AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಕುರಿತು ಶಿಲ್ಪಾ ಶೆಟ್ಟಿ ನಕಲಿ ಹೇಳಿಕೆ ವೈರಲ್: ‘ಸಂಪೂರ್ಣ ಸುಳ್ಳು’ ಎಂದು ಖಂಡಿಸಿದ ನಟಿ

ಸಾಮಾಜಿಕ ಜಾಲತಾಣಗಳಲ್ಲಿ ಮೀಸಲಾತಿ ವ್ಯವಸ್ಥೆಯ ಪುನರ್‌ಪರಿಶೀಲನೆ ಅಥವಾ ರದ್ದತಿಯ ಕುರಿತು ಚರ್ಚೆಗಳು ನಡೆಯುತ್ತಿದ್ದ ವೇಳೆಯಲ್ಲೇ ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿ ನಕಲಿ ಸ್ಕ್ರೀನ್‌ಶಾಟ್ ವೈರಲ್ ಆಗಿತ್ತು. ಆದರೆ, ಇದು ಎಡಿಟ್ ಮಾಡಿದ ನಕಲಿ ಸ್ಕ್ರೀನ್‌ಶಾಟ್ ಎಂದು ಸ್ಪಷ್ಟಪಡಿಸುವುದರ ಮೂಲಕ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ.

ಮೀಸಲಾತಿ ಕುರಿತು ಶಿಲ್ಪಾ ಶೆಟ್ಟಿ ನಕಲಿ ಹೇಳಿಕೆ ವೈರಲ್: ‘ಸಂಪೂರ್ಣ ಸುಳ್ಳು’ ಎಂದು ಖಂಡಿಸಿದ ನಟಿ
Shilpa Shetty
ಮದನ್​ ಕುಮಾರ್​
|

Updated on: Jul 28, 2026 | 3:21 PM

Share

ಮುಖ್ಯಾಂಶಗಳು

  • ಎಡಿಟ್ ಮಾಡಿದ ಇನ್‌ಸ್ಟಾಗ್ರಾಮ್ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
  • ವೈರಲ್ ಆಗುತ್ತಿರುವ ಮೀಸಲಾತಿ ಕುರಿತಾದ ಹೇಳಿಕೆ ಸಂಪೂರ್ಣ ಸುಳ್ಳು ಎಂದ ನಟಿ ಶಿಲ್ಪಾ ಶೆಟ್ಟಿ.
  • ‘ಇಂತಹ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ’ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಒಂದು ನಕಲಿ ಪೋಸ್ಟ್ ಹರಿದಾಡುತ್ತಿದೆ. ಅದನ್ನು ನೋಡಿದ ಅನೇಕರು ಶಿಲ್ಪಾ ಶೆಟ್ಟಿ ಅವರನ್ನು ಕಟುವಾಗಿ ಟೀಕಿಸಲು ಆರಂಭಿಸಿದ್ದಾರೆ. ವೈರಲ್ ಆಗಿರುವ ಪೋಸ್ಟ್​ನಲ್ಲಿ ಶಿಲ್ಪಾ ಶೆಟ್ಟಿ ಅವರು ಜಾತಿ ಆಧಾರಿತ ಮೀಸಲಾತಿ (Reservation) ಬಗ್ಗೆ ವಿರೋಧಿ ನಿಲುವು ಹೊಂದಿದ್ದಾರೆ ಎಂಬುದನ್ನು ಸೂಚಿಸಲಾಗಿದೆ. ಆದರೆ ಅದು ನಕಲಿ ಪೋಸ್ಟ್ ಆಗಿದ್ದು, ಅದರ ವಿರುದ್ಧ ಶಿಲ್ಪಾ ಶೆಟ್ಟಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಪಷ್ಟನೆ ನೀಡಿದ ಶಿಲ್ಪಾ ಶೆಟ್ಟಿ:

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರನ್ನು ಬಳಸಿ ಹರಿಬಿಡಲಾಗಿರುವ ಮೀಸಲಾತಿ ಕುರಿತಾದ ಹೇಳಿಕೆಗಳು ಸಂಪೂರ್ಣವಾಗಿ ಸುಳ್ಳು ಮತ್ತು ಕಲ್ಪಿತ ಎಂದು ಶಿಲ್ಪಾ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ನನ್ನ ಹೆಸರಿನಲ್ಲಿ ಮೀಸಲಾತಿ ಕುರಿತು ಹರಿದಾಡುತ್ತಿರುವ ನಕಲಿ ಹೇಳಿಕೆಗಳನ್ನು ನೋಡಿ ಆಘಾತವಾಗಿದೆ. ಇದು ಸಂಪೂರ್ಣವಾಗಿ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್. ಇಂತಹ ಹುಸಿ ಸುದ್ದಿಗಳನ್ನು ಯಾರೂ ನಂಬಬೇಡಿ’ ಎಂದು ಮನವಿ ಮಾಡಿದ್ದಾರೆ.

ವೈರಲ್ ಪೋಸ್ಟ್‌ನಲ್ಲೇನಿತ್ತು?

ಕಳೆದ ಕೆಲವು ದಿನಗಳಿಂದ ಇನ್‌ಸ್ಟಾಗ್ರಾಮ್ ಸ್ಟೋರಿಯ ರೀತಿಯಲ್ಲಿದ್ದ ಸ್ಕ್ರೀನ್‌ಶಾಟ್‌ವೊಂದು ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿತ್ತು. ಅದರಲ್ಲಿ, ‘ಮೀಸಲಾತಿಯನ್ನು ಮುಟ್ಟಬೇಡಿ. ಸಾಮಾನ್ಯ ವರ್ಗದ ವೈದ್ಯರು ಸಾಮಾನ್ಯ ವರ್ಗದ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಿ. ಉಳಿದಂತೆ ಪ್ರತಿಯೊಬ್ಬರೂ ತಮ್ಮ ತಮ್ಮ ಜಾತಿಯ ರೋಗಿಗಳಿಗೆ ಚಿಕಿತ್ಸೆ ನೀಡಲಿ. ಹೀಗೆ ಕೆಲವು ವರ್ಷ ಮಾಡಿದರೆ, ಜನರೇ ಮೀಸಲಾತಿಯನ್ನು ರದ್ದುಗೊಳಿಸಲು ಆಗ್ರಹಿಸುತ್ತಾರೆ. ಮೀಸಲಾತಿಯಿಂದ ಕೌಶಲ್ಯ ಗಳಿಸಲು ಸಾಧ್ಯವಿಲ್ಲ’ ಎಂದು ಬರೆಯಲಾಗಿತ್ತು.

ಇದನ್ನೂ ಓದಿ: 50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

ಶಿಲ್ಪಾ ಶೆಟ್ಟಿ ಸಿನಿಮಾ, ಕಿರುತೆರೆ ಶೋ:

ವೃತ್ತಿಜೀವನದ ವಿಚಾರಕ್ಕೆ ಬಂದರೆ, ಶಿಲ್ಪಾ ಶೆಟ್ಟಿ ಇತ್ತೀಚೆಗೆ ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಸಿನಿಮಾದ ಮೂಲಕ ಅವರು ಹಲವು ವರ್ಷಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದರು. ನಿರೀಕ್ಷಿತ ಮಟ್ಟದಲ್ಲಿ ‘ಕೆಡಿ’ ಹಿಟ್ ಆಗಲಿಲ್ಲ. ಸದ್ಯಕ್ಕೆ ಶಿಲ್ಪಾ ಶೆಟ್ಟಿ ಅವರು ‘ಮಾ ಹೈ ನಾ’ ರಿಯಾಲಿಟಿ ಕುಕಿಂಗ್ ಶೋನಲ್ಲಿ ನಿರೂಪಕಿಯಾಗಿ ಸಕ್ರಿಯರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ