AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ನಿರೀಕ್ಷೆಯಲ್ಲಿರುವ ಸಿದ್ದಾರ್ಥ್ ಮನೆಯಲ್ಲಿ ಅವಘಡ; ಕಾಲಿಗೆ ಪೆಟ್ಟು

ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಅವರ ಕಾಲಿಗೆ ಗಾಯವಾಗಿದೆ. ಪ್ಲಾಸ್ಟರ್ ಹಾಕಿರುವ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿ ಸುದ್ದಿ ನೀಡಿದ್ದರು. ಈ ಖುಷಿಯ ಬೆನ್ನಲ್ಲೇ ನಟನಿಗೆ ಗಾಯವಾಗಿದ್ದು ಅಭಿಮಾನಿಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

ಮಗುವಿನ ನಿರೀಕ್ಷೆಯಲ್ಲಿರುವ ಸಿದ್ದಾರ್ಥ್ ಮನೆಯಲ್ಲಿ ಅವಘಡ; ಕಾಲಿಗೆ ಪೆಟ್ಟು
ಕಿಯಾರಾ-ಸಿದ್ದಾರ್ಥ್
ರಾಜೇಶ್ ದುಗ್ಗುಮನೆ
|

Updated on: Oct 14, 2026 | 7:26 AM

Share

ಮುಖ್ಯಾಂಶಗಳು

  • ಕಾಲಿಗೆ ಪ್ಲಾಸ್ಟರ್ ಹಾಕಿಸಿಕೊಂಡ ಸಿದ್ಧಾರ್ಥ್
  • ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಹಂಚಿಕೊಂಡ ನಟ
  • ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ಜೋಡಿ

ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಎಚ್ಚರಿಕೆವಹಿಸಬೇಕು. ಇಲ್ಲವಾದಲ್ಲಿ ಅವಘಢಗಳು ಸಂಭವಿಸುತ್ತವೆ. ಕೆಲವೊಮ್ಮೆ ಎಚ್ಚರಿಕೆವಹಿಸಿದ ಹೊರತಾಗಿಯೂ ತೊಂದರೆ ಆಗುತ್ತದೆ. ಈಗ ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಶೂಟಿಂಗ್ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಅವರ ಕಾಲಿಗೆ ಪ್ಲಾಸ್ಟರ್ ಹಾಕಲಾಗಿದೆ. ಈ ಫೋಟೋವನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ತಮಾಷೆಯ ಶೀರ್ಷಿಕೆಯನ್ನೂ ನೀಡಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇತ್ತೀಚೆಗಷ್ಟೇ ಸಿದ್ಧಾರ್ಥ್ ಮತ್ತು ಕಿಯಾರಾ ಅಡ್ವಾಣಿ ಹೊಸ ಸುದ್ದಿ ಹಂಚಿಕೊಂಡಿದ್ದರು. ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಹೇಳಿದ್ದರು. ಈ ದಂಪತಿಯ ಜೀವನದಲ್ಲಿ ಸಾಲು ಸಾಲು ಒಳ್ಳೆಯ ಬೆಳವಣಿಗೆಗಳು ನಡೆಯುತ್ತಿವೆ. ಈ ಖುಷಿಯ ನಡುವೆಯೇ ಅವರಿಗೆ ಗಾಯವಾಗಿರುವುದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ವಿಶೇಷವೆಂದರೆ, ‘ನಾನು ಬ್ರೇಕ್ ಎ ಲೆಗ್ (ಬ್ರೇಕ್ ಎ ಲೆಗ್ ಎಂದರೆ ಒಳ್ಳೆಯದಾಗಲಿ ಎಂಬ ಅರ್ಥ ಇಂಗ್ಲಿಷ್​​ನಲ್ಲಿದೆ) ಮಾತನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡೆ’ ಎಂದು ಅವರು ಇದಕ್ಕೆ ತಮಾಷೆಯ ಕ್ಯಾಪ್ಷನ್ ನೀಡಿದ್ದಾರೆ. ಈ ಪರಿಸ್ಥಿತಿಯಲ್ಲೂ ಅವರು ಕಾಮಿಡಿ ಮಾಡಿದ್ದು ವಿಶೇಷ.

ಅಕ್ಟೋಬರ್ 7ರಂದು ಈ ಜೋಡಿ ಸಿಹಿ ಸುದ್ದಿ ನೀಡಿತ್ತು. ಇನ್‌ಸ್ಟಾಗ್ರಾಮ್‌ನಲ್ಲಿ ಜಂಟಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಮಗುವಿನ ಪುಟ್ಟ ಪಾದರಕ್ಷೆಗಳ ಫೋಟೋ ಪೋಸ್ಟ್ ಮಾಡಿದ್ದರು. ‘ಮತ್ತೊಮ್ಮೆ ದೇವರ ಆಶೀರ್ವಾದ ಸಿಕ್ಕಿದೆ’ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ‘ಟಾಕ್ಸಿಕ್’ ಚೆಲುವೆ ಕಿಯಾರಾ ಅಡ್ವಾಣಿ

ಸಿದ್ಧಾರ್ಥ್ ಮತ್ತು ಕಿಯಾರಾ 2023 ರಲ್ಲಿ ಮದುವೆಯಾಗಿದ್ದರು. 2025 ರ ಜುಲೈನಲ್ಲಿ ಅವರಿಗೆ ಹೆಣ್ಣು ಮಗು ಜನಿಸಿತ್ತು. ಮಗಳಿಗೆ ಸರಾಯ ಎಂದು ಹೆಸರಿಟ್ಟಿದ್ದಾರೆ. ವೃತ್ತಿಜೀವನದ ವಿಷಯಕ್ಕೆ ಬಂದರೆ ಸಿದ್ಧಾರ್ಥ್ ಇತ್ತೀಚೆಗೆ ತೆರೆಮೇಲೆ ಕಾಣಿಸಿಕೊಂಡಿದ್ದರು. ‘ದಿ ವಾನ್: ಫೋರ್ಸ್ ಆಫ್ ದಿ ಫಾರೆಸ್ಟ್’ ಸಿನಿಮಾದಲ್ಲಿ ನಟಿಸಿದ್ದರು. ಇದರಲ್ಲಿ ತಮನ್ನಾ ಭಾಟಿಯಾ ನಾಯಕಿಯಾಗಿದ್ದರು. ಈ ಸಿನಿಮಾ ಸೆಪ್ಟೆಂಬರ್ 25 ರಂದು ಬಿಡುಗಡೆಯಾಗಿತ್ತು. ಆದರೆ, ಸಿನಿಮಾ ಹೆಚ್ಚು ಗಮನ ಸೆಳೆಯಲು ವಿಫಲವಾಗಿದೆ. ಇನ್ನು, ಕಿಯಾರಾ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸದ್ಯಕ್ಕೆ ಅವರು ಯಾವುದೇ ಹೊಸ ಸಿನಿಮಾ  ಒಪ್ಪಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ