ಪತಿ ಜೈಲಿನಿಂದ ಬಂದ ಬೆನ್ನಲ್ಲೇ ಸಖತ್ ಆಗಿ ಡ್ಯಾನ್ಸ್ ಮಾಡಿದ ನಟಿ ಶಿಲ್ಪಾ ಶೆಟ್ಟಿ
ಪಿಂಕ್ ಲೆಹಂಗಾ ತೊಟ್ಟಿದ್ದಾರೆ ಶಿಲ್ಪಾ. ಅವರ ಜತೆಗೆ ಗೀತಾ ಕೂಡ ಡ್ಯಾನ್ಸ್ ಮಾಡಿದ್ದಾರೆ. ಸದ್ಯ, ಈ ಡ್ಯಾನ್ಸ್ ನೋಡಿದ ಅಭಿಮಾನಿಗಳು ಸಾಕಷ್ಟು ಇಷ್ಟಪಟ್ಟಿದ್ದಾರೆ.
ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ. ಹೀಗಿರುವಾಗಲೆ ಶಿಲ್ಪಾ ಮಸ್ತ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.
ಶ್ರೀಲಂಕಾದ ‘ಮನಿಕೆ ಮಾಗೆ ಹಿತೆ..’ ಹಾಡು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದೆ. ಇನ್ಸ್ಟ್ರಾಗ್ರಾಮ್ ರೀಲ್ಸ್ನಲ್ಲಿ ಈ ಹಾಡು ರಾರಾಜಿಸುತ್ತಿದೆ. ಈ ಹಾಡು ಶಿಲ್ಪಾ ಶೆಟ್ಟಿಗೂ ಇಷ್ಟವಾಗಿದೆ. ಸೂಪರ್ ಡ್ಯಾನ್ಸರ್ ಚಾಪ್ಟರ್ 4ನ ಸೆಟ್ನಲ್ಲಿ ಶಿಲ್ಪಾ ಈ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಸದ್ಯ, ಈ ಹಾಡು ಸಾಕಷ್ಟು ವೈರಲ್ ಆಗುತ್ತಿದೆ.
ಪಿಂಕ್ ಲೆಹಂಗಾ ತೊಟ್ಟಿದ್ದಾರೆ ಶಿಲ್ಪಾ. ಅವರ ಜತೆಗೆ ಗೀತಾ ಕೂಡ ಡ್ಯಾನ್ಸ್ ಮಾಡಿದ್ದಾರೆ. ಸದ್ಯ, ಈ ಡ್ಯಾನ್ಸ್ ನೋಡಿದ ಅಭಿಮಾನಿಗಳು ಸಾಕಷ್ಟು ಇಷ್ಟಪಟ್ಟಿದ್ದಾರೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಪ್ರೊಫೈಲ್ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಟೈಗರ್ ಶ್ರಾಫ್ ಹಾಗೂ ಮಾಧುರಿ ದೀಕ್ಷಿತ್ ಕೂಡ ಈ ಹಾಡಿಗೆ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದರು.
ಪತಿ ರಾಜ್ ಕುಂದ್ರಾ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಪ್ರಸ್ತುತ ಸನ್ನಿವೇಶಕ್ಕೆ ಸೂಕ್ತ ಆಗುವಂತಹ ಕೆಲವು ಸಾಲುಗಳನ್ನು ಅವರು ಹಂಚಿಕೊಂಡಿದ್ದಾರೆ. ‘ನಿಮ್ಮನ್ನು ಕೆಳಗೆ ಬೀಳಿಸುವಂತಹ ಪರಿಸ್ಥಿತಿ ಸದಾ ಎದುರಾಗುತ್ತದೆ. ಇಂಥ ಸಂದರ್ಭದಲ್ಲಿ 7 ಸಲ ಬಿದ್ದರೂ ಕೂಡ, 8ನೇ ಸಲ ಎದ್ದು ನಿಲ್ಲುವಷ್ಟು ಶಕ್ತಿಯನ್ನು ತಂದುಕೊಳ್ಳಿ. ಕಷ್ಟದ ಪರಿಸ್ಥಿತಿಯಲ್ಲಿ ಎದ್ದು ನಿಲ್ಲಲು ಹೆಚ್ಚು ಬಲ, ಇಚ್ಛಾಶಕ್ತಿ ಮತ್ತು ಧೈರ್ಯ ಬೇಕು’ ಎಂದು ಶಿಲ್ಪಾ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.
ರಾಜ್ ಕುಂದ್ರಾಗೆ ಜಾಮೀನು ಸಿಕ್ಕ ನಂತರವೂ ಶಿಲ್ಪಾ ಇದೇ ರೀತಿ ಸಾಲೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ‘ಕೆಟ್ಟ ಚಂಡಮಾರುತದ ನಂತರ ಒಳ್ಳೆಯ ಸಂಗತಿಗಳು ನಡೆಯುತ್ತವೆ ಎಂಬುದನ್ನು ಸಾಬೀತು ಪಡಿಸುವುದಕ್ಕಾಗಿಯೇ ಕಾಮನಬಿಲ್ಲು ಇರುವುದು’ ಎಂಬ ಸಾಲನ್ನು ಶಿಲ್ಪಾ ಶೆಟ್ಟಿ ಶೇರ್ ಮಾಡಿಕೊಂಡಿದ್ದರು.
ಇದನ್ನೂ ಓದಿ: ಅಳುಮುಖ ಹೊತ್ತುಕೊಂಡು ಮನೆಗೆ ಬಂದ ರಾಜ್ ಕುಂದ್ರಾ: ಶಿಲ್ಪಾ ಶೆಟ್ಟಿ ಪತಿಗೆ ಸದ್ಯಕ್ಕೆ ರಿಲೀಫ್