Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ

ಶೆಹನಾಜ್ ಗಿಲ್ ಹೆಚ್ಚು ಖ್ಯಾತಿ ಪಡೆದಿದ್ದು ‘ಬಿಗ್ ಬಾಸ್ ಹಿಂದಿ ಸೀಸನ್ 13’ಕ್ಕೆ ಬಂದ ಬಳಿಕ. ಆ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತು. ಪಂಜಾಬ್ ಮೂಲದ ಅವರು ಕಿರುತೆರೆ ಮೂಲಕ ಫೇಮಸ್ ಆದರು.

Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ
ಸಲ್ಲು-ಶೆಹನಾಜ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 03, 2023 | 12:39 PM

ನಟ ಸಲ್ಮಾನ್ ಖಾನ್ (Salman Khan) ಅವರ ಜೊತೆಗೆ ನಟಿಸಬೇಕು ಅನ್ನೋದು ಅನೇಕರ ಕನಸು. ಆದರೆ, ಎಲ್ಲರಿಗೂ ಈ ಅವಕಾಶ ಸಿಗೋದಿಲ್ಲ. ನಟಿ ಶೆಹನಾಜ್ ಗಿಲ್​ ಅವರಿಗೆ ಈ ರೀತಿಯ ಅಪರೂಪದ ಅವಕಾಶ ಸಿಕ್ಕಿತ್ತು. ಈ ಅವಕಾಶ ಸಿಕ್ಕ ಬಳಿಕ ಅವರ ಅದೃಷ್ಟ ಬದಲಾಗಿದೆ. ಅವರು ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿದ್ದಾರೆ ಎಂದು ವರದಿ ಆಗಿದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ (Kisi Ka Bhai Kisi Ki Jaan Movie) ಬಳಿಕ ಅವರಿಗೆ ಆಫರ್ ಹೆಚ್ಚಾಗಿದೆ. ಹೀಗಾಗಿ, ಒಂದು ಸ್ವಂತ ಮನೆ ಹೊಂದುವ ಕನಸು ಅವರಿಗೆ ಇತ್ತು. ಆ ಕನಸು ಈಗ ನನಸಾಗಿದೆ.

ಶೆಹನಾಜ್ ಗಿಲ್ ಹೆಚ್ಚು ಖ್ಯಾತಿ ಪಡೆದಿದ್ದು ‘ಬಿಗ್ ಬಾಸ್ ಹಿಂದಿ ಸೀಸನ್ 13’ಕ್ಕೆ ಬಂದ ಬಳಿಕ. ಆ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತು. ಪಂಜಾಬ್ ಮೂಲದ ಅವರು ಕಿರುತೆರೆ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಿರುವಾಗಲೇ ಅವರು ಮುಂಬೈನಲ್ಲಿ ಮನೆ ಖರೀದಿಸಿದ್ದಾರೆ ಎನ್ನಲಾಗಿದೆ. ಈ ಮನೆ ಮುಂಬೈನಲ್ಲಿ ಎಲ್ಲಿದೆ? ಅದರ ಬೆಲೆ ಎಷ್ಟು? ಎಂಬಿತ್ಯಾದಿ ವಿಚಾರಗಳ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯ ಆಗಬೇಕಿದೆ.

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಏಪ್ರಿಲ್ 21ರಂದು ತೆರೆಗೆ ಬಂತು. ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತು. ಈ ಚಿತ್ರದಿಂದ ಶೆಹನಾಜ್ ಜನಪ್ರಿಯತೆ ಹೆಚ್ಚಿತು. ಶೆಹನಾಜ್ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ಸ್ಟಾರ್ ನಟಿ ಆಗಿ ಮಿಂಚಲಿ ಎಂಬುದು ಅನೇಕರ ಕೋರಿಕೆ.

ಇದನ್ನೂ ಓದಿ: 100 ಕೋಟಿ ರೂಪಾಯಿ ಕ್ಲಬ್​ ಸೇರಿವೆ ಸಲ್ಮಾನ್​ ಖಾನ್​ ನಟನೆಯ 16 ಚಿತ್ರಗಳು; ಇಲ್ಲಿದೆ ಪಟ್ಟಿ

ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರಿಗೆ ಸಿದ್ದಾರ್ಥ್ ಶುಕ್ಲಾ ಜೊತೆ ಪ್ರೀತಿ ಮೂಡಿತು. ಅವರು ಇನ್ನೇನು ಮದುವೆ ಆಗಬೇಕಿತ್ತು. ಆದರೆ, ಶೆಹನಾಜ್ ಹೃದಯಾಘಾತದಿಂದ ನಿಧನ ಹೊಂದಿದರು. ಇದಾದ ಬಳಿಕ ಅವರು ಕಣ್ಣೀರಲ್ಲಿ ಕೈತೊಳೆದರು. ಶೆಹನಾಜ್ ಗಿಲ್ ಅವರನ್ನು ಸಲ್ಮಾನ್ ಖಾನ್ ಅನೇಕ ಬಾರಿ ಸಮಾಧಾನ ಮಾಡಿದ್ದಿದೆ. ಈಗ ಅವರು ದುಃಖ ಮರೆತು ಚೇತರಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ