ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್

ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಇದೆ. ಎಲ್ಲಿ ಹೋದರೂ ಅವರು ಹೈ ಸೆಕ್ಯೂರಿಟಿ ಜೊತೆಗೆ ಹೋಗಬೇಕು. ಈ ಬಗ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಸಿಕಂದರ್’ ಸಿನಿಮಾದ ಬಿಡುಗಡೆ ಪ್ರಯುಕ್ತ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಒಂದಷ್ಟು ಪ್ರಶ್ನೆಗಳಿಗೆ ಸಲ್ಮಾನ್ ಖಾನ್ ಉತ್ತರ ನೀಡಿದ್ದಾರೆ.

ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್
Salman Khan

Updated on: Mar 27, 2025 | 7:11 PM

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರನ್ನು ಕೊಲ್ಲುವುದಾಗಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಬೆದರಿಕೆ ಹಾಕಿದ್ದು ಗೊತ್ತೇ ಇದೆ. ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ನಡೆದ ಬಳಿಕವಂತೂ ಅವರ ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ. ಈಗ ಸಲ್ಮಾನ್ ಅವರು ಬಿಗಿ ಭದ್ರತೆಯ ನಡುವೆಯೇ ಬದುಕಬೇಕಾಗಿದೆ. ಶೂಟಿಂಗ್, ಪ್ರಮೋಷನ್, ಮೀಟಿಂಗ್.. ಹೀಗೆ ಯಾವುದೇ ಕೆಲಸಕ್ಕೆ ಹೋದರೂ ಅವರ ಜೊತೆ ಹತ್ತಾರು ಮಂದಿ ಬಾಡಿ ಗಾರ್ಡ್ಸ್ ಇರುತ್ತಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸಲ್ಮಾನ್ ಖಾನ್ ಅವರು ಮೌನ ಮುರಿದಿದ್ದಾರೆ. ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ.

‘ಭಗವಾನ್, ಅಲ್ಲಾ.. ಎಲ್ಲವೂ ಅವನ ಮೇಲಿದೆ. ಎಷ್ಟು ಆಯಸ್ಸು ಬರೆದಿದೆಯೋ ಅಷ್ಟೇ. ಕೆಲವೊಮ್ಮೆ ಇಷ್ಟು ಜನರನ್ನು ಒಟ್ಟಿಗೆ ಇಟ್ಟುಕೊಂಡು ಹೋಗಬೇಕಾಗುತ್ತದೆ. ಅದೇ ಸಮಸ್ಯೆ ಆಗಿಬಿಡುತ್ತದೆ’ ಎಂದು ಸಲ್ಮಾನ್ ಖಾನ್ ಅವರು ಹೇಳಿದ್ದಾರೆ. ‘ಸಿಕಂದರ್’ ಕುರಿತ ಸುದ್ದಿಗೋಷ್ಠಿಗೆ ಬಾಡಿಗಾರ್ಡ್ಸ್​ ಜೊತೆ ಬಂದ ಸಲ್ಮಾನ್ ಖಾನ್ ಅವರ ವಿಡಿಯೋಗಳು ವೈರಲ್ ಆಗಿವೆ.

1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಸಿನಿಮಾದ ಶೂಟಿಂಗ್ ವೇಳೆ ಕೃಷ್ಣಮೃಗ ಬೇಟೆ ಆಡಿದ ಆರೋಪ ಸಲ್ಮಾನ್ ಖಾನ್ ಮೇಲೆ ಎದುರಾಯಿತು. ಆಗಿನಿಂದಲೂ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಬರುತ್ತಲೇ ಇದೆ. ಅವರನ್ನು ಹತ್ಯೆ ಮಾಡಬೇಕು ಎಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಪ್ರಯತ್ನಿಸುತ್ತಲೇ ಇದ್ದಾರೆ. ಬಹಿರಂಗವಾಗಿಯೇ ಕೊಲೆ ಬೆದರಿಗೆ ಹಾಕಲಾಗುತ್ತಿದೆ.

ಇದನ್ನೂ ಓದಿ
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಇದನ್ನೂ ಓದಿ: ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ

ಮನೆಮೇಲೆ ಗುಂಡಿನ ದಾಳಿ ನಡೆದ ನಂತರ ಸಲ್ಮಾನ್ ಖಾನ್ ಅವರು ಭದ್ರತೆ ಹೆಚ್ಚಿಸಿಕೊಂಡರು. ಅವರ ಇಡೀ ಕುಟುಂಬಕ್ಕೆ ಈ ಘಟನೆಯಿಂದ ಶಾಕ್ ಆಗಿದೆ. ಒಂದಷ್ಟು ದಿನಗಳ ಕಾಲ ಸಲ್ಮಾನ್ ಖಾನ್ ಅವರು ಮನೆಯಿಂದ ಹೊರಗೆ ಬಂದಿರಲಿಲ್ಲ. ಆದರೆ ಎಷ್ಟು ದಿನ ಹಾಗಿರಲು ಸಾಧ್ಯ? ಶೂಟಿಂಗ್​ನಲ್ಲಿ ಅವರು ಪಾಲ್ಗೊಳ್ಳಲೇಬೇಕು. ಹಾಗಾಗಿ ಅಪಾಯದ ನಡುವೆಯೇ ಸಲ್ಮಾನ್ ಖಾನ್ ಅವರು ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ.

‘ಸಿಕಂದರ್’ ಸಿನಿಮಾ ಬಗ್ಗೆ ಹೇಳುವುದಾದರೆ, ಈ ಚಿತ್ರಕ್ಕೆ ಎ.ಆರ್. ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಖಾನ್ ಅವರು ಜೋಡಿಯಾಗಿ ನಟಿಸಿದ್ದಾರೆ. ಏಪ್ರಿಲ್ 30ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us