AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ದಂಧೆ ಕೇಸ್​; ಶಿಲ್ಪಾ ಶೆಟ್ಟಿ ಮನೆ ಮೇಲೆ ಪೊಲೀಸ್ ದಾಳಿ

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದರು. ಈಗ ಅವರನ್ನು ಜುಲೈ 27ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ.

ಅಶ್ಲೀಲ ವಿಡಿಯೋ ದಂಧೆ ಕೇಸ್​; ಶಿಲ್ಪಾ ಶೆಟ್ಟಿ ಮನೆ ಮೇಲೆ ಪೊಲೀಸ್ ದಾಳಿ
ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ ದಂಪತಿ
TV9 Web
| Edited By: |

Updated on: Jul 23, 2021 | 5:29 PM

Share

ಅಶ್ಲೀಲ ಸಿನಿಮಾ ಚಿತ್ರೀಕರಣ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಶಿಲ್ಪಾ ಶೆಟ್ಟಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಅವರನ್ನು ಬಂಧಿಸಿ ನಾಲ್ಕು ದಿನ ಕಳೆದಿದೆ. ಈಗ ಮುಂಬೈನ ಜುಹುದಲ್ಲಿರುವ ಶಿಲ್ಪಾ ಶೆಟ್ಟಿ (Shilpa Shetty) ಮನೆ ಮೇಲೆ ಕ್ರೈಮ್​ ಬ್ರ್ಯಾಂಚ್​ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದರು. ಈಗ ಅವರನ್ನು ಜುಲೈ 27ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಅಪರಾಧ ವಿಭಾಗದ ಒಂದು ತಂಡ ಜುಹುದಲ್ಲಿರುವ ರಾಜ್​ ಕುಂದ್ರಾ ಅವರ ಒಡೆತನದ ಬಂಗಲೆ ಮೇಲೆ ದಾಳಿ ನಡೆಸಿದೆ. ಈ ದಾಳಿ ತನಿಖೆ ದೃಷ್ಟಿಯಲ್ಲಿ ಬಹಳ ಮಹತ್ವ ಪಡೆದುಕೊಂಡಿದೆ.

ರಾಜ್​ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್​ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು. ಅಂತಿಮವಾಗಿ ನ್ಯಾಯಾಲಯ ರಾಜ್​ ಕುಂದ್ರಾ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ.

ರಾಜ್​ ಕುದ್ರಾ ಅವರನ್ನು ವಶಕ್ಕೆ ಪಡೆದಿರೋದು ಅಕ್ರಮ ಎಂದು ಅವರ ಪರ ವಕೀಲರು ಹೇಳಿದ್ದಾರೆ. ‘ರಾಜ್​ ಕುಂದ್ರಾ ಅವರ ಕಂಪನಿ ಅಡಿಯಲ್ಲಿ ಸಿದ್ಧವಾದವು ನೀಲಿಚಿತ್ರ ಎಂದು ಹೇಳೋಕೆ ಪುರಾವೆ ಇಲ್ಲ. ಹೀಗಿರುವಾಗ ಅವರ ಬಂಧನ ಮಾಡಿದ್ದು ಏಕೆ? ಇದು ಸರಿಯಲ್ಲ. ಇದನ್ನು ನಾವು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡುತ್ತೇವೆ’ ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ