‘ಧುರಂಧರ್ 2’ ಸಿನಿಮಾ ನೋಡಿ ‘ಬ್ರಿಲಿಯಂಟ್’ ಎಂದು ಹೊಗಳಿದ ಶಿವರಾಜ್​ಕುಮಾರ್

ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೇಂಜ್’ ಸಿನಿಮಾವನ್ನು ಶಿವರಾಜ್​ಕುಮಾರ್ ವೀಕ್ಷಿಸಿದ್ದಾರೆ. ಅವರಿಗೆ ಈ ಸಿನಿಮಾ ಬಹಳ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಕಳೆದ ವರ್ಷ ತೆರೆಕಂಡಿದ್ದ ‘ಧರಂಧರ್’ ಚಿತ್ರವನ್ನು ಕೂಡ ಶಿವಣ್ಣ ನೋಡಿ ಮೆಚ್ಚಿಗೆ ವ್ಯಕ್ತಪಡಿಸಿದ್ದರು.

‘ಧುರಂಧರ್ 2’ ಸಿನಿಮಾ ನೋಡಿ ‘ಬ್ರಿಲಿಯಂಟ್’ ಎಂದು ಹೊಗಳಿದ ಶಿವರಾಜ್​ಕುಮಾರ್
Ranveer Singh, Shivarajkumar

Updated on: Mar 25, 2026 | 7:24 PM

ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಈಗಾಗಲೇ ರಜನಿಕಾಂತ್, ರಿಷಬ್ ಶೆಟ್ಟಿ ಮುಂತಾದವರು ಹೊಗಳಿದ್ದಾರೆ. ಈಗ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಈ ಸಿನಿಮಾವನ್ನು ಬ್ರಿಲಿಯಂಟ್ ಎಂದು ಬಣ್ಣಿಸಿದ್ದಾರೆ. ರಣವೀರ್ ಸಿಂಗ್ (Ranveer Singh) ಅವರ ಅಭಿನಯಕ್ಕೆ ಶಿವರಾಜ್​ಕುಮಾರ್ ಫುಲ್​ ಮಾರ್ಕ್ಸ್ ನೀಡಿದ್ದಾರೆ.

‘ಧುರಂಧರ್: ದಿ ರಿವೇಂಜ್’ ಸಿನಿಮಾ ಬಹಳ ಚೆನ್ನಾಗಿದೆ. ಈ ಸಿನಿಮಾದಲ್ಲಿನ ಪ್ರತಿಯೊಂದು ಅಂಶ ಕೂಡ ಇಷ್ಟ ಆಯಿತು. ರಣವೀರ್ ಸಿಂಗ್ ಬ್ರಿಲಿಯಂಟ್. ಹಳೇ ಸಾಂಗ್ ಬಳಸಿಕೊಂಡಿರುವ ಸಂಗೀತ ನಿರ್ದೇಶಕ ಶಾಶ್ವತ್ ಸಚ್​ದೇವ್ ಅವರ ಕೆಲಸ ಪರಿಣಾಮಕಾರಿ ಆಗಿದೆ’ ಎಂದು ಶಿವರಾಜ್​ಕುಮಾರ್ ಅವರು ತಮ್ಮ ಅನಿಸಿಕೆಯನ್ನು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

‘ನಿರ್ದೇಶಕ ಆದಿತ್ಯ ಧರ್ ಅವರ ಕೆಲಸಕ್ಕೆ ಗೌರವ ಸಲ್ಲಬೇಕು. ಸೈನಿಕನ ದೇಶಭಕ್ತಿಯೇ ಈ ಸಿನಿಮಾದ ಜೀವಾಳ. ಇಡೀ ಧುರಂಧರ್ 2 ಚಿತ್ರತಂಡಕ್ಕೆ ಅಭಿನಂದನೆಗಳು’ ಎಂದು ಶಿವರಾಜ್​ಕುಮಾರ್ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಹಿಂದೆ ಅವರು ‘ಧುರಂಧರ್’ ಮೊದಲ ಭಾಗವನ್ನು ನೋಡಿ ಕೂಡ ಇದೇ ರೀತಿ ಹೊಗಳಿದ್ದರು.

‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ಜೊತೆ ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ಕಬೀರ್ ಬೇಡಿ, ಆರ್. ಮಾಧವನ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಮೊದಲಿನ ಎಲ್ಲ ದಾಖಲೆಗಳನ್ನು ಅಳಿಸಿ ಹಾಕುತ್ತಿದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರಕ್ಕೆ ಸಂಕಷ್ಟ: ಆ ಒಂದು ದೃಶ್ಯದಿಂದ ಸಿಖ್ ಧರ್ಮದ ಭಾವನೆಗೆ ಧಕ್ಕೆ

ಈ ಮೊದಲು ‘45’ ಸಿನಿಮಾದ ಸುದ್ದಿಗೋಷ್ಠಿ ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ಭಾಗಿಯಾಗಿದ್ದ ಶಿವರಾಜ್​ಕುಮಾರ್ ಅವರು ‘ಧುರಂಧರ್’ ಸಿನಿಮಾದ ಬಗ್ಗೆ ಮಾತನಾಡಿದ್ದರು. ‘ರಣವೀರ್ ಸಿಂಗ್ ಅವರು ಮಾಡಿದ ಪಾತ್ರ ಸುಲಭವಲ್ಲ. ಅದನ್ನು ಅವರು ಬಹಳ ಬ್ರಿಲಿಯಂಟ್ ಆಗಿ ನಿಭಾಯಿಸಿದ್ದಾರೆ’ ಎಂದು ಶಿವರಾಜ್​ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us