Shilpa Shetty: ರಾಜ್​ ಕುಂದ್ರಾ ಜೈಲಿನಲ್ಲಿರುವಾಗಲೇ ಗುಡ್​ ನ್ಯೂಸ್​ ನೀಡಿದ ಶಿಲ್ಪಾ ಶೆಟ್ಟಿ

Super Dancer 4: ಸೋನಿ ಟಿವಿಯ ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಆ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಇದು ವೀಕ್ಷಕರಿಗೂ ಇಷ್ಟವಾಗುತ್ತಿತ್ತು.

Shilpa Shetty: ರಾಜ್​ ಕುಂದ್ರಾ ಜೈಲಿನಲ್ಲಿರುವಾಗಲೇ ಗುಡ್​ ನ್ಯೂಸ್​ ನೀಡಿದ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ (ಸಂಗ್ರಹ ಚಿತ್ರ)
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 18, 2021 | 3:54 PM

ನಟಿ ಶಿಲ್ಪಾ ಶೆಟ್ಟಿ ಅವರಿಗೆ ಕಷ್ಟ ಕಾಲ ಶುರುವಾಗಿ ತಿಂಗಳಾಗಿದೆ. ಪೋರ್ನ್​ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಪತಿ ರಾಜ್​ ಕುಂದ್ರಾ ಅವರು ಸಿಕ್ಕಿ ಬಿದ್ದ ನಂತರದಲ್ಲಿ ಶಿಲ್ಪಾಗೆ ತೀವ್ರ ಮುಜುಗರ ಎದುರಿಸುತ್ತಿದ್ದಾರೆ. ಕೋರ್ಟು, ಕಚೇರಿ ಅಲೆಯಬೇಕಾಗಿದ್ದರಿಂದ ಅವರ ದಿನಚರಿ ಸಂಪೂರ್ಣ ತಲೆಕೆಳಾಗಾಗಿದೆ. ಸಾಕಷ್ಟು ಕಾರ್ಯಕ್ರಮಗಳಿಗೆ ಶಿಲ್ಪಾ ಶೆಟ್ಟಿ ತೆರಳಬೇಕಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ರಾಜ್​ ಕುಂದ್ರಾ ಬಂಧನ ನಡೆದು ಒಂದು ತಿಂಗಳಾಗಿದೆ. ಈ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಮತ್ತೆ ತಮ್ಮ ಕೆಲಸಕ್ಕೆ ಮರಳಿದ್ದಾರೆ. ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋ ಸೆಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.  

ಸೋನಿ ಟಿವಿಯ ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಆ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಇದು ವೀಕ್ಷಕರಿಗೂ ಇಷ್ಟವಾಗುತ್ತಿತ್ತು. ಆದರೆ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡ ನಂತರದಿಂದ ಶಿಲ್ಪಾ ಶೆಟ್ಟಿ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋ ಸೆಟ್​ಗೆ ಕಾಲಿಟ್ಟಿರಲಿಲ್ಲ. ಈಗ ಅವರು  ಮತ್ತೆ ಸೆಟ್​ಗೆ ಮರಳಿದ್ದಾರೆ.

ಮಂಗಳವಾರ (ಆಗಸ್ಟ್​ 17) ನಡೆದ ಶೂಟಿಂಗ್​ನಲ್ಲಿ ಶಿಲ್ಪಾ ಶೆಟ್ಟಿ ಪಾಲ್ಗೊಂಡಿದ್ದರು. ಈ ವೀಕೆಂಡ್​ನಲ್ಲಿ ಈ ಶೋ ಪ್ರಸಾರವಾಗಲಿದೆ. ಶಿಲ್ಪಾ ಶೆಟ್ಟಿ ಕಮ್​ಬ್ಯಾಕ್​ ಮಾಡಿದ್ದು ಇಡೀ ತಂಡಕ್ಕೆ ಸಾಕಷ್ಟು ಖುಷಿ ನೀಡಿದೆ. ಅಲ್ಲದೆ, ಇಡೀ ತಂಡ ಶಿಲ್ಪಾಗೆ ಅದ್ದೂರಿ ಸ್ವಾಗತ ನೀಡಿದೆ.

ರಾಜ್​ ಕುಂದ್ರಾ ಕೇಸ್​ ದಿನದಿಂದ ದಿನಕ್ಕೆ ಜಟಿಲ ಆಗುತ್ತಿದೆ. ಶಿಲ್ಪಾ ಶೆಟ್ಟಿ ಕೂಡ ಹಲವು ಬಾರಿ ಪೊಲೀಸರ ತನಿಖೆಗೆ ಒಳಪಡಬೇಕಾಗುತ್ತಿದೆ. ಅವರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಈ ಎಲ್ಲ ಘಟನೆಗಳಿಂದಾಗಿ ಶಿಲ್ಪಾ ಶೆಟ್ಟಿ ಮನೆ ಬಿಟ್ಟು ಹೊರಬರುತ್ತಿಲ್ಲ. ‘ಸೂಪರ್​ ಡ್ಯಾನ್ಸರ್​ 4’ ಕಾರ್ಯಕ್ರಮದ ಆಯೋಜಕರು ಹಲವು ಬಾರಿ ಸಂಪರ್ಕಿಸುವ ಪ್ರಯತ್ನ ಮಾಡಿದರೂ ಕೂಡ ಶಿಲ್ಪಾ ಶೆಟ್ಟಿ ಕಡೆಯಿಂದ ಪ್ರತಿಕ್ರಿಯೆ ಸಿಕ್ಕಿಲ್ಲ ಎನ್ನುವ ವರದಿ ಈ ಮೊದಲು ಬಿತ್ತರವಾಗಿತ್ತು.

ಇದನ್ನೂ ಒದಿ:Shamita Shetty: ಶಮಿತಾ ಶೆಟ್ಟಿಗೆ ಆಂಟಿ ಎಂದ ನಟಿ; ಜಗಳಕ್ಕೆ ಇಳಿದ ಶಿಲ್ಪಾ ಶೆಟ್ಟಿ ತಂಗಿ 

ಶಿಲ್ಪಾ ಶೆಟ್ಟಿಯಿಂದಾಗಿ ತಾವು ಅನುಭವಿಸಿದ ಹಿಂಸೆ ಬಗ್ಗೆ ವಿವರಿಸಿ ಗಳಗಳನೆ ಅತ್ತ ತಂಗಿ ಶಮಿತಾ ಶೆಟ್ಟಿ

Published On - 1:18 pm, Wed, 18 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ