AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಠಾ’ ಟೀಸರ್ ರಿಲೀಸ್: ಲಾವಣಿ ಕಲಾವಿದೆಯಾಗಿ ಶ್ರದ್ಧಾ ಕಪೂರ್ ನಟನೆಗೆ ಫ್ಯಾನ್ಸ್ ಫಿದಾ

‘ಸ್ತ್ರೀ’ ಮತ್ತು ‘ಸ್ತ್ರೀ 2’ ಚಿತ್ರಗಳ ಭರ್ಜರಿ ಯಶಸ್ಸಿನ ಬಳಿಕ ‘ಮ್ಯಾಡಾಕ್ ಫಿಲ್ಮ್ಸ್’ ಸಂಸ್ಥೆಯೊಂದಿಗೆ ಶ್ರದ್ಧಾ ಕಪೂರ್ ಅವರು ‘ಈಠಾ’ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಲಾವಣಿ ಕಲಾವಿದೆಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆ ಆಗಿ ಧೂಳೆಬ್ಬಿಸುತ್ತಿದೆ. ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಈಠಾ’ ಟೀಸರ್ ರಿಲೀಸ್: ಲಾವಣಿ ಕಲಾವಿದೆಯಾಗಿ ಶ್ರದ್ಧಾ ಕಪೂರ್ ನಟನೆಗೆ ಫ್ಯಾನ್ಸ್ ಫಿದಾ
Shraddha Kapoor
ಮದನ್​ ಕುಮಾರ್​
|

Updated on: Jun 23, 2026 | 5:59 PM

Share

ಬಾಲಿವುಡ್ ಸ್ಟಾರ್ ನಟಿ ಶ್ರದ್ಧಾ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಈಠಾ’ (Eetha) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮಹಾರಾಷ್ಟ್ರದ ಪ್ರಸಿದ್ಧ ತಮಾಶಾ ಮತ್ತು ಲಾವಣಿ ಜಾನಪದ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನಾಧಾರಿತ ಚಿತ್ರ ಇದಾಗಿದ್ದು, ಶ್ರದ್ಧಾ ಕಪೂರ್ (Shraddha Kapoor) ಅವರ ನಟನೆಗೆ ಸಿನಿಪ್ರಿಯರು ಫಿದಾ ಆಗಿದ್ದಾರೆ. ‘ಛಾವಾ’ ಚಿತ್ರದ ಖ್ಯಾತಿಯ ಲಕ್ಷ್ಮಣ್ ಉಟೇಕರ್ ಅವರು ‘ಈಠಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಮೂಡುವಂತಾಗಿದೆ.

ಲಾವಣಿ ಕಲಾವಿದರ ಅದ್ಭುತ ನೃತ್ಯ ಪ್ರದರ್ಶನದೊಂದಿಗೆ ಟೀಸರ್ ಆರಂಭವಾಗುತ್ತದೆ. ಆದರೆ, ನೆರೆದಿರುವ ಉದ್ರಿಕ್ತ ಜನರು ನೃತ್ಯ ಪ್ರದರ್ಶನವನ್ನು ತಡೆದು, ಈಠಾ ವೇದಿಕೆಗೆ ಬರಬೇಕೆಂದು ಒತ್ತಾಯಿಸುತ್ತಾರೆ. ಮತ್ತೊಂದೆಡೆ, 9 ತಿಂಗಳ ಗರ್ಭಿಣಿಯಾಗಿರುವ ಈಠಾ ಬ್ಯಾಕ್‌ಸ್ಟೇಜ್‌ನಲ್ಲಿ ನೃತ್ಯಕ್ಕೆ ಸಿದ್ಧವಾಗುತ್ತಿರುತ್ತಾಳೆ. ಅದೇ ಸಮಯದಲ್ಲಿ ಆಕೆಗೆ ಹೆರಿಗೆ ನೋವು ಕಾಣಿಸಿಕೊಳ್ಳುತ್ತದೆ.

‘ಈ ಪರಿಸ್ಥಿತಿಯಲ್ಲಿ ಸ್ಟೇಜ್ ಮೇಲೆ ಹೋದರೆ ನೀನು ಸಾಯಬಹುದು, ನೃತ್ಯ ಮಾಡೋದು ಬೇಡ’ ಎಂದು ಹಿನ್ನೆಲೆಯಲ್ಲಿ ಧ್ವನಿಯೊಂದು ಎಚ್ಚರಿಸುತ್ತದೆ. ಆದರೆ, ಇದಕ್ಕೆ ಒಪ್ಪದ ಈಠಾ, ಹೊಸ ಇತಿಹಾಸ ಸೃಷ್ಟಿಸಲು ವೇದಿಕೆ ಏರುತ್ತಾಳೆ. ಮಗುವಿಗೆ ಜನ್ಮ ನೀಡಿದ ತಕ್ಷಣವೇ ಮತ್ತೆ ವೇದಿಕೆಗೆ ಮರಳಿ ನೃತ್ಯ ಮುಂದುವರಿಸುವ ದೃಶ್ಯ ಮೈ ಜುಂ ಎನಿಸುವಂತಿದೆ. ಟೀಸರ್‌ನ ಕೊನೆಯಲ್ಲಿ ಆಕೆಯನ್ನು ‘ಬಿರುಗಾಳಿ’ ಎಂದು ಕರೆಯಲಾಗಿದೆ.

‘ಈಠಾ’ ಸಿನಿಮಾ ಟೀಸರ್:

ಚಿತ್ರಮಂದಿರಗಳಲ್ಲಿ ‘ಕಾಕ್‌ಟೇಲ್ 2’ ಸಿನಿಮಾದ ಜೊತೆಗೆ ‘ಈಠಾ’ ಟೀಸರ್ ಪ್ರದರ್ಶಿಸಲಾಗಿತ್ತು. ಆದರೆ, ಥಿಯೇಟರ್‌ನಲ್ಲಿದ್ದ ಪ್ರೇಕ್ಷಕರು ಮೊಬೈಲ್​ನಲ್ಲಿ ಚಿತ್ರೀಕರಿಸಿದ ಟೀಸರ್‌ನ ಕ್ಲಿಪ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿ ವೈರಲ್ ಆದವು. ಕ್ರೇಜ್ ಹೆಚ್ಚಾಗುತ್ತಿದ್ದಂತೆಯೇ ಶ್ರದ್ಧಾ ಕಪೂರ್ ಇನ್‌ಸ್ಟಾಗ್ರಾಮ್‌ನಲ್ಲಿ ಮಹಾರಾಷ್ಟ್ರದ ಸಾಂಪ್ರದಾಯಿಕ ಸೀರೆಯಲ್ಲಿರುವ ತಮ್ಮ ಲುಕ್ ಹಂಚಿಕೊಂಡು, ಅಧಿಕೃತವಾಗಿ ಟೀಸರ್ ಬಿಡುಗಡೆ ಮಾಡಿದರು. ಚಿತ್ರವು ಆಗಸ್ಟ್ 28ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಇದನ್ನೂ ಓದಿ: ಶ್ರದ್ಧಾ ಕಪೂರ್ ಕತ್ತನ್ನು ಹಿಡಿದು ಕಾರಿನೊಳಗೆ ನೂಕಿದ ಬಾಯ್​ಫ್ರೆಂಡ್; ಫ್ಯಾನ್ಸ್ ಆಕ್ರೋಶ

ಬಡತನದ ಹಿನ್ನೆಲೆಯಿಂದ ಬಂದು ಮಹಾರಾಷ್ಟ್ರದ ಅತ್ಯಂತ ಜನಪ್ರಿಯ ಜಾನಪದ ರಂಗಭೂಮಿ ಕಲಾವಿದೆಯಾಗಿ ಬೆಳೆದ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನದ ಸ್ಫೂರ್ತಿದಾಯಕ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ದಿನೇಶ್ ವಿಜನ್ ಅವರ ‘ಮ್ಯಾಡಾಕ್ ಫಿಲ್ಮ್ಸ್’ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ. ರಣದೀಪ್ ಹೂಡಾ ಮತ್ತು ಅನಂತ್ ಜೋಶಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?