Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ

ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈಗ ಈ ಅವಧಿಯನ್ನು ನ್ಯಾಯಾಲಯ ಜುಲೈ 27ವರೆಗೆ ವಿಸ್ತರಣೆ ಮಾಡಿದೆ.  

Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ
ರಾಜ್​ ಕುಂದ್ರಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 23, 2021 | 2:23 PM

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪದ ಮೇಲೆ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈಗ ಈ ಅವಧಿಯನ್ನು ನ್ಯಾಯಾಲಯ ಜುಲೈ 27ವರೆಗೆ ವಿಸ್ತರಣೆ ಮಾಡಿದೆ.  

ರಾಜ್​ ಕುಂದ್ರಾ ಅವರನ್ನು ಹೆಚ್ಚುವರಿಯಾಗಿ 7 ದಿನ ಪೊಲೀಸ್​ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮುಂಬೈನ ಮ್ಯಾಜಿಸ್ಟ್ರೇಟ್​ ಕೋರ್ಟ್​ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇನ್ನು ಕುಂದ್ರಾ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಲು ನ್ಯಾಯಾಲಯ ನಿರಾಕರಿಸಿದೆ.

ರಾಜ್​ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್​ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು. ಅಂತಿಮವಾಗಿ ನ್ಯಾಯಾಲಯ ರಾಜ್​ ಕುಂದ್ರಾ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ.

ಪತಿಯ ಬಂಧನದ ಬಳಿಕ ಸಂಪೂರ್ಣ ಮೌನ ವಹಿಸಿದ್ದ ಶಿಲ್ಪಾ ಶೆಟ್ಟಿ ಈ ಬಗ್ಗೆ ಮೌನ ಮುರಿದಿದ್ದರು. ‘ಬದುಕಿರುವುದಕ್ಕಾಗಿ ನಾನು ಅದೃಷ್ಟವಂತೆ ಎಂದು ತಿಳಿದುಕೊಂಡು ದೀರ್ಘ ಉಸಿರು ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಮುಂದೆಯೂ ಅನೇಕ ಸವಾಲುಗಳನ್ನು ಎದುರಿಸಲಿದ್ದೇನೆ. ಇಂದಿನ ನನ್ನ ಬದುಕನ್ನು ಯಾವುದೂ ಕೂಡ ಕೆಡಿಸಬೇಕಿಲ್ಲ’ ಎಂದು ಶಿಲ್ಪಾ ಶೆಟ್ಟಿ ಮಾರ್ಮಿಕವಾಗಿ ಪೋಸ್ಟ್​ ಮಾಡಿದ್ದರು.

‘ಈ ಹಿಂದೆ ನಮ್ಮನ್ನು ನೋಯಿಸಿದವರ ಬಗ್ಗೆ, ಅನುಭವಿಸಿದ ಹತಾಶೆಯ ಬಗ್ಗೆ, ಕೈಕೊಟ್ಟ ಅದೃಷ್ಟದ ಬಗ್ಗೆ ನಾವು ಕೋಪ ಮಾಡಿಕೊಳ್ಳುತ್ತೇವೆ. ಮುಂದೆ ಬರಬಹುದಾದ ಸಾವು-ನೋವು, ಕಷ್ಟ-ನಷ್ಟಗಳ ಬಗ್ಗೆ ಭಯ ಇಟ್ಟುಕೊಳ್ಳುತ್ತೇವೆ. ಹಿಂದೆ ಏನಾಗಿತ್ತು, ಮುಂದೆ ಏನಾಗಬಹುದು ಎಂಬುದರ ಚಿಂತೆ ಬಿಟ್ಟು, ಈ ಕ್ಷಣಕ್ಕಾಗಿ ನಾವು ಬದುಕಬೇಕು’ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡಿದ್ದರು.

ಇದನ್ನೂ ಓದಿ: ‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು

Published On - 2:09 pm, Fri, 23 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್