‘ನಾನು ಅಶ್ಲೀಲ ಸಿನಿಮಾ ಮಾಡಿಲ್ಲ, ಮುಖ ಮುಚ್ಕೊಂಡು ಓಡಾಡಲ್ಲ’; ಮೌನ ಮುರಿದ ರಾಜ್​ ಕುಂದ್ರಾ

‘ನಾನು ಅಶ್ಲೀಲ ಸಿನಿಮಾ ಮಾಡಿಲ್ಲ, ಮುಖ ಮುಚ್ಕೊಂಡು ಓಡಾಡಲ್ಲ’; ಮೌನ ಮುರಿದ ರಾಜ್​ ಕುಂದ್ರಾ
ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ

Raj Kundra Case: ‘ನನ್ನ ಕುರಿತು ಆಧಾರವಿಲ್ಲದ ಅನೇಕ ಮಾಹಿತಿ, ಲೇಖನಗಳು ಹರಿದಾಡುತ್ತಿವೆ. ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಲಾಗಿದೆ’ ಎಂದು ರಾಜ್​ ಕುಂದ್ರಾ ಹೇಳಿದ್ದಾರೆ.

TV9kannada Web Team

| Edited By: Madan Kumar

Dec 20, 2021 | 12:28 PM

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಜೈಲು ಸೇರಿದ್ದ ಉದ್ಯಮಿ ರಾಜ್​ ಕುಂದ್ರಾ (Raj Kundra) ಅವರು ಇಷ್ಟು ದಿನ ಮೌನ ವಹಿಸಿದ್ದರು. ಈ ಕೇಸ್​ ಶುರುವಾದಾಗಿನಿಂದ ಅವರ ಪತ್ನಿ ಶಿಲ್ಪಾ ಶೆಟ್ಟಿ (Shilpa Shetty) ಸೇರಿದಂತೆ ಇಡೀ ಕುಟುಂಬಕ್ಕೆ ಮುಜುಗರ ಆಗಿತ್ತು. ರಾಜ್​ ಕುಂದ್ರಾ ಕೂಡ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿರಲಿಲ್ಲ. ಸೋಶಿಯಲ್​ ಮೀಡಿಯಾದಿಂದಲೂ ಅವರು ಕಣ್ಮರೆ ಆಗಿದ್ದರು. ಈಗ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ‘ನಾನು ಅಶ್ಲೀಲ ಸಿನಿಮಾ ಮಾಡಿಲ್ಲ. ನಾಚಿಕೆಯಿಂದ ಮುಖ ಮುಚ್ಕೊಂಡು ಓಡಾಡುವುದಿಲ್ಲ. ಕಾನೂನಿನ ರೀತಿಯಲ್ಲಿ ವಿಚಾರಣೆ ಎದುರಿಸುತ್ತೇನೆ’ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಅವರು ಅನೇಕ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

ಜು.19ರಂದು ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿತ್ತು. ಹಲವು ದಿನಗಳ ಕಾಲ ಅವರು ಜೈಲಿನಲ್ಲಿ ಕಳೆಯುವುದು ಅನಿವಾರ್ಯ ಆಗಿತ್ತು. ಎರಡು ತಿಂಗಳ ಕಾಲ ಜೈಲು ವಾಸ ಅನುಭವಿಸಿದ ಅವರು ಸೆ.22ರಂದು ಜಾಮೀನು ಪಡೆದು ಮನೆಗೆ ಮರಳಿದ್ದರು. ಆ ಬಳಿಕ ಎಲ್ಲಿಯೂ ಅವರು ಮಾತನಾಡಿರಲಿಲ್ಲ. ಅವರ ಪ್ರತಿಕ್ರಿಯೆಗಾಗಿ ಎಲ್ಲರೂ ನಿರೀಕ್ಷಿಸುತ್ತಿದ್ದರು. ರಾಜ್​ ಕುಂದ್ರಾ ಮೇಲೆ ಅನೇಕ ಆರೋಪಗಳಿವೆ. ಅವುಗಳ ಬಗ್ಗೆ ಈಗ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ನನ್ನ ಕುರಿತು ಆಧಾರವಿಲ್ಲದ ಅನೇಕ ಮಾಹಿತಿ, ಲೇಖನಗಳು ಹರಿದಾಡುತ್ತಿವೆ. ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಲಾಗಿದೆ. ನನ್ನ ಜೀವನದಲ್ಲಿ ನಾನು ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ವಿತರಣೆಯನ್ನು ಮಾಡಿಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈ ಪ್ರಕರಣ ಈಗ ವಿಚಾರಣೆಯ ಹಂತದಲ್ಲಿದೆ. ಹಾಗಾಗಿ ನಾನು ಸ್ಪಷ್ಟನೆಗಳನ್ನು ನೀಡಲಾಗುವುದಿಲ್ಲ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಅದರಲ್ಲಿ ಸತ್ಯ ಗೆಲ್ಲುತ್ತದೆ. ನಾನು ವಿಚಾರಣೆ ಎದುರಿಸಲು ಸಿದ್ಧನಿದ್ದೇನೆ’ ಎಂದು ರಾಜ್​ ಕುಂದ್ರಾ ಹೇಳಿದ್ದಾರೆ.

‘ದುರದೃಷ್ಟ ಏನೆಂದರೆ, ವಿಚಾರಣೆ ಮುಗಿಯುವುದಕ್ಕಿಂತಲೂ ಮುನ್ನವೇ ಮಾಧ್ಯಮದವರು ನನ್ನನ್ನು ತಪ್ಪಿತಸ್ಥನನ್ನಾಗಿ ಮಾಡಿದ್ದಾರೆ. ಇದರಿಂದ ನನಗೂ ಮತ್ತು ನನ್ನ ಕುಟುಂಬದವರಿಗೆ ನಿರಂತರವಾಗಿ ನೋವಾಗಿದೆ. ನನ್ನ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಟ್ರೋಲ್​ಗಳಿಂದ, ನೆಗೆಟಿವ್​ ಮಾತುಗಳಿಂದ, ವಿಷಪೂರಿತ ಸಾರ್ವಜನಿಕ ಅಭಿಪ್ರಾಯದಿಂದ ನಮಗೆ ತೊಂದರೆ ಆಗಿದೆ. ನಾನು ಮುಖ ಮುಚ್ಚಿಕೊಂಡು ಓಡಾಡುವುದಿಲ್ಲ. ಆದರೆ ನನ್ನ ಖಾಸಗಿತನಕ್ಕೆ ಬೆಲೆ ನೀಡಿ ಎಂದು ಬಯಸುತ್ತೇನೆ. ನನ್ನ ಕುಟುಂಬವೇ ನನಗೆ ಮುಖ್ಯ. ಈ ಸಂದರ್ಭದಲ್ಲಿ ಅದಕ್ಕಿಂತ ಬೇರೆ ಏನೂ ನನಗೆ ಮುಖ್ಯವಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಾಂಪತ್ಯಕ್ಕೆ 12 ವರ್ಷದ ಸಂಭ್ರಮ; ಸುಖ ಸಂಸಾರದ ಗುಟ್ಟು ಬಿಚ್ಚಿಟ್ಟ ನಟಿ

‘ರಾಜ್​ ಕುಂದ್ರಾ ದಾರಿ ತಪ್ಪಲು ಕಾರಣವಾದ ಈಕೆಗೆ ಬಟ್ಟೆ ಬಿಚ್ಚೋದು ಬಿಟ್ಟು ಬೇರೇನೂ ಗೊತ್ತಿಲ್ಲ’: ಗೆಹನಾ ಆರೋಪ

Follow us on

Related Stories

Most Read Stories

Click on your DTH Provider to Add TV9 Kannada