‘ಕಾಕ್‌ಟೇಲ್ 2’ ಪ್ರದರ್ಶನದಲ್ಲಿ ಶ್ರದ್ಧಾ ಕಪೂರ್ ದರ್ಶನ; ‘ಈಥಾ’ ಟೀಸರ್ ನೋಡಿ ಫ್ಯಾನ್ಸ್ ಫಿದಾ

‘ಕಾಕ್‌ಟೇಲ್ 2’ ಚಿತ್ರದೊಂದಿಗೆ ಶ್ರದ್ಧಾ ಕಪೂರ್ ಅಭಿನಯದ 'ಈಥಾ' ಟೀಸರ್ ಇಂದು ಬಿಡುಗಡೆಯಾಗಿದೆ. ಮರಾಠಿ ತಮಾಶಾ ಕಲಾವಿದೆ ವಿಠಾಬಾಯಿ ನಾರಾಯಣ ಗಾಂವ್ಕರ್ ಜೀವನ ಆಧಾರಿತ ಈ ಚಿತ್ರದಲ್ಲಿ ಶ್ರದ್ಧಾ ಸಂಪೂರ್ಣ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. 'ಸ್ತ್ರೀ 2' ನಂತರ, 'ಈಥಾ'ದಲ್ಲಿ ಶ್ರದ್ಧಾ ಕಪೂರ್ ಅವರ ಭಿನ್ನ ಪಾತ್ರ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿದೆ. ಆಗಸ್ಟ್ 28ಕ್ಕೆ ಸಿನಿಮಾ ತೆರೆಗೆ.

ಕಾಕ್‌ಟೇಲ್ 2 ಪ್ರದರ್ಶನದಲ್ಲಿ ಶ್ರದ್ಧಾ ಕಪೂರ್ ದರ್ಶನ; ಈಥಾ ಟೀಸರ್ ನೋಡಿ ಫ್ಯಾನ್ಸ್ ಫಿದಾ
ಶ್ರದ್ಧಾ ಕಪೂರ್

Updated on: Jun 19, 2026 | 12:13 PM

ಬಾಲಿವುಡ್ ನಟ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ ಹಾಗೂ ಕೃತಿ ಸನೋನ್ ಅಭಿನಯದ ‘ಕಾಕ್‌ಟೇಲ್ 2’ ಸಿನಿಮಾ ಇಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಆದರೆ, ಥಿಯೇಟರ್‌ಗಳಲ್ಲಿ ಈ ಚಿತ್ರವನ್ನು ವೀಕ್ಷಿಸಲು ಬಂದ ಪ್ರೇಕ್ಷಕರಿಗೆ ಬಾಲಿವುಡ್‌ನ ಸ್ಟಾರ್ ನಟಿ ಶ್ರದ್ಧಾ ಕಪೂರ್ (Shradhdha Kapoor) ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಹೌದು, ‘ಕಾಕ್‌ಟೇಲ್ 2’ ಚಿತ್ರದ ಪ್ರದರ್ಶನದ ಜೊತೆಗೆ ಶ್ರದ್ಧಾ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಈಥಾ’ ಚಿತ್ರದ ಅಧಿಕೃತ ಟೀಸರ್ ಅನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುತ್ತಿದೆ.

ಸೆನ್ಸಾರ್ ಮಂಡಳಿಯಿಂದ U/A 13+ ರೇಟಿಂಗ್ ಪಡೆದುಕೊಂಡಿರುವ ಈ ಟೀಸರ್ 2 ನಿಮಿಷ 18 ಸೆಕೆಂಡ್‌ಗಳ ಅವಧಿಯನ್ನು ಹೊಂದಿದೆ. ಸಿನಿಮಾ ಆರಂಭವಾಗುತ್ತಿದ್ದಂತೆ ಥಿಯೇಟರ್‌ಗಳಲ್ಲಿ ಶ್ರದ್ಧಾ ಕಪೂರ್ ಅವರ ಹೊಚ್ಚ ಹೊಸ ಅವತಾರವನ್ನು ಕಂಡು ಪ್ರೇಕ್ಷಕರು ಥ್ರಿಲ್ ಆಗಿದ್ದಾರೆ.

ಸಂಪೂರ್ಣ ವಿಭಿನ್ನ ಅವತಾರದಲ್ಲಿ ಶ್ರದ್ಧಾ ಕಪೂರ್

ಮರಾಠಿಯ ಪ್ರಸಿದ್ಧ ತಮಾಶಾ ಕಲಾವಿದೆ ವಿಠಾಬಾಯಿ ನಾರಾಯಣ ಗಾಂವ್ಕರ್ ಅವರ ಜೀವನ ಆಧಾರಿತ ಈ ಚಿತ್ರದಲ್ಲಿ ಶ್ರದ್ಧಾ ಕಪೂರ್ ‘ಈಥಾ’ ಎಂಬ ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ಇಂತಹ ಸಿನಿಮಾಗಳಲ್ಲಿ ನಾಯಕಿಯ ಮಾಸ್ ಎಂಟ್ರಿಯನ್ನು ನಿರೀಕ್ಷಿಸಲಾಗುತ್ತದೆ. ಆದರೆ, ಈ ಟೀಸರ್‌ನಲ್ಲಿ ಶ್ರದ್ಧಾ ಕಪೂರ್ ಯಾರೂ ಊಹಿಸದ ರೀತಿಯಲ್ಲಿ ಅತ್ಯಂತ ವಿಭಿನ್ನವಾಗಿ ಪರದೆಯ ಮೇಲೆ ಪ್ರತ್ಯಕ್ಷವಾಗುತ್ತಾರೆ.

ತಮ್ಮ ವೃತ್ತಿಜೀವನದಲ್ಲಿ ಹಲವು ನೆನಪಿನಲ್ಲುಳಿಯುವ ಪಾತ್ರಗಳನ್ನು ಮಾಡಿರುವ ಶ್ರದ್ಧಾ, ಈ ಚಿತ್ರಕ್ಕಾಗಿ ಸಂಪೂರ್ಣವಾಗಿ ಮರಾಠಿ ಶೈಲಿಯ ನೃತ್ಯ ಮತ್ತು ಹಾವಭಾವಗಳನ್ನು ಕರಗತ ಮಾಡಿಕೊಂಡಿರುವುದು ಟೀಸರ್‌ನಲ್ಲಿ ಎದ್ದು ಕಾಣುತ್ತಿದೆ. ಲಕ್ಷ್ಮಣ್ ಉತೇಕರ್ ನಿರ್ದೇಶನದ ಈ ಚಿತ್ರದಲ್ಲಿ ರಣದೀಪ್ ಹೂಡಾ ಮತ್ತು ಮೊಹಮ್ಮದ್ ಜೀಶನ್ ಅಯ್ಯುಬ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾ ರಕ್ಷಾಬಂಧನದ ಹಬ್ಬದ ಪ್ರಯುಕ್ತ ಆಗಸ್ಟ್ 28 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಪ್ರೆಗ್ನೆಂಟ್ ಲೇಡಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಶ್ರದ್ಧಾ ಕಪೂರ್, ನೋರಾ ಫತೇಹಿಗೆ ಬಿಗ್ ರಿಲೀಫ್; ಪೊಲೀಸರಿಗೆ ಸಿಗಲೇ ಇಲ್ಲ ಸಾಕ್ಷಿ

ಶ್ರದ್ಧಾ ಕಪೂರ್ ಅವರಿಗೆ ಈ ಹಿಂದೆ ಬಂದಿದ್ದ ‘ಸ್ತ್ರೀ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಭೂತಪೂರ್ವ ಯಶಸ್ಸನ್ನು ತಂದುಕೊಟ್ಟಿತ್ತು. ಸಿನಿಮಾ ಕೋಟ್ಯಂತರ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿತ್ತು. ಈಗ ‘ಸ್ತ್ರೀ 2’ ಚಿತ್ರದ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಶ್ರದ್ಧಾ ಸಂಪೂರ್ಣ ಕಮರ್ಷಿಯಲ್ ಲೀಗ್‌ನಿಂದ ಹೊರಬಂದು, ಈ ರೀತಿಯ ಸಾಂಪ್ರದಾಯಿಕ ಹಾಗೂ ಐತಿಹಾಸಿಕ ಹಿನ್ನೆಲೆಯ ‘ಈಥಾ’ ಪಾತ್ರವನ್ನು ಆಯ್ಕೆ ಮಾಡಿಕೊಂಡಿರುವುದು ಅವರ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us