AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ?

ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಎಂಬ ಚರ್ಚೆ ಶುರುವಾಗಿದೆ. ಬಿಗ್ ಬಾಸ್ 20ರ ವೇದಿಕೆಯಲ್ಲಿ ಸಿದ್ಧಾರ್ಥ್ ತಂದೆಯಾದ ಅನುಭವ ಹಂಚಿಕೊಂಡರು. ಈ ವೇಳೆ ನಟ ಸಲ್ಮಾನ್ ಖಾನ್ 'ಶೀಘ್ರದಲ್ಲೇ ನಿಮಗೊಂದು ಇನ್ನೊಂದು ಮಗು ಆಗಲಿದೆ' ಎಂದು ಕಾಲೆಳೆದು ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ?
ಕಿಯಾರಾ-ಸಿದ್ದಾರ್ಥ್
ರಾಜೇಶ್ ದುಗ್ಗುಮನೆ
|

Updated on: Sep 22, 2026 | 7:33 AM

Share

ಮುಖ್ಯಾಂಶಗಳು

  • ಬಿಗ್ ಬಾಸ್ ವೇದಿಕೆಯಲ್ಲಿ ಸಿದ್ಧಾರ್ಥ್ ಕಾಲೆಳೆದ ಸಲ್ಮಾನ್
  • ಎರಡನೇ ಮಗುವಿನ ಸುಳಿವು ಕೊಟ್ರಾ ಸಿದ್ಧಾರ್ಥ್?
  • ಮಗಳು ಸರಾಯಾ ಬಗ್ಗೆ ಸಿದ್ಧಾರ್ಥ್ ಮಲ್ಹೋತ್ರಾ ಭಾವುಕ

ಬಾಲಿವುಡ್‌ನ ಖ್ಯಾತ ಜೋಡಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ದಂಪತಿ ಶೀಘ್ರದಲ್ಲೇ ಎರಡನೇ ಮಗುವನ್ನು ಹೊಂದುತ್ತಾರಾ ಎಂಬ ಕುತೂಹಲ ಅಭಿಮಾನಿಗಳಲ್ಲಿ ಶುರುವಾಗಿದೆ. ತಮ್ಮ ಮುಂಬರುವ ಚಿತ್ರದ ಪ್ರಚಾರಕ್ಕಾಗಿ ಬಿಗ್ ಬಾಸ್ ಶೋಗೆ ಆಗಮಿಸಿದ್ದ ಸಿದ್ಧಾರ್ಥ್ ಅವರನ್ನು ಸಲ್ಮಾನ್ ಖಾನ್ ಕಾಲೆಳೆದಿದ್ದಾರೆ. ‘ಖಂಡಿತವಾಗಿಯೂ ಶೀಘ್ರದಲ್ಲೇ ಇನ್ನೊಂದು ಮಗು ಆಗಲಿದೆ’ ಎಂದು ಸಲ್ಮಾನ್ ಖಾನ್ ನೇರವಾಗಿ ಹೇಳಿ ಕುತೂಹಲಕ್ಕೆ ಕಾರಣ ಆಗಿದ್ದಾರೆ.

‘ದಿ ವಾನ್: ಫೋರ್ಸ್ ಆಫ್ ದಿ ಫಾರೆಸ್ಟ್’ ಸಿನಿಮಾದ ಪ್ರಚಾರಕ್ಕಾಗಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ತಮನ್ನಾ ಭಾಟಿಯಾ ಬಿಗ್ ಬಾಸ್ 20ರ ವೀಕೆಂಡ್ ಕಾ ವಾರ್ ವೇದಿಕೆಗೆ ಬಂದಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರು ಸಿದ್ಧಾರ್ಥ್ ಅವರ ಸಂಸಾರ ಮತ್ತು ತಂದೆಯಾದ ನಂತರ ಜೀವನ ಹೇಗಿದೆ ಎಂಬ ಬಗ್ಗೆ ಪ್ರಶ್ನೆ ಮಾಡಿದರು. ಅದಕ್ಕೆ ಉತ್ತರಿಸಿದ ಸಿದ್ಧಾರ್ಥ್, ‘ನನ್ನ ಸಂಸಾರ ಅತ್ಯಂತ ಸಂತೋಷದಿಂದ ಸಾಗುತ್ತಿದೆ’ ಎಂದು ಹೇಳಿದರು.

ಈ ವೇಳೆ ಹಳೆಯ ದಿನಗಳನ್ನು ನೆನಪಿಸಿಕೊಂಡ ಸಲ್ಮಾನ್ ಖಾನ್, ಸಿದ್ಧಾರ್ಥ್ ಅವರ ಕಾಲೆಳೆದರು. ‘ನಾನು ನಿನಗೆ ಮದುವೆ ಆಗು ಎಂದು ಪದೇ ಪದೇ ಹೇಳುತ್ತಿದ್ದೆ. ಆದರೆ ಆಗ ನೀನು ಸಿಕ್ಕಾಪಟ್ಟೆ ನಾಚಿಕೊಳ್ಳುತ್ತಿದ್ದೆ’ ಎಂದರು ಸಲ್ಲು. ‘ನಮ್ಮ ಪ್ರೀತಿಯ ರಹಸ್ಯವನ್ನು ನಾವು ರಹಸ್ಯವಾಗಿಯೇ ಇಟ್ಟಿದ್ದೆವು. ಸರಿಯಾದ ಸಮಯ ಬಂದಾಗ ಅದನ್ನು ಬಹಿರಂಗಪಡಿಸಿದೆವು’ ಎಂದು ನಗುತ್ತಾ ಸಲ್ಮಾನ್ ಖಾನ್‌ಗೆ ಉತ್ತರ ನೀಡಿದರು.

ಮಗಳು ಸರಾಯಾ ಮಲ್ಹೋತ್ರಾ ಬಗ್ಗೆ ಸಿದ್ಧಾರ್ಥ್ ಭಾವುಕರಾಗಿ ಮಾತನಾಡಿದರು. ‘ತಂದೆಯಾಗುವುದು ಈ ಪ್ರಪಂಚದಲ್ಲೇ ಅತ್ಯಂತ ಶ್ರೇಷ್ಠ ಪಾತ್ರ. ಮಗಳಿಗೆ ಈಗ 15 ತಿಂಗಳು. ಆಕೆ ಈಗಷ್ಟೇ ಮಾತುಗಳನ್ನು ಕಲಿಯುತ್ತಿದ್ದಾಳೆ’ ಎಂದರು. ಆಗ ಸಲ್ಲು, ‘ಶೀಘ್ರದಲ್ಲೇ ಇನ್ನೊಂದು ಮಗು ಆಗಲಿದೆ’ ಎಂದರು.

ಇದನ್ನೂ ಓದಿ: ‘ಆ ಸೋಲಿನಿಂದ ಬಚಾವ್ ಆದ್ರಿ’; ಕಿಯಾರಾಗೆ ಹೇಳಿದ ನಯನತಾರಾ ಪತಿ

ಕೊನೆಯಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಅವರು ಸಲ್ಮಾನ್ ಖಾನ್ ಅವರನ್ನು ಮದುವೆ ಮತ್ತು ಮಕ್ಕಳ ಬಗ್ಗೆ ಕೇಳಿಯೇ ಬಿಟ್ಟರು. ‘ನನಗೆ ಮದುವೆ ಮತ್ತು ಮಕ್ಕಳ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಅದನ್ನು ನಾನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸುವುದಿಲ್ಲ’ ಎಂದು ತಮಾಷೆಯಾಗಿ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ