AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ ನರೇಂದ್ರ ಮೋದಿಗಿಂತಲೂ ಹೆಚ್ಚು ಫೇಮಸ್​ ಆದ ಶ್ರದ್ಧಾ ಕಪೂರ್

‘ಸ್ತ್ರೀ 2’ ಸಿನಿಮಾದ ನಟಿ ಶ್ರದ್ಧಾ ಕಪೂರ್​ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಫಾಲೋ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಗಿಂತಲೂ ಹೆಚ್ಚು ಹಿಂಬಾಲಕರನ್ನು ಶ್ರದ್ಧಾ ಕಪೂರ್​ ಹೊಂದಿದ್ದಾರೆ. ಆ ಮೂಲಕ ಶ್ರದ್ಧಾಗೆ 3ನೇ ಸ್ಥಾನ ಸಿಕ್ಕಿದೆ. ಮೊದಲ ಮತ್ತು ಎರಡನೇ ಸ್ಥಾನದಲ್ಲಿ ವಿರಾಟ್​ ಕೊಹ್ಲಿ, ಪ್ರಿಯಾಂಕಾ ಚೋಪ್ರಾ ಇದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ನರೇಂದ್ರ ಮೋದಿಗಿಂತಲೂ ಹೆಚ್ಚು ಫೇಮಸ್​ ಆದ ಶ್ರದ್ಧಾ ಕಪೂರ್
ನರೇಂದ್ರ ಮೋದಿ, ಶ್ರದ್ಧಾ ಕಪೂರ್​
ಮದನ್​ ಕುಮಾರ್​
|

Updated on: Aug 21, 2024 | 4:11 PM

Share

ನಟಿ ಶ್ರದ್ಧಾ ಕಪೂರ್​ ಅವರಿಗೆ ‘ಸ್ತ್ರೀ 2’ ಸಿನಿಮಾದಿಂದ ಸೂಪರ್​ ಸಕ್ಸಸ್​ ಸಿಕ್ಕಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಅಬ್ಬರಿಸುತ್ತಿದೆ. ಇದರಿಂದಾಗಿ ಶ್ರದ್ಧಾ ಕಪೂರ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಜಾಸ್ತಿ ಆಗಿದೆ. ಇನ್​ಸ್ಟಾಗ್ರಾಮ್​ ಬಳಕೆಯಲ್ಲಿ ಶ್ರದ್ಧಾ ಕಪೂರ್ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಬರೋಬ್ಬರಿ 91.4 ಮಿಲಿಯನ್​ (9.14 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ. ಅಚ್ಚರಿ ಏನೆಂದರೆ, ನರೇಂದ್ರ ಮೋದಿ ಅವರಿಗಿಂತಲೂ ಶ್ರದ್ಧಾ ಕಪೂರ್​ ಅವರಿಗೇ ಹೆಚ್ಚು ಫಾಲೋವರ್ಸ್​ ಇದ್ದಾರೆ!

ಪ್ರಧಾನಿ ನರೇಂದ್ರ ಮೋದಿ ಅವರನ್ನು 91.3 ಮಿಲಿಯನ್​ (9.13 ಕೋಟಿ) ಜನರು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದಾರೆ. ಅವರನ್ನು ಹಿಂದಿಕ್ಕುವ ಮೂಲಕ ಶ್ರದ್ಧಾ ಕಪೂರ್​ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. 2ನೇ ಸ್ಥಾನದಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ಮೊದಲ ಸ್ಥಾನದಲ್ಲಿ ವಿರಾಟ್​ ಕೊಹ್ಲಿ ಇದ್ದಾರೆ. ಪ್ರಿಯಾಂಕಾ ಚೋಪ್ರಾ ಅವರಿಗೆ 91.8 ಮಿಲಿಯನ್​ ಮತ್ತು ವಿರಾಟ್​ ಕೊಹ್ಲಿ ಅವರಿಗೆ 270 ಮಿಲಿಯನ್​ ಫಾಲೋವರ್ಸ್​ ಇದ್ದಾರೆ.

ಬಾಲಿವುಡ್​ನ ಜನಪ್ರಿಯ ನಟಿ ಆಲಿಯಾ ಭಟ್​ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 85.1 ಮಿಲಿಯನ್​ ಫಾಲೋವರ್ಸ್​ ಇದ್ದಾರೆ. ದೀಪಿಕಾ ಪಡುಕೋಣೆ ಅವರನ್ನು 79.8 ಮಿಲಿಯನ್​ ಜನರು ಫಾಲೋ ಮಾಡುತ್ತಿದ್ದಾರೆ. ಇವರಿಬ್ಬರ ನಂತರದ ಸ್ಥಾನ ಶ್ರದ್ಧಾ ಕಪೂರ್​ ಅವರಿಗೆ ಸಿಕ್ಕಿದೆ. ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿಯಾಗಿ ಶ್ರದ್ಧಾ ಕಪೂರ್​ ಗುರುತಿಸಿಕೊಂಡಿದ್ದಾರೆ. ‘ಸ್ತ್ರೀ 2’ ಸಿನಿಮಾದ ಯಶಸ್ಸಿನಿಂದ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

ಇದನ್ನೂ ಓದಿ: ‘ಸ್ತ್ರೀ 2’ನಲ್ಲಿ ಅತಿಥಿ ಪಾತ್ರ ಮಾಡಿದ ವರುಣ್ ಧವನ್​ಗೆ ಭರ್ಜರಿ ಸಂಭಾವನೆ; ಉಳಿದವರ ರೆಮ್ಯುನರೇಷನ್ ಎಷ್ಟು?

ಆಗಸ್ಟ್​ 15ರಂದು ‘ಸ್ತ್ರೀ 2’ ಸಿನಿಮಾ ಬಿಡುಗಡೆಯಾಯಿತು. ಇದು ಹಾರರ್​ ಕಥೆ ಹೊಂದಿರುವ ಸಿನಿಮಾ. 2018ರಲ್ಲಿ ‘ಸ್ತ್ರೀ’ ಬಿಡುಗಡೆ ಆಗಿತ್ತು. ಅದರ ಮುಂದುವರಿದ ಕಥೆ ‘ಸ್ತ್ರೀ 2’ ಸಿನಿಮಾದಲ್ಲಿದೆ. ರಾಜ್​ಕುಮಾರ್​ ರಾವ್​, ಅಭಿಷೇಕ್​ ಬ್ಯಾನರ್ಜಿ​, ತಮನ್ನಾ ಭಾಟಿಯಾ, ವರುಣ್​ ಧವನ್​, ಪಂಕಜ್​ ತ್ರಿಪಾಠಿ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅಮರ್​ ಕೌಶಿಕ್​ ಅವರು ನಿರ್ದೇಶನ ಮಾಡಿದ್ದಾರೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಈ ಸಿನಿಮಾ ಮುನ್ನುಗ್ಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!