Sherlyn Chopra: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಪೊಲೀಸರ ಮುಂದೆ ಹಾಜರಾದ ನಟಿ ಶೆರ್ಲಿನ್ ಚೋಪ್ರಾ

Raj Kundra Case: ರಾಜ್ ಕುಂದ್ರಾ ಅವರ ನೀಲಿ ಚಿತ್ರಗಳ ತಯಾರಿಕೆ ಮತ್ತು ಹಂಚಿಕೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು, ನಟಿ ಶೆರ್ಲಿನ್ ಚೋಪ್ರಾ ಮುಂಬೈ ಪೊಲೀಸರ ಮುಂದೆ ಹಾಜರಾಗಿದ್ದಾರೆ.

Sherlyn Chopra: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಪೊಲೀಸರ ಮುಂದೆ ಹಾಜರಾದ ನಟಿ ಶೆರ್ಲಿನ್ ಚೋಪ್ರಾ
ರಾಜ್​ ಕುಂದ್ರಾ- ಶೆರ್ಲಿನ್​ ಚೋಪ್ರಾ
Follow us
TV9 Web
| Updated By: shivaprasad.hs

Updated on: Aug 06, 2021 | 5:04 PM

ನಟಿ, ಮಾಡೆಲ್ ಶರ್ಲಿನ್ ಚೋಪ್ರಾ ಇಂದು ಮುಂಬೈನ ಅಪರಾಧ ತಡೆ ವಿಭಾಗದ ಪೊಲೀಸರ ಎದುರು ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ಅಪರಾಧ ತಡೆ ವಿಭಾಗವು ಶೆರ್ಲಿನ್ ಚೋಪ್ರಾಗೆ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಅವರು ಹಾಜರಾಗಿರಲಿಲ್ಲ. ವಿಭಾಗದ ಮುಂದೆ ಹಾಜರಾಗಲು ಇಂದು ಕೊನೆಯ ದಿನವಾಗಿತ್ತು. ಇಂದು ಕೆಲ ದಾಖಲೆಗಳನ್ನು ತೆಗೆದುಕೊಂಡು ಪೊಲೀಸರ ಮುಂದೆ ಹಾಜರಾದ ಶೆರ್ಲಿನ್, ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ.

ಕೆಲವು ಉನ್ನತ ಮೂಲಗಳ ಪ್ರಕಾರ ಶೆರ್ಲಿನ್ ರಾಜ್ ಕುಂದ್ರಾ ವಿರುದ್ಧ ಸಾಕ್ಷವನ್ನು ಹೇಳಲು ಒಪ್ಪಿದ್ದಾರೆ ಎನ್ನಲಾಗಿದೆ. ಈ ಮೊದಲೂ ಸಹ ರಾಜ್ ಕುಂದ್ರಾ ವಿರುದ್ಧ ಹೇಳಿಕೆಗಳನ್ನು ನೀಡಿದ್ದ ಶೆರ್ಲಿನ್, ಕುಂದ್ರಾ ವಿರುದ್ಧ ತಾವೇ ಮೊದಲು ಪೊಲೀಸರಿಗೆ ಮಾಹಿತಿ ನೀಡಿದ್ದಾಗಿಯೂ ಹೇಳಿಕೊಂಡಿದ್ದರು. ಆದರೆ ಇತ್ತೀಚೆಗೆ ಹಲವು ದಿನಗಳಿಂದ ಅಪರಾಧ ಪತ್ತೆ ವಿಭಾಗವು ಶೆರ್ಲಿನ್ ಅವರಿಗೆ ರಾಜ್ ಕುಂದ್ರಾ  ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಜರಾಗಿ ಹೇಳಿಕೆ ನೀಡಲು, ಸಮನ್ಸ್ ಜಾರಿ ಮಾಡಿದ್ದರೂ ಶೆರ್ಲಿನ್ ಹಾಜರಾಗಿರಲಿಲ್ಲ. ಜೊತೆಗೆ ಅವರು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಶೆರ್ಲಿನ್ ಮನವಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿನ ಮನವಿಯಲ್ಲಿ, ಶೆರ್ಲಿನ್ ತಮ್ಮ ಮೇಲಿರುವ ಆರೋಪಗಳ ಬಗ್ಗೆ ತಮಗೆ ತಿಳಿದೇ ಇಲ್ಲ. ಜೊತೆಗೆ ಅವರ ಮೇಲಿರುವ ಆರೋಪದ ಕುರಿತ ಪ್ರತಿಯನ್ನೂ ನೀಡಿಲ್ಲ ಎಂದಿದ್ದರು. ಆದರೆ ಕೆಲವು ಮೂಲಗಳ ಪ್ರಕಾರ, ಶೆರ್ಲಿನ್ ಮೇಲಿರುವ ಆರೋಪಗಳಿಗೆ ಜಾಮೀನು ರಹಿತ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಮನವಿಯನ್ನು ನ್ಯಾಯಾಲಯ ಸ್ಪಷ್ಟವಾಗಿ ನಿರಾಕರಿಸಿದೆ. ಬಂಧನದ ಕಾರಣಕ್ಕಾಗಿಯೇ ಶೆರ್ಲಿನ್ ಚೋಪ್ರಾ ಪೊಲೀಸರ ಮುಂದೆ ಹಾಜರಾಗಲು ಹಿಂದೆ ಸರಿದಿರಬಹುದು ಎಂದೂ ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ:

ಶನಿವಾರ ನಡೆಯಲಿದೆ ರಾಜ್​ಕುಂದ್ರಾ ಜಾಮೀನು ಅರ್ಜಿ ವಿಚಾರಣೆ; ಶೆರ್ಲಿನ್​ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Virat Kohli: ಕಪಿಲ್ ಶರ್ಮ ಶೋ ನೋಡಿ 3 ಲಕ್ಷ ಕಳೆದುಕೊಂಡಿದ್ದ ವಿರಾಟ್ ಕೊಹ್ಲಿ!

(Sherlyn chopra questioned by Mumbai Crime branch Police in Raj Kundra Case)

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್