AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬ್ಯುಸಿಯಾಗಿರುತ್ತಿದ್ದೆ, ರಾಜ್ ಕುಂದ್ರಾ ಏನು ಮಾಡುತ್ತಿದ್ದರು ಎಂಬುದು ತಿಳಿದಿರಲಿಲ್ಲ’; ಪೊಲೀಸರ ಎದುರು ಶಿಲ್ಪಾ ಹೇಳಿಕೆ

ಅಶ್ಲೀಲ ಚಿತ್ರ ತಯಾರಿಕೆ ಹಾಗೂ ಹಂಚಿಕೆಯ ಪ್ರಕರಣದಲ್ಲಿ ಬಂಧಿತವಾಗಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ಪತ್ನಿ ಶಿಲ್ಪಾ ಶೆಟ್ಟಿ ಅವರ ಹೇಳಿಕೆಯನ್ನೂ ಉಲ್ಲೇಖಿಸಲಾಗಿದೆ.

‘ನಾನು ಬ್ಯುಸಿಯಾಗಿರುತ್ತಿದ್ದೆ, ರಾಜ್ ಕುಂದ್ರಾ ಏನು ಮಾಡುತ್ತಿದ್ದರು ಎಂಬುದು ತಿಳಿದಿರಲಿಲ್ಲ’; ಪೊಲೀಸರ ಎದುರು ಶಿಲ್ಪಾ ಹೇಳಿಕೆ
ನಟಿ ಶಿಲ್ಪಾ ಶೆಟ್ಟಿ(ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on: Sep 16, 2021 | 3:08 PM

ಮುಂಬೈ: ಬಾಲಿವುಡ್​ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ, ತಮ್ಮ ಪತಿ, ಉದ್ಯಮಿ ರಾಜ್ ಕುಂದ್ರಾ ಆರೋಪಿಯಾಗಿರುವ ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಹಂಚಿಕೆ ಪ್ರಕರಣದಲ್ಲಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಈ ಕುರಿತು ಮುಂಬೈ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಲ್ಪಾ ಶೆಟ್ಟಿ, ‘‘ನಾನು ನನ್ನ ಕೆಲಸಗಳಲ್ಲಿ ಬ್ಯುಸಿಯಾಗಿರುತ್ತಿದ್ದೆ. ರಾಜ್ ಕುಂದ್ರಾ ಏನು ಮಾಡುತ್ತಿದ್ದರು ಎಂಬುದರ ಕುರಿತಾಗಿ ನನಗೆ ಮಾಹಿತಿಯಿರಲಿಲ್ಲ’’ ಎಂದು ಹೇಳಿಕೆ ನೀಡಿದ್ದಾರೆ.

ಮುಂಬೈ ಪೊಲೀಸರು ರಾಜ್ ಕುಂದ್ರಾ ಮತ್ತು ಇತರ ಆರೋಪಿಗಳ ವಿರುದ್ಧ 1,400 ಪುಟಗಳ ಆರೋಪ ಪಟ್ಟಿಯನ್ನು ತಯಾರಿಸಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅದರಲ್ಲಿ ನಟಿ ಶಿಲ್ಪಾ ಅವರ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಹಾಗೆಯೇ ಪತಿ ನಡೆಸುತ್ತಿದ್ದ, ವಿವಾದಿತ ಆಪ್​ಗಳ ಕುರಿತೂ ತಿಳಿದಿರಲಿಲ್ಲ ಎಂದಿದ್ದಾರೆ. ‘‘ಹಾಟ್​ಶಾಟ್ಸ್ ಹಾಗೂ ಬಾಲಿಫೇಮ್ ಆಪ್​ಗಳ ಕುರಿತಾಗಿ ಮಾಹಿತಿಯಿರಲಿಲ್ಲ’’ ಎಂದು ಶಿಲ್ಪಾ ಪೊಲೀಸರ ಎದುರು ಹೇಳಿದ್ದಾರೆ.

ಮೊದಲು ಹಾಟ್​ಶಾಟ್ಸ್ ಪ್ಲೇ ಸ್ಟೋರ್​ನಲ್ಲಿ ಲಭ್ಯವಿತ್ತು. ನಂತರ ಅಶ್ಲಲ ಚಿತ್ರಗಳನ್ನು ಅದು ಪ್ರದರ್ಶಿಸುತ್ತಿದೆ ಎಂಬ ಆರೋಪದ ಮೇಲೆ ಅದನ್ನು ತೆಗೆಯಲಾಗಿತ್ತು. ನಂತರ ಬಾಲಿಫೇಮ್ ಆಪ್ ಅನ್ನು ಲಾಂಚ್ ಮಾಡಲಾಗಿತ್ತು. ಅಶ್ಲೀಲ ಸಿನಿಮಾ ತಯಾರಿಕೆ ಮತ್ತು ಹಂಚಿಕೆಯನ್ನು ವಿಯಾನ್ ಇಂಡಸ್ಟ್ರೀಸ್​ನ ಮಾಲಿಕರಾದ 45 ವರ್ಷ ವಯಸ್ಸಿನ ರಾಜ್ ಕುಂದ್ರಾ ನಡೆಸುತ್ತಿದ್ದರು ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಕುರಿತಂತೆ ಶಿಲ್ಪಾ ನೀಡಿರುವ ಹೇಳಿಕೆ ಮಹತ್ವ ಪಡೆದಿದ್ದು, ರಾಜ್ ಕುಂದ್ರಾ ಪ್ರಕರಣದಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ರಾಜ್ ಕುಂದ್ರಾ ಹಾಗೂ ಇತರ ಆರೋಪಿಗಳ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ರಾಜ್‌ ಕುಂದ್ರಾ ಮತ್ತು ರಿಯಾನ್ ಥಾರ್ಪೆ‌ ಜೊತೆಯಾಗಿ‌ ಸಾಕ್ಷಿ ನಾಶಕ್ಕೆ ಯತ್ನಿಸಿದ್ದರು. ವಾಟ್ಸಾಪ್ ಕರೆಗಳು, ಇ‌ಮೈಲ್ ಗಳನ್ನು ಅವರ ಮೊಬೈಲ್ ಹಾಗೂ ಲ್ಯಾಪ್ಟಾಪ್ ಗಳಿಂದ ಅಳಿಸಿಹಾಕಲಾಗಿತ್ತು‌ ಎಂದು ಪೊಲೀಸರು ಆರೋಪ ಪಟ್ಟಿಯಲ್ಲಿ ತಿಳಿಸಿದ್ದಾರೆ. ರಾಜ್‌ ಕುಂದ್ರಾ ಹಾಗೂ ಅವರ ಸಹವರ್ತಿಗಳ ವಿರುದ್ಧ ಲೈಂಗಿಕ ಕಿರುಕುಳ, ವಂಚನೆ, ಮಹಿಳೆಯರನ್ನು ಅಸಭ್ಯವಾಗಿ ಚಿತ್ರಿಸುವುದು, ಮಾಹಿತಿ‌ ಮತ್ತು ತಂತ್ರಜ್ಞಾನ ಕಾಯ್ದೆ- ಮೊದಲಾದ ಐಪಿಸಿ ಸೆಕ್ಷನ್ ಅನ್ವಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಸ್ತುತ ರಾಜ್‌ ಕುಂದ್ರಾ ಬಂಧನದಲ್ಲಿದ್ದು, ಜಾಮೀನಿನ ಅರ್ಜಿಯು ಮುಂಬೈನ ಸೆಷನ್ಸ್ ನ್ಯಾಯಾಲಯದ ಮುಂದಿದೆ.

ಇದನ್ನೂ ಓದಿ:

Raj Kundra: ಚಿತ್ರರಂಗದಲ್ಲಿ ಕಷ್ಟಪಡುತ್ತಿದ್ದ ಯುವತಿಯರೇ ರಾಜ್ ಕುಂದ್ರಾ ಮತ್ತು ಇತರ ಆರೋಪಿಗಳ ದಂಧೆಗೆ ಟಾರ್ಗೆಟ್

ಬಿಗ್​ ಬಾಸ್​ ಟಿಆರ್​ಪಿಯಲ್ಲಿ ತೀವ್ರ ಕುಸಿತ; ಅರ್ಧಕ್ಕೆ ನಿಲ್ಲಲಿದೆ ಶೋ?

‘ನಾನು ಉಳಿಯುವ ರೀತಿ ಕಾಣುತ್ತಿಲ್ಲ’; ಹೊಸ ವಿಡಿಯೋ ಮಾಡಿ ಹರಿಬಿಟ್ಟ ನಟಿ ವಿಜಯಲಕ್ಷ್ಮಿ

(Shilpa Shetty says she did not know about what Raj Kundra was up to)

ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ