‘ಅಳುವುದರ ಬಗ್ಗೆ ಸುದ್ದಿ ಪ್ರಕಟಿಸಿದರೆ ಮಾನನಷ್ಟ ಹೇಗಾಗುತ್ತೆ?’ ಶಿಲ್ಪಾ ಶೆಟ್ಟಿಗೆ ಕೋರ್ಟ್ ತರಾಟೆ

ಮಾಧ್ಯಮಗಳು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ  ತಪ್ಪಾದ, ಅವಹೇಳನಕಾರಿ, ಸುಳ್ಳು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸುತ್ತಿವೆ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದರು.

‘ಅಳುವುದರ ಬಗ್ಗೆ ಸುದ್ದಿ ಪ್ರಕಟಿಸಿದರೆ ಮಾನನಷ್ಟ ಹೇಗಾಗುತ್ತೆ?’ ಶಿಲ್ಪಾ ಶೆಟ್ಟಿಗೆ ಕೋರ್ಟ್ ತರಾಟೆ
ಶಿಲ್ಪಾ ಶೆಟ್ಟಿ-ರಾಜ್​​ ಕುಂದ್ರಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 30, 2021 | 4:07 PM

ರಾಜ್​ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಹೆಸರು ಮುನ್ನೆಲೆಗೆ ಬಂದಿತ್ತು. ಇವರ ಬಗ್ಗೆ ನಾನಾ ಸುದ್ದಿಗಳು ಪ್ರಸಾರಗೊಂಡವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಲ್ಪಾ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದು, ಮಾನನಷ್ಟ ಮೊಕದ್ದಮೆ ಸಲ್ಲಿಕೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್​ ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಕೆಲ ಮಹತ್ವದ ಪ್ರಶ್ನೆಗಳನ್ನು ಕೇಳಿದೆ.

ಮಾಧ್ಯಮಗಳು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ  ತಪ್ಪಾದ, ಅವಹೇಳನಕಾರಿ, ಸುಳ್ಳು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸುತ್ತಿವೆ. ಈ ಮೂಲಕ ಖಾಸಗಿತನಕ್ಕೆ ಚ್ಯುತಿ ತರುತ್ತಿವೆ ಎಂದು ಕೋರ್ಟ್​ಗೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿಲ್ಪಾ ಶೆಟ್ಟಿ ಉಲ್ಲೇಖ ಮಾಡಿದ್ದರು. ಅಲ್ಲದೆ, ತಮಗೆ 25 ಕೋಟಿ ರೂ. ಮತ್ತು ಅದರೊಂದಿಗೆ ವರ್ಷಕ್ಕೆ ಶೇ 18 ಬಡ್ಡಿಯೊಂದಿಗೆ ಹಣ ಪಾವತಿಸಬೇಕು ಎಂದು ಕೋರಿದ್ದರು.

ಈ ಪ್ರಕರಣ ಇಂದು ವಿಚಾರಣೆಗೆ ಬಂದಿದೆ. ನ್ಯಾಯಮೂರ್ತಿ ಜಿಎಸ್​ ಪಟೇಲ್​ ಅವರು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡರು. ‘ಓದುಗರನ್ನು ಸೆಳೆಯಲು ತಪ್ಪಾದ ಸುದ್ದಿ ಪ್ರಕಟ ಮಾಡಲಾಗಿದೆ’ ಎಂದು ಶಿಲ್ಪಾ ಶೆಟ್ಟಿ ಪರ ವಕೀಲರು ವಾದ ಮಂಡಿಸಿದರು.

‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು? ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ. ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತೀರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು? ಪೊಲೀಸ್​ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ?’ ಎಂದು ನ್ಯಾಯಮೂರ್ತಿ ಜಿಎಸ್​ ಪಟೇಲ್ ಅವರು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ

 ರಾಜ್ ಕುಂದ್ರಾ ಪ್ರಕರಣ: ಆಕ್ಷೇಪಾರ್ಹ ವಿಷಯ ಪ್ರಕಟಿಸಿದ ಮಾಧ್ಯಮಗಳ ವಿರುದ್ಧ ಬಾಂಬೆ ಹೈಕೋರ್ಟ್​​ನಲ್ಲಿ ಮಾನಹಾನಿ ಮೊಕದ್ದಮೆ ದಾಖಲಿಸಿದ ಶಿಲ್ಪಾ ಶೆಟ್ಟಿ

Published On - 4:04 pm, Fri, 30 July 21