AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಟ್ರೇಲರ್; ಕಿಯಾರಾ ಟ್ರೋಲ್ ಮಾಡಿದವರ ಬಾಯಿ ಮುಚ್ಚಿಸಿದ ಪತಿ ಸಿದ್ದಾರ್ಥ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ನಟಿ ಕಿಯಾರಾ ಅಡ್ವಾಣಿ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಪತಿ ಸಿದ್ಧಾರ್ಥ್ ಮಲ್ಹೋತ್ರಾ ಇನ್‌ಸ್ಟಾಗ್ರಾಮ್‌ನಲ್ಲಿ ಟ್ರೇಲರ್ ಹಂಚಿಕೊಂಡು ಪತ್ನಿಯ ಶ್ರಮವನ್ನು ಶ್ಲಾಘಿಸಿದ್ದಾರೆ. ಈ ಚಿತ್ರವು ಕಿಯಾರಾ ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲಾಗಲಿದೆ ಎಂದು ಸಿದ್ಧಾರ್ಥ್ ಭವಿಷ್ಯ ನುಡಿದಿದ್ದಾರೆ.

‘ಟಾಕ್ಸಿಕ್’ ಟ್ರೇಲರ್; ಕಿಯಾರಾ ಟ್ರೋಲ್ ಮಾಡಿದವರ ಬಾಯಿ ಮುಚ್ಚಿಸಿದ ಪತಿ ಸಿದ್ದಾರ್ಥ್
ಕಿಯಾರಾ-ಸಿದ್ದಾರ್ಥ್
ರಾಜೇಶ್ ದುಗ್ಗುಮನೆ
|

Updated on:Aug 10, 2026 | 7:11 AM

Share

ಮುಖ್ಯಾಂಶಗಳು

  • ಟಾಕ್ಸಿಕ್ ಟ್ರೇಲರ್ ನಲ್ಲಿ ಕಿಯಾರಾ ಅಡ್ವಾಣಿ ಅಭಿನಯಕ್ಕೆ ಸಿದ್ಧಾರ್ಥ್ ಮೆಚ್ಚುಗೆ
  • ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ಪಾತ್ರ
  • ಮಗಳ ಜನನದ ನಂತರ ಕಿಯಾರಾ ಅಡ್ವಾಣಿ ಕಂಬ್ಯಾಕ್ ಸಿನಿಮಾ ಟಾಕ್ಸಿಕ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ (Toxic Movie) ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ನಯನತಾರಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ಪ್ರಮುಖ ನಟಿಯರ ದಂಡೇ ಇದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಅಭಿನಯ ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಕಿಯಾರಾ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಕೂಡ ಟ್ರೇಲರ್ ನೋಡಿ ಪತ್ನಿಯ ಅಭಿನಯಕ್ಕೆ ಜೈ ಎಂದಿದ್ದಾರೆ.

ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಟ್ರೇಲರ್ ಶೇರ್ ಮಾಡಿದ್ದಾರೆ. ಕಿಯಾರಾ ಅವರ ಶ್ರಮ ಹಾಗೂ ಶ್ರದ್ಧೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಸಿನಿಮಾ ಕಿಯಾರಾ ವೃತ್ತಿಜೀವನದಲ್ಲೇ ಅತ್ಯುತ್ತಮ ಚಿತ್ರವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ನಿರ್ದೇಶಕಿ ಗೀತು ಮೋಹನ್ ದಾಸ್ ಮತ್ತು ನಟ ಯಶ್ ತಂಡಕ್ಕೆ ಶುಭ ಹಾರೈಸಿದ್ದಾರೆ. ದೊಡ್ಡ ಪರದೆ ಮೇಲೆ ಆಗಸ್ಟ್ 26ರಂದು ಸಿನಿಮಾ ನೋಡಲು ಕಾತರದಿಂದ ಕಾಯುತ್ತಿರುವುದಾಗಿ ಬರೆದುಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಿದ್ದಾರ್ಥ್ ಯಾವುದೇ ಪೋಸ್ಟ್ ಮಾಡಿರಲಿಲ್ಲ. ಕಿಯಾರಾ ಬೋಲ್ಡ್ ಅವತಾರ ಕಂಡು ಅವರು ಸುಮ್ಮನಾಗಿರಬಹುದು ಎಂದು ಅನೇಕರು ಹಹೇಳಿದ್ದು ಇದೆ. ಆದರೆ, ಈಗ ಅವರ ಪೋಸ್ಟ್ ಎಲ್ಲಾ ಟ್ರೋಲರ್​​ಗಳ ಬಾಯಿ ಮುಚ್ಚಿಸಿದೆ.

ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಕಿಯಾರಾ ಕೂಡ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ನಾದಿಯಾ ಪಾತ್ರ ಮಾಡಲು ಗೀತು ಮತ್ತು ಯಶ್ ಅವಕಾಶ ನೀಡಿದರು. ನನ್ನ ಮೇಲಿಟ್ಟ ನಂಬಿಕೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು. ‘ಟಾಕ್ಸಿಕ್’ ಸಿನಿಮಾ ನನ್ನ ವೃತ್ತಿಜೀವನಕ್ಕೆ ಹೊಸ ತಿರುವು ನೀಡಲಿದೆ. ಈ ಚಿತ್ರದ ನಂತರ ನನ್ನ ಕೆರಿಯರ್‌ನಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಒಬ್ಬ ನಟಿಯಾಗಿ ಈ ಪಾತ್ರ ನನಗೆ ತುಂಬಾ ವಿಶೇಷವಾಗಿದೆ ಎಂದು ಕಿಯಾರಾ ಹರ್ಷ ವ್ಯಕ್ತಪಡಿಸಿದರು.

ಮಗಳ ಜನನದ ನಂತರ ಕಿಯಾರಾ ಮತ್ತೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. 2025 ರಲ್ಲಿ ಸಿದ್ಧಾರ್ಥ್ ಹಾಗೂ ಕಿಯಾರಾಗೆ ಸರಾಯಾ ಎಂಬ ಹೆಣ್ಣು ಮಗು ಜನಿಸಿತ್ತು. ಸುದೀರ್ಘ ಬ್ರೇಕ್ ನಂತರ ಕಿಯಾರಾ ಈ ಬಿಗ್ ಪ್ರಾಜೆಕ್ಟ್ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ಈ ಸಿನಿಮಾದ ಮೇಲೆ ಅಪಾರ ನಿರೀಕ್ಷೆಗಳು ಮೂಡಿವೆ. ಕಿಯಾರಾ ಅವರ ಹೊಸ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್ ಕೊಟ್ಟಿರುವ ಕೊಡುಗೆ ಏನು? 

‘ಟಾಕ್ಸಿಕ್’ ಗೀತು ಮೋಹನ್ ದಾಸ್ ನಿರ್ದೇಶನದ ಪ್ಯಾನ್ ಇಂಡಿಯಾ ಆಕ್ಷನ್ ಥ್ರಿಲ್ಲರ್ ಆಗಿದೆ. ಈ ಸಿನಿಮಾವನ್ನು ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಶೂಟ್ ಮಾಡಲಾಗಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್ ಮಾಡಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:09 am, Mon, 10 August 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ