Sidharth Malhotra Birthday: ಮುತ್ತಿನ ಮಳೆ ಸುರಿಸಿ ಗಂಡನ ಹುಟ್ಟುಹಬ್ಬ ಆಚರಿಸಿದ ಕಿಯಾರಾ ಅಡ್ವಾಣಿ

ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಪರಸ್ಪರ ಪ್ರೀತಿಸಿ ಮದುವೆ ಆದವರು. ಗಂಡನ ಹುಟ್ಟುಹಬ್ಬವನ್ನು ಕಿಯಾರಾ ಅಡ್ವಾಣಿ ಅವರು ಬಹಳ ಸಡಗರದಿಂದ ಆಚರಿಸಿದ್ದಾರೆ. ‘ಹ್ಯಾಪಿ ಬರ್ತ್​ಡೇ ಲವ್​’ ಎಂದು ಕ್ಯಾಪ್ಷನ್​ ನೀಡಿ, ಜನ್ಮದಿನದ ಸೆಲೆಬ್ರೇಷನ್​ನ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.

Sidharth Malhotra Birthday: ಮುತ್ತಿನ ಮಳೆ ಸುರಿಸಿ ಗಂಡನ ಹುಟ್ಟುಹಬ್ಬ ಆಚರಿಸಿದ ಕಿಯಾರಾ ಅಡ್ವಾಣಿ
ಕಿಯಾರಾ ಅಡ್ವಾಣಿ, ಸಿದ್ದಾರ್ಥ್​ ಮಲ್ಹೋತ್ರಾ
Follow us
ಮದನ್​ ಕುಮಾರ್​
|

Updated on: Jan 16, 2024 | 3:25 PM

ನಟ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ನಟಿ ಕಿಯಾರಾ ಅಡ್ವಾಣಿ (Kiara Advani) ಅವರು ಹಾಯಾಗಿ ಸಂಸಾರ ಮಾಡುತ್ತಿದ್ದಾರೆ. ಚಿತ್ರರಂಗದಲ್ಲಿ ಈ ಸೆಲೆಬ್ರಿಟಿಗಳಿಗೆ ಸಖತ್​ ಬೇಡಿಕೆ ಇದೆ. ಇಂದು (ಜನವರಿ 16) ಸಿದ್ದಾರ್ಥ್​ ಮಲ್ಹೋತ್ರಾ ಅವರಿಗೆ ಜನ್ಮದಿನದ (Sidharth Malhotra Birthday) ಸಂಭ್ರಮ. 39ನೇ ವರ್ಷದ ಹುಟ್ಟುಹಬ್ಬವನ್ನು ಅವರು ಆಚರಿಸಿಕೊಂಡಿದ್ದಾರೆ. ಪತಿಯ ಜನ್ಮದಿನಕ್ಕೆ ಕಿಯಾರಾ ಅಡ್ವಾಣಿ ಅವರು ಮುತ್ತಿನ ಮಳೆ ಸುರಿಸಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಎಲ್ಲರೂ ಸಿದ್ದಾರ್ಥ್​ ಮಲ್ಹೋತ್ರಾಗೆ (Sidharth Malhotra) ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರ ಮದುವೆ ನೆರವೇರಿತ್ತು. ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆ ಆದರು. ಗಂಡನ ಹುಟ್ಟುಹಬ್ಬವನ್ನು ಕಿಯಾರಾ ಅಡ್ವಾಣಿ ಅವರು ಬಹಳ ಸಡಗರದಿಂದ ಆಚರಿಸಿದ್ದಾರೆ. ‘ಹ್ಯಾಪಿ ಬರ್ತ್​ಡೇ ಲವ್​’ ಎಂದು ಕ್ಯಾಪ್ಷನ್​ ನೀಡಿ, ಜನ್ಮದಿನದ ಸೆಲೆಬ್ರೇಷನ್​ನ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದಾರ್ಥ್​ ಮಲ್ಹೋತ್ರ-ಕಿಯಾರಾ ಅಡ್ವಾಣಿ ಮಧ್ಯೆ ಇರೋ ವಯಸ್ಸಿನ ಅಂತರ ಇಷ್ಟೊಂದಾ?

ಸಿದ್ದಾರ್ಥ್​ ಮಲ್ಹೋತ್ರಾ ಅವರ ಹುಟ್ಟುಹಬ್ಬಕ್ಕಾಗಿ ಕಿಯಾರಾ ಅಡ್ವಾಣಿ ಅವರು ವಿಶೇಷವಾದ ಕೇಕ್​ ರೆಡಿ ಮಾಡಿಸಿದ್ದಾರೆ. ಸಿನಿಮಾ ರೀಲ್​ನ ಥೀಮ್​ನಲ್ಲಿ ಈ ಕೇಕ್​ ವಿನ್ಯಾಸಗೊಂಡಿದೆ. ಅದರ ಮೇಲೆ ಸಿದ್ದಾರ್ಥ್​ ಮಲ್ಹೋತ್ರಾ ಅವರ ಚಿಕ್ಕದಾದ ಪ್ರತಿಕೃತಿ ನಿಲ್ಲಿಸಲಾಗಿದೆ. ಒಟ್ಟಿನಲ್ಲಿ ಬಹಳ ಸಡಗರದಿಂದ ಗಂಡನ ಹುಟ್ಟುಹಬ್ಬವನ್ನು ಕಿಯಾರಾ ಅಡ್ವಾಣಿ ಆಚರಿಸಿದ್ದಾರೆ. ಪತ್ನಿಯ ಪ್ರೀತಿಗೆ ಸಿದ್ದಾರ್ಥ್​ ಮಲ್ಹೋತ್ರಾ ಫಿದಾ ಆಗಿದ್ದಾರೆ.

ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ ಕೂಡ ಸಿದ್ದಾರ್ಥ್​ ಮಲ್ಹೋತ್ರಾ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ. ಆ ಫೋಟೋ ಕೂಡ ವೈರಲ್​ ಆಗಿದೆ. ರೋಹಿತ್​ ಶೆಟ್ಟಿ ನಿರ್ದೇಶನದ ‘ಇಂಡಿಯನ್​ ಪೊಲೀಸ್​ ಫೋರ್ಸ್​’ ವೆಬ್​ ಸರಣಿಯಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ನಟಿಸುತ್ತಿದ್ದಾರೆ. ಆ ಮೂಲಕ ಅವರು ವೆಬ್​ ಸಿರೀಸ್​ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಇದರಲ್ಲಿ ಅವರ ಜೊತೆ ಶಿಲ್ಪಾ ಶೆಟ್ಟಿ ಮತ್ತು ವಿವೇಕ್​ ಒಬೆರಾಯ್​ ಕೂಡ ಅಭಿನಯಿಸುತ್ತಿದ್ದಾರೆ. ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ‘ಇಂಡಿಯನ್​ ಪೊಲೀಸ್​ ಫೋರ್ಸ್​’ ವೀಕ್ಷಣೆಗೆ ಲಭ್ಯವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್