AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ನಿಧನ; ಗೆಳತಿ ಶೆಹನಾಜ್​ ಪರಿಸ್ಥಿತಿ ಹೇಗಿದೆ? ಪ್ರತಿಕ್ರಿಯೆ ನೀಡಿದ ತಂದೆ

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ಧಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು.

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ನಿಧನ; ಗೆಳತಿ ಶೆಹನಾಜ್​ ಪರಿಸ್ಥಿತಿ ಹೇಗಿದೆ? ಪ್ರತಿಕ್ರಿಯೆ ನೀಡಿದ ತಂದೆ
ಸಿದ್ಧಾರ್ಥ್ ಶುಕ್ಲಾ , ಶೆಹನಾಜ್ ಗಿಲ್
TV9 Web
| Edited By: |

Updated on: Sep 02, 2021 | 4:55 PM

Share

ಬಿಗ್​ ಬಾಸ್​ ಸೀಸನ್​ 13ರ ವಿನ್ನರ್​ ಸಿದ್ಧಾರ್ಥ್​ ಶುಕ್ಲಾ ಅವರು ಗುರುವಾರ (ಸೆ.2) ನಿಧನರಾಗಿರುವ ಸುದ್ದಿ ಕೇಳಿ ಇಡೀ ಬಾಲಿವುಡ್​ ಶಾಕ್​ನಲ್ಲಿದೆ. ಫಿಟ್​ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದ 40ರ ಪ್ರಾಯದ ಅವರು ಹೀಗೆ ಏಕಾಏಕಿ ಬಾರದ ಲೋಕಕ್ಕೆ ತೆರಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ರಾತ್ರಿ ಯಾವುದೋ ಔಷಧಿ ಸೇವಿಸಿ ಮಲಗಿದ್ದ ಅವರು ಬೆಳಗಾಗುವುದರೊಳಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವರದಿ ಆಗಿದೆ. ಸಿದ್ಧಾರ್ಥ್​ ಶುಕ್ಲಾ ಜೊತೆ ನಟಿ ಶೆಹನಾಜ್​ ಗಿಲ್​ ತುಂಬ ಆಪ್ತವಾಗಿದ್ದರು. ಗೆಳೆಯನ ಸಾವಿನ ಸುದ್ದಿ ತಿಳಿದ ಬಳಿಕ ಅವರ ಸ್ಥಿತಿ ಬಗ್ಗೆ ಕುಟುಂಬದವರಿಗೆ ಚಿಂತೆ ಆಗಿದೆ.

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ಧಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು. ದೊಡ್ಮನೆಯಿಂದ ಹೊರಬಂದ ಬಳಿಕವೂ ಅವರ ನಡುವಿನ ಗೆಳೆತನ ಮುಂದುವರಿದಿತ್ತು. ಇತ್ತೀಚೆಗೆ ಹಲವು ಬಾರಿ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದರು. ಕೆಲವು ರಿಯಾಲಿಟಿ ಶೋಗಳಲ್ಲಿ ಜೊತೆಯಾಗಿ ಪರ್ಫಾಮ್​ ಮಾಡಿದ್ದರು. ಒಂದೆರಡು ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಜೋಡಿ ಆಗಿದ್ದರು. ಆದರೆ ಈಗ ಗೆಳೆಯನನ್ನು ಕಳೆದುಕೊಂಡು ಶೆಹನಾಜ್​ ಒಂಟಿ ಆಗಿದ್ದಾರೆ.

ಸಿದ್ಧಾರ್ಥ್​ ಸಾವಿನ ನಂತರ ಶೆಹನಾಜ್​ ಅವರು ಮಾನಸಿಕವಾಗಿ ಕುಸಿದುಹೋಗಿದ್ದಾರೆ. ಅವರಿಗೆ ಧೈರ್ಯ ತುಂಬಲು ಇಡೀ ಕುಟುಂಬವೇ ಮುಂದಾಗಿದೆ. ಮಾಧ್ಯಮವೊಂದಕ್ಕೆ ಅವರ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೆಹನಾಜ್​ ಜೊತೆ ಮಾತನಾಡಿದ್ದೇನೆ. ಆಕೆಯ ಪರಿಸ್ಥಿತಿ ಚೆನ್ನಾಗಿಲ್ಲ. ಅವಳ ಜೊತೆ ಇರಲು ನನ್ನ ಮಗ ಈಗ ಮುಂಬೈಗೆ ತೆರಳುತ್ತಿದ್ದಾನೆ. ನಂತರ ನಾನು ಕೂಡ ಅಲ್ಲಿಗೆ ಹೋಗುತ್ತೇನೆ’ ಎಂದು ಶೆಹನಾಜ್​ ತಂದೆ ಹೇಳಿದ್ದಾರೆ. ಈವರೆಗೂ ಶೆಹನಾಜ್​ ಗಿಲ್​ ಪ್ರತಿಕ್ರಿಯೆ ನೀಡಿಲ್ಲ.

ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಸಿದ್ಧಾರ್ಥ್​ ಶುಕ್ಲಾ ಅಗಲಿದ್ದಾರೆ. ಮಾಡೆಲ್​ ಆಗಿ ವೃತ್ತಿಜೀವನ ಆರಂಭಿಸಿದ್ದ ಅವರು ನಂತರ ಕಿರುತೆರೆಯಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಹಲವು ಧಾರಾವಾಹಿಗಳಲ್ಲಿ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಅವರು ವಿನ್ನರ್​ ಆಗಿ ಹೊರಹೊಮ್ಮಿದ ಬಳಿಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದರು. ಬಿಗ್​ ಬಾಸ್​ ಮಾತ್ರವಲ್ಲದೆ, ‘ಕತ್ರೋಂಕೆ ಕಿಲಾಡಿ ಸೀಸನ್​ 7’ರಲ್ಲೂ ಅವರು ವಿನ್ನರ್​ ಆಗಿದ್ದರು. ಬಿಗ್​ ಬಾಸ್​ 14ರಲ್ಲಿ ಅವರು ಗೆಸ್ಟ್​ ಆಗಿ ದೊಡ್ಮನೆ ಪ್ರವೇಶಿಸಿದ್ದರು.

ಇದನ್ನೂ ಓದಿ:

ಸಿದ್ಧಾರ್ಥ್​ ಶುಕ್ಲಾ ಆಸ್ತಿ ಮೌಲ್ಯ ಎಷ್ಟು, ಅವರ ಬಳಿ ಇದ್ದ ಕಾರುಗಳಾವವು? ಇಲ್ಲಿದೆ ಮಾಹಿತಿ

ಸಿದ್ಧಾರ್ಥ್​ ಶುಕ್ಲಾ ಜೊತೆ ಕೆಲಸ ಮಾಡಿದ್ದ ಸಂಜನಾ ಗಲ್ರಾನಿ; ಜೀವನ ಇಷ್ಟೇನಾ ಎಂದ ನಟಿ

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು