AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶಾದ್ಯಂತ ನಾನ್​-ವೆಜ್ ಬ್ಯಾನ್ ಮಾಡಿ’; ಶತ್ರುಘ್ನ ಸಿನ್ಹಾ ಆಗ್ರಹಕ್ಕೆ ಟೀಕೆ

ಶತ್ರುಘ್ನ ಸಿನ್ಹಾ ಅವರು ಉತ್ತರಾಖಂಡದಲ್ಲಿ ಜಾರಿಯಾದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಬಗ್ಗೆ ಪ್ರತಿಕ್ರಿಯಿಸುತ್ತಾ ದೇಶಾದ್ಯಂತ ಮಾಂಸಾಹಾರ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಇದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಯುಸಿಸಿ ಜಾರಿಯನ್ನು ಅವರು ಸ್ವಾಗತಿಸಿದರೂ, ಅದರಲ್ಲಿನ ಲೋಪದೋಷಗಳನ್ನು ಸೂಚಿಸಿ ಸರ್ವಪಕ್ಷ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

‘ದೇಶಾದ್ಯಂತ ನಾನ್​-ವೆಜ್ ಬ್ಯಾನ್ ಮಾಡಿ’; ಶತ್ರುಘ್ನ ಸಿನ್ಹಾ ಆಗ್ರಹಕ್ಕೆ ಟೀಕೆ
ಶತ್ರುಘ್ನ ಸಿನ್ಹಾ
ರಾಜೇಶ್ ದುಗ್ಗುಮನೆ
|

Updated on: Feb 06, 2025 | 8:48 AM

Share

ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಅವರು ಮಾತನಾಡುವಾಗ ಎಡವಿ ಸಾಕಷ್ಟು ವಿವಾದ ಮಾಡಿಕೊಂಡಿದ್ದು ಇದೆ. ಈಗ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುನಿಫಾರ್ಮ್​ ಸಿವಿಲ್ ಕೋಡ್) ಜಾರಿಗೆ ಬಂದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದೇಶಾದ್ಯಂತ ಮಾಂಸಾಹಾರವನ್ನು ಬ್ಯಾನ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅವರ ಹೇಳಿಕೆ ಈಗ ಸಾಕಷ್ಟು ಟೀಕೆಗಳನ್ನು ಎದುರಿಸಿದೆ.

ಉತ್ತರಾಖಂಡ ಸರ್ಕಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ಬಗ್ಗೆ ಶತ್ರುಘ್ನ ಸಿನ್ಹಾಗೆ ಪ್ರಶ್ನೆ ಮಾಡಲಾಯಿತು. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘UCCನ ಉತ್ತರಾಖಂಡದಲ್ಲಿ ಪ್ರಾಥಮಿಕ ಹಂತದಲ್ಲಿ ಜಾರಿಗೆ ತಂದಿದ್ದು ಖುಷಿ ಇದೆ. ಇದು ದೇಶದಾದ್ಯಂತ ಬರಬೇಕು ಎಂಬುದು ನನ್ನ ಆಗ್ರಹ’ ಎಂದು ಅವರು ಹೇಳಿದ್ದಾರೆ.

‘ಏಕರೂಪ ನಾಗರಿಕ ಸಂಹಿತೆಯಲ್ಲಿ ಹಲವು ಸೂಕ್ಷ್ಮ ವಿಚಾರ ಮತ್ತು ಲೋಪದೋಷಗಳಿವೆ. ಕೇವಲ ಗೋಮಾಂಸವಲ್ಲ, ಒಟ್ಟಾರೆಯಾಗಿ ಮಾಂಸಾಹಾರವನ್ನೇ ದೇಶದಲ್ಲಿ ನಿಷೇಧಿಸಬೇಕು. ಆದರೆ ಉತ್ತರ ಭಾರತದಲ್ಲಿ ಹೇರಬಹುದಾದ ನಿಯಮಗಳನ್ನು ಈಶಾನ್ಯ ರಾಜ್ಯಗಳಲ್ಲಿ ಹೇರಲು ಸಾಧ್ಯವಿಲ್ಲ. ಯುಸಿಸಿ ನಿಬಂಧನೆಗಳನ್ನು ರಚಿಸುವ ಮೊದಲು ಸರ್ವಪಕ್ಷ ಸಭೆ ನಡೆಸಬೇಕು’ ಎಂದು ಅವರು ಹೇಳಿದ್ದಾರೆ.

ಶತ್ರುಘ್ನ ಅವರ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ಯುಸಿಸಿಯಲ್ಲಿ ಯಾವ ಆಹರ ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂಬುದನ್ನು ಹೇಳುತ್ತಾರಾ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ‘ಯುಸಿಸಿ ಆಹಾರ ಮತ್ತು ಅಭ್ಯಾಸಗಳ ಬಗ್ಗೆ ಇಲ್ಲ. ಇದು ಮದುವೆ ಮತ್ತು ಆಸ್ತಿಗಳ ಹಕ್ಕಿನ ಬಗ್ಗೆ ಇರುವ ಕಾಯ್ದೆ’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಹುಡುಗನ ಮದುವೆ ಆದ ಸೋನಾಕ್ಷಿ ಬಗ್ಗೆ ಟೀಕೆ; ಪ್ರತಿಕ್ರಿಯಿಸಿದ ಶತ್ರುಘ್ನ ಸಿನ್ಹಾ

ಈ ವಿಚಾರದಲ್ಲಿ ಸತ್ರುಘ್ನ ಸಿನ್ಹಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಮೊದಲು ಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ ಸಿನ್ಹಾ ಜಹೀರ್ ಇಕ್ಬಾಲ್​ನ ವಿವಾಹ ಆದಾಗ ಸಾಕಷ್ಟು ಚರ್ಚೆಗಳು ನಡೆದಿದ್ದವು. ಈ ಮದುವೆಗೆ ಶತ್ರುಘ್ನ ಅವರ ಒಪ್ಪಿಗೆ ಇಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅವರು ಒಪ್ಪಿ ವಿವಾಹ ಮಾಡಿಕೊಟ್ಟರು. ಈ ಬಗ್ಗೆ ಟೀಕೆ ಮಾಡಿದವರ ವಿರುದ್ಧ ಶತ್ರುಘ್ನ ಸಿನ್ಹಾ ಕಿಡಿಕಾರಿದ್ದರು.

ಚಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.