹಲವು ವರ್ಷಗಳ ಕಾಲ ಅವರು ಆಲಿಯಾ ಭಟ್​ ಜೊತೆ ಪ್ರೀತಿಯಲ್ಲಿ ಮುಳುಗಿದ್ದರು. ಈ ವರ್ಷ ಅದ್ದೂರಿಯಾಗಿ ಅವರ ಮದುವೆ ನೆರವೇರಿತು. ವೈವಾಹಿಕ ಜೀವನಕ್ಕೆ ಕಾಲಿಟ್ಟು ಎರಡೂವರೆ ತಿಂಗಳು ಕಳೆಯುವುದರೊಳಗೆ ಆಲಿಯಾ ಭಟ್ (Alia Bhatt)​ ಪ್ರೆಗ್ನೆಂಟ್​ ಎಂಬ ವಿಚಾರ ಹೊರಬಿತ್ತು. ಆ ಸುದ್ದಿ ಕೇಳಿ ಫ್ಯಾನ್ಸ್​ ಅಚ್ಚರಿಪಟ್ಟರು. ಈಗ ರಣಬೀರ್ ಕಪೂರ್​ ಅವರು ತಮಗೆ ಹೆಣ್ಣು ಮಗು (Baby Girl) ಬೇಕು ಎಂದು ಆಸೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಮಕ್ಕಳನ್ನು ನೋಡಿಕೊಳ್ಳುವುದು ಹೇಗೆ ಎಂಬುದನ್ನು ಕೂಡ ಅವರು ಕಲಿಯುತ್ತಿದ್ದಾರೆ. ಆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ರಣಬೀರ್ ಕಪೂರ್ ಅವರು ‘ಶಂಷೇರಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಈಗ ಬಿಡುಗಡೆಗೆ ಹತ್ತಿರವಾಗುತ್ತಿದ್ದು, ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಟಿವಿ ಕಾರ್ಯಕ್ರಮದಲ್ಲಿ ಅವರು ಚಿತ್ರದ ಪ್ರಚಾರ ಮಾಡಿದರು. ಈ ವೇಳೆ ಅವರಿಗೆ ವೈಯಕ್ತಿಕ ಜೀವನದ ಬಗ್ಗೆಯೂ ಪ್ರಶ್ನೆ ಎದುರಾಯಿತು. ಗಂಡು ಮಗು ಅಥವಾ ಹೆಣ್ಣು ಮಗು, ಎರಡರಲ್ಲಿ ಯಾವುದು ಬೇಕು ಎಂದು ಕೇಳಿದ ಪ್ರಶ್ನೆಗೆ ರಣಬೀರ್​ ಉತ್ತರಿಸಿದ್ದಾರೆ. ‘ಹೆಣ್ಣು ಮಗು ಬೇಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
10ನೇ ಕ್ಲಾಸ್​ನಲ್ಲಿ ರಣಬೀರ್​ ಕಪೂರ್​ ಪಡೆದ ಅಂಕ ಎಷ್ಟು? ನಿರೀಕ್ಷಿಸಿದ್ದೇ ಬೇರೆ, ಆಗಿದ್ದೇ ಬೇರೆ
Image
‘ನಟನೆ ಬರದಿದ್ದರೂ ಪ್ರಮೋಷನ್​ಗೆ ಬರುತ್ತಾರೆ’; ಸಂದರ್ಶನದಲ್ಲಿ ಟ್ರೋಲ್ ಆದ ರಣಬೀರ್ ಕಪೂರ್ ​
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?

ಪುಟ್ಟ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸ ಅಲ್ಲ. ಅದನ್ನು ರಣಬೀರ್​ ಕಪೂರ್​ ಈಗಲೇ ಅಭ್ಯಾಸ ಮಾಡಿಕೊಳ್ಳುತ್ತಿದ್ದಾರೆ. ಮಗುವನ್ನು ಹೇಗೆ ಎತ್ತಿಕೊಳ್ಳಬೇಕು? ಡೈಪರ್​ ಬದಲಿಸುವುದು ಹೇಗೆ? ಬಾಟಲಿಯಲ್ಲಿ ಹಾಲು ಕುಡಿಸುವುದು ಹೇಗೆ ಎಂಬಿತ್ಯಾದಿ ಪಾಠಗಳನ್ನು ಅವರು ಕಲಿಯುತ್ತಿದ್ದಾರೆ. ಈ ವಿಡಿಯೋ ಸಖತ್​ ವೈರಲ್​ ಆಗಿದೆ.

ಜುಲೈ 22ರಂದು ‘ಶಂಷೇರಾ’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ದ್ವಿಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ವಾಣಿ ಕಪೂರ್​ ನಟಿಸಿದ್ದಾರೆ. ಈಗಾಗಲೇ ಟ್ರೇಲರ್​ ಧೂಳೆಬ್ಬಿಸಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ಸಂಜಯ್​ ದತ್​ ಅವರು ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಶಂಷೇರಾ’ ಚಿತ್ರ ನಿರೀಕ್ಷೆ ಮೂಡಿಸಿದೆ. ಇನ್ನು, ರಣಬೀರ್​ ಕಪೂರ್​ ನಟಿಸಿರುವ ‘ಬ್ರಹ್ಮಾಸ್ತ್ರ’ ಚಿತ್ರ ಕೂಡ ಹೈಪ್​ ಸೃಷ್ಟಿ ಮಾಡಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ