AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ಸುಳಿಯಲ್ಲಿ ಶ್ರದ್ಧಾ ಕಪೂರ್ ನಟನೆಯ ‘ಈಠಾ’ ಸಿನಿಮಾ; ಶೀರ್ಷಿಕೆಗೆ ತೀವ್ರ ವಿರೋಧ

ಭಾರತೀಯ ಜಾನಪದ ರಂಗಭೂಮಿಗೆ ನೀಡಿದ ಅಪ್ರತಿಮ ಕೊಡುಗೆಗಾಗಿ 1957 ಮತ್ತು 1990ರಲ್ಲಿ ರಾಷ್ಟ್ರಪತಿಗಳಿಂದ ಗೌರವಿಸಲ್ಪಟ್ಟ ವಿಠಾಬಾಯಿ ಅವರ ಜೀವನದ ರೋಮಾಂಚಕ ಕಥೆ ಈ ಚಿತ್ರದಲ್ಲಿದೆ. ಇತ್ತೀಚೆಗೆ ಬಿಡುಗಡೆಯಾದ ಟೀಸರ್‌ನಲ್ಲಿ ಶ್ರದ್ಧಾ ಕಪೂರ್ ಗಮನ ಸೆಳೆದಿದ್ದಾರೆ. ಆದರೆ ಚಿತ್ರದ ಶೀರ್ಷಿಕೆ ಈಗ ವಿವಾದದ ಕೇಂದ್ರ ಬಿಂದು ಆಗಿದೆ.

ವಿವಾದದ ಸುಳಿಯಲ್ಲಿ ಶ್ರದ್ಧಾ ಕಪೂರ್ ನಟನೆಯ ‘ಈಠಾ’ ಸಿನಿಮಾ; ಶೀರ್ಷಿಕೆಗೆ ತೀವ್ರ ವಿರೋಧ
Shraddha Kapoor
ಮದನ್​ ಕುಮಾರ್​
|

Updated on: Jun 28, 2026 | 1:20 PM

Share

ಮುಖ್ಯಾಂಶಗಳು

  • ‘ಈಠಾ’ ಹೆಸರಿನ ವಿರುದ್ಧ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಆಕ್ರೋಶ ಹೊರಹಾಕಿದೆ.
  • ಶ್ರದ್ಧಾ ಕಪೂರ್ ನಟನೆಯ ಈ ಚಿತ್ರಕ್ಕೆ ಟೀಸರ್ ಬಿಡುಗಡೆ ಬಳಿಕ ವಿವಾದ ಶುರು.
  • ಲಾವಣಿ ನೃತ್ಯಗಾರ್ತಿವಿಠಾಬಾಯಿ ನಾರಾಯಣಗಾಂವ್ಕರ್ ಜೀವನಾಧಾರಿತ ಸಿನಿಮಾ.

ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ನಟನೆಯ ಬಹುನಿರೀಕ್ಷಿತ ‘ಈಠಾ’ ಚಿತ್ರದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಸಿನಿಮಾ ವಿವಾದದ ಸುಳಿಗೆ ಸಿಲುಕಿದೆ. ಮಹಾರಾಷ್ಟ್ರದ ಹೆಸರಾಂತ ಲಾವಣಿ ನೃತ್ಯಗಾರ್ತಿ ಮತ್ತು ತಮಾಷಾ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನಾಧಾರಿತ ಈ ಚಿತ್ರದ ಶೀರ್ಷಿಕೆಗೆ ಈಗ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಟೀಸರ್ ಮೂಲಕ ಭಾರಿ ಕೌತುಕ ಮೂಡಿಸಿರುವ ‘ಈಠಾ’ (Eetha) ಸಿನಿಮಾದ ಟೈಟಲ್ ಬದಲಾಯಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

‘ಟಿವಿ9 ಮರಾಠಿ’ ವರದಿಯ ಪ್ರಕಾರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಸಿನಿಮಾ ಮತ್ತು ಸಾಂಸ್ಕೃತಿಕ ವಿಭಾಗವು ‘ಈಠಾ’ ಹೆಸರಿನ ವಿರುದ್ಧ ಆಕ್ರೋಶ ಹೊರಹಾಕಿದೆ. ಈ ಶೀರ್ಷಿಕೆಯು ವಿಠಾಬಾಯಿ ಅವರ ಪರಂಪರೆಗೆ ಮತ್ತು ಸಾಧನೆಗೆ ಮಾಡುವ ಅವಮಾನ ಎಂದು ಎನ್‌ಸಿಪಿ ವಾದಿಸಿದೆ. ಚಿತ್ರಕ್ಕೆ ‘ವಿಠಾ’ ಅಥವಾ ‘ವಿಠಾಬಾಯಿ’ ಎಂದು ಹೆಸರಿಡಬೇಕಿತ್ತು ಎಂದು ಆಗ್ರಹಿಸಿದೆ.

ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಕುಟುಂಬಸ್ಥರು ಕೂಡ ಎನ್‌ಸಿಪಿಯ ಈ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ವಿಠಾಬಾಯಿ ಅವರ ಪುತ್ರರಾದ ಕೈಲಾಶ್ ನಾರಾಯಣಗಾಂವ್ಕರ್, ರಾಜೇಶ್ ನಾರಾಯಣಗಾಂವ್ಕರ್ ಮತ್ತು ಮೊಮ್ಮಗ ಮೋಹಿತ್ ನಾರಾಯಣಗಾಂವ್ಕರ್ ಅವರು ಚಿತ್ರದ ಶೀರ್ಷಿಕೆಯನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.

ಎನ್‌ಸಿಪಿಯ ಸಾಂಸ್ಕೃತಿಕ ವಿಭಾಗದ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷ ಬಾಬಾಸಾಹೇಬ್ ಪಾಟೀಲ್ ಮಾತನಾಡಿ, ‘ವಿಠಾಬಾಯಿ ಅವರ ಜೀವನವನ್ನು ಅತ್ಯಂತ ಗೌರವಯುತವಾಗಿ ತೆರೆಯ ಮೇಲೆ ತರುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದಿದ್ದಾರೆ. ಆದರೆ ಈ ವಿವಾದದ ಕುರಿತು ಚಿತ್ರದ ನಿರ್ದೇಶಕ ಲಕ್ಷ್ಮಣ್ ಉಟೇಕರ್ ಆಗಲಿ ಅಥವಾ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯಾಗಲಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ‘ಈಠಾ’ ಟೀಸರ್ ರಿಲೀಸ್: ಲಾವಣಿ ಕಲಾವಿದೆಯಾಗಿ ಶ್ರದ್ಧಾ ಕಪೂರ್ ನಟನೆಗೆ ಫ್ಯಾನ್ಸ್ ಫಿದಾ

ದಿನೇಶ್ ವಿಜನ್ ನಿರ್ಮಿಸಿ, ಲಕ್ಷ್ಮಣ್ ಉಟೇಕರ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಶ್ರದ್ಧಾ ಕಪೂರ್ ಜೊತೆಗೆ ರಣದೀಪ್ ಹೂಡಾ ಮತ್ತು ಮೊಹಮ್ಮದ್ ಜೀಶನ್ ಅಯೂಬ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಸ್ತ್ರೀ’ ಸರಣಿಯ ಯಶಸ್ಸಿನ ಬಳಿಕ ಶ್ರದ್ಧಾ ಮತ್ತು ದಿನೇಶ್ ವಿಜನ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಆಗಸ್ಟ್ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ