Nikamma trailer: ದೇವಿ ಅವತಾರದಲ್ಲಿ ದರ್ಶನ ಕೊಟ್ಟ ಶಿಲ್ಪಾ ಶೆಟ್ಟಿ; ಯಾವುದು ಈ ಹೊಸ ಸಿನಿಮಾ?

ಶಿಲ್ಪಾ ಶೆಟ್ಟಿ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಿಂದ ಬ್ರೇಕ್​ ತೆಗೆದುಕೊಳ್ಳುವ ಬಗ್ಗೆ ಘೋಷಣೆ ಮಾಡಿದ್ದರು. ಹೊಸ ಅವತಾರ ಸಿಗುವವರೆಗೆ ಬ್ರೇಕ್​ನಲ್ಲಿರುತ್ತೇನೆ ಎಂದಿದ್ದರು. ಈಗ ಅವರು ಹೊಸ ಗೆಟಪ್​ನಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ.

Nikamma trailer: ದೇವಿ ಅವತಾರದಲ್ಲಿ ದರ್ಶನ ಕೊಟ್ಟ ಶಿಲ್ಪಾ ಶೆಟ್ಟಿ; ಯಾವುದು ಈ ಹೊಸ ಸಿನಿಮಾ?
ಶಿಲ್ಪಾ ಶೆಟ್ಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 17, 2022 | 6:01 PM

ನಟಿ ಶಿಲ್ಪಾ ಶೆಟ್ಟಿ (Shilap Shetty) ಇತ್ತೀಚೆಗೆ ಫ್ಯಾಮಿಲಿ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಹೀಗಾಗಿ, ಅವರು ಸಿನಿಮಾ ವಿಚಾರದಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ತಮ್ಮ ಪಾಲಿಗೆ ಬರುವ ಎಲ್ಲಾ ಸಿನಿಮಾಗಳನ್ನು ಅವರು ಒಪ್ಪಿಕೊಳ್ಳುತ್ತಿಲ್ಲ. ಪಾತ್ರ ಉತ್ತಮವಾಗಿದ್ದರೆ ಮಾತ್ರ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡುತ್ತಾರೆ. ಈ ಬಾರಿ ಶಿಲ್ಪಾ ಶೆಟ್ಟಿ ಹೊಸ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಚಿತ್ರಕ್ಕೆ ‘ನಿಕಮ್ಮಾ’ (Nikamma trailer) ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ದೇವಿ ಹಾಗೂ ಸೂಪರ್​ ವುಮನ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು (ಮೇ 17) ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಈ ಸಿನಿಮಾದಲ್ಲಿ ಅಭಿಮನ್ಯು ದಸ್ಸಾನಿ ಹಾಗೂ ಶಿರ್ಲೆ ಸೇಟಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರದ್ದೂ ಕಾಲೇಜ್ ಲವ್​ಸ್ಟೋರಿ. ಕಥಾನಾಯಕನ ಪಾತ್ರದಲ್ಲಿ ಶಿಲ್ಪಾ ಶೆಟ್ಟಿ ಅವರ ಎಂಟ್ರಿ ಆಗುತ್ತದೆ. ನಂತರ ಏನೆಲ್ಲ ಆಗುತ್ತದೆ ಎಂಬುದೇ ಸಿನಿಮಾದ ಹೈಲೈಟ್ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯ ಒದಗಿಸಿದೆ. ‘ಕಂಬಕ್ತ್​ ಇಷ್ಕ್​’, ‘ಹೀರೋಪಂತಿ’, ‘ಭಾಗಿ’ ಅಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿ ಭೇಷ್ ಎನಿಸಿಕೊಂಡಿರುವ ಸಬ್ಬಿರ್ ಖಾನ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಿಂದ ಬ್ರೇಕ್ ತೆಗೆದುಕೊಂಡ ಶಿಲ್ಪಾ ಶೆಟ್ಟಿ; ನಟಿಗೆ ಬೇಸರ ತರಿಸಿದ್ದೇನು?

ಇದನ್ನೂ ಓದಿ
Image
ಸೋಶಿಯಲ್ ಮೀಡಿಯಾದಿಂದ ಬ್ರೇಕ್ ತೆಗೆದುಕೊಂಡ ಶಿಲ್ಪಾ ಶೆಟ್ಟಿ; ನಟಿಗೆ ಬೇಸರ ತರಿಸಿದ್ದೇನು?
Image
Shilpa Shetty: ವಿವಾದಗಳ ಬಗ್ಗೆ ಕೊನೆಗೂ ಮೌನ ಮುರಿದ ಜಾಕ್ವೆಲಿನ್; ಸಮಾಧಾನ ಹೇಳಿದ ಶಿಲ್ಪಾ ಶೆಟ್ಟಿ
Image
Shilpa Shetty: ಶಿಲ್ಪಾ, ಶಮಿತಾ ಹಾಗೂ ಸುನಂದಾ ಶೆಟ್ಟಿಗೆ ಸಮನ್ಸ್ ನೀಡಿದ ಅಂಧೇರಿ ನ್ಯಾಯಾಲಯ; ಏನಿದು ಪ್ರಕರಣ?
Image
Shilpa Shetty: ಕಿಸ್ಸಿಂಗ್​ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಗೆ ರಿಲೀಫ್​ ನೀಡಿದ ಕೋರ್ಟ್​

ಶಿರ್ಲೆ ಅವರು ಗಾಯಕಿ. ಅವರು ಈಗ ಚಿತ್ರರಂಗದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ಗ್ಲಾಮರ್ ಲುಕ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇದು ಅವರ ಮೂರನೇ ಸಿನಿಮಾ. ಅಭಿಮನ್ಯು ಅವರು ಈ ಮೊದಲು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನಂತರ ನಟನೆಗೆ ಕಾಲಿಟ್ಟರು. ಅವರು ‘ನಿಕಮ್ಮಾ’ ಟ್ರೇಲರ್​ನಲ್ಲಿ ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಯಶ್ ಸ್ಟೈಲ್ ಕಾಪಿ ಮಾಡಿದ ನಟಿ ಶಿಲ್ಪಾ ಶೆಟ್ಟಿ; ವೈರಲ್ ಆಗುತ್ತಿದೆ ವಿಡಿಯೋ

ಶಿಲ್ಪಾ ಶೆಟ್ಟಿ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಿಂದ ಬ್ರೇಕ್​ ತೆಗೆದುಕೊಳ್ಳುವ ಬಗ್ಗೆ ಘೋಷಣೆ ಮಾಡಿದ್ದರು. ಹೊಸ ಅವತಾರ ಸಿಗುವವರೆಗೆ ಬ್ರೇಕ್​ನಲ್ಲಿರುತ್ತೇನೆ ಎಂದಿದ್ದರು. ಈಗ ಅವರು ಹೊಸ ಗೆಟಪ್​ನಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲವೂ ಅಭಿಮಾನಿಗಳಲ್ಲಿದೆ. ಈ ಚಿತ್ರ ಜೂನ್ 17ರಂದು ತೆರೆಗೆ ಬರುತ್ತಿದೆ. ಸೋನಿ ಪಿಕ್ಚರ್ಸ್ ಹಾಗೂ ಶಬ್ಬಿರ್ ಖಾನ್ ಇಬ್ಬರೂ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:00 pm, Tue, 17 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ