‘ಗುಡ್​ ಬೈ’ ಹೇಳಿದ ಖ್ಯಾತ ಗಾಯಕ ಅದ್ನಾನ್ ಸಮಿ: ಫ್ಯಾನ್ಸ್​ ವಲಯದಲ್ಲಿ ಆತಂಕ

ಅದ್ನಾನ್ ಸಮಿ ಅವರು ಪಾಕಿಸ್ತಾನದವರು. ಭಾರತದಲ್ಲಿ ಅವರು ಹಲವು ವರ್ಷಗಳಿಂದ ನೆಲೆಸಿದ್ದಾರೆ. 2016ರಲ್ಲಿ ಅವರು ಭಾರತದ ಪೌರತ್ವ ಪಡೆದರು. ಅವರು ಸಾಕಷ್ಟು ಹಾಡುಗಳನ್ನು ಹಾಡಿದ್ದಾರೆ

‘ಗುಡ್​ ಬೈ’ ಹೇಳಿದ ಖ್ಯಾತ ಗಾಯಕ ಅದ್ನಾನ್ ಸಮಿ: ಫ್ಯಾನ್ಸ್​ ವಲಯದಲ್ಲಿ ಆತಂಕ
ಅದ್ನಾನ್ ಸಮಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 19, 2022 | 3:52 PM

ಗಾಯಕ ಅದ್ನಾನ್ ಸಮಿ (Adnan Sami) ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋ ಹಾಗೂ ವಿಡಿಯೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಮೊದಲು ಹಂಚಿಕೊಂಡಿದ್ದರು. ಆದರೆ, ಇವುಗಳನ್ನು ಈಗ ಅದ್ನಾನ್ ಸಮಿ  ಡಿಲೀಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ‘ಗುಡ್ ಬೈ’ ಎಂಬ ಪೋಸ್ಟ್ ಹಾಕಿದ್ದಾರೆ. ಇದು ಅವರ ಅಭಿಮಾನಿ​ಗಳಲ್ಲಿ ಆತಂಕ ಮೂಡಿಸಿದೆ. ಈ ಪೋಸ್ಟ್​ಗೆ ನಾನಾ ರೀತಿಯಲ್ಲಿ ಕಮೆಂಟ್​ಗಳನ್ನು ಮಾಡಲಾಗುತ್ತಿದೆ. ಅವರು ಈ ರೀತಿ ಹಾಕಿರುವುದು ಏಕೆ ಎಂಬ ಪ್ರಶ್ನೆಗೆ ಅವರೇ ಉತ್ತರ ಹೇಳಬೇಕಿದೆ.

ಅದ್ನಾನ್ ಸಮಿ ಅವರು ಪಾಕಿಸ್ತಾನದವರು. ಭಾರತದಲ್ಲಿ ಅವರು ಹಲವು ವರ್ಷಗಳಿಂದ ನೆಲೆಸಿದ್ದಾರೆ. 2016ರಲ್ಲಿ ಅವರು ಭಾರತದ ಪೌರತ್ವ ಪಡೆದರು. ಅವರು ಸಾಕಷ್ಟು ಹಾಡುಗಳನ್ನು ಹಾಡಿದ್ದಾರೆ. ಅದ್ನಾನ್ ಸಮಿ ಅವರು ಸಾಕಷ್ಟು ದೇಹ ತೂಕ ಹೊಂದಿದ್ದರು. ಒಂದು ವರದಿಯ ಪ್ರಕಾರ ಅವರು ವೃತ್ತಿ ಜೀವನ ಆರಂಭಿಸುವಾಗ ಅವರ ದೇಹದ ತೂಕ 230 ಕೆ.ಜಿ. ಇತ್ತು. ಆ ಬಳಿಕ ಜಿಮ್​ನಲ್ಲಿ ವರ್ಕೌಟ್ ಮಾಡಿ ದೇಹ ತೂಕ ಇಳಿಸಿಕೊಂಡಿದ್ದಾರೆ. ಈಗ ಅವರು ಸಖತ್ ಫಿಟ್ ಆಗಿದ್ದಾರೆ. 2020ರಲ್ಲಿ ಅವರಿಗೆ ಪದ್ಮಶ್ರೀ ಅವಾರ್ಡ್ ಸಿಕ್ಕಿದೆ.

ಇದನ್ನೂ ಓದಿ
Image
Mani Ratnam: ನಿರ್ದೇಶಕ ಮಣಿರತ್ನಂಗೆ ಕೊರೊನಾ ಪಾಸಿಟಿವ್​; ಖಾಸಗಿ ಆಸ್ಪತ್ರೆಗೆ ದಾಖಲು
Image
Breaking News: ಹಲವು ಸೂಪರ್ ಹಿಟ್ ಹಾಡುಗಳನ್ನು ನೀಡಿದ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ನಿಧನ
Image
ಗಾಯಕ​ ಅದ್ನಾನ್​​ ಸಮಿ ಹೆಸರಲ್ಲಿದೆ ವಿಶೇಷ ದಾಖಲೆ

ಕಳೆದ ತಿಂಗಳು ಅದ್ನಾನ್ ಸಮಿ ಮಾಲ್ಡೀವ್ಸ್​ಗೆ ತೆರಳಿದ್ದರು. ಈ ವೇಳೆ ಅವರು ತಮ್ಮ ಫೋಟೋ ಹಂಚಿಕೊಂಡಿದ್ದರು. ಅವರ ಬಾಡಿ ಟ್ರಾನ್ಸ್​ಫಾರ್ಮೇಷನ್ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದರು.  ಹೀಗಿರುವಾಗಲೇ ಅದ್ನಾನ್ ಸಮಿ ‘ಅಲ್ವಿದಾ’ (ಗುಡ್​ ಬೈ) ಎಂದು ಪೋಸ್ಟ್ ಹಾಕಿದ್ದಾರೆ. ಈ ರೀತಿ ಗುಡ್​ ಬೈ ಹೇಳಿರುವುದು ಏಕೆ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಬೇಕಿದೆ. ಫ್ಯಾನ್ಸ್ ವಲಯದಲ್ಲಿ ಈ ಬಗ್ಗೆ ಆತಂಕ ಮೂಡಿದೆ. ಅವರು ಇನ್​ಸ್ಟಾಗ್ರಾಮ್ ತೊರೆಯುತ್ತಿರುವುದಕ್ಕೆ ಈ ರೀತಿ ಹಾಕಿದ್ದಾರೆ ಎಂದು ಕೆಲವರು ಊಹಿಸಿದ್ದಾರೆ. ಇನ್ನೂ ಕೆಲವರು ಇದನ್ನು ಪಾಸಿಟಿವ್ ಆಗಿ ತೆಗೆದುಕೊಂಡಿದ್ದು, ಅದ್ನಾನ್ ಸಮಿ ಅವರು ಹೊಸ ಆರಂಭ ಮಾಡುತ್ತಿದ್ದು, ಹೀಗಾಗಿ ಈ ರೀತಿ ಪೋಸ್ಟ್ ಹಾಕಿದ್ದಾರೆ ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ.

View this post on Instagram

A post shared by Adnan Sami (@adnansamiworld)

ಅದ್ನಾನ್ ಸಮಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು 6.7 ಲಕ್ಷ ಜನರು ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಅದ್ನಾನ್ ಸಮಿ ಪೋಸ್ಟ್​ನಿಂದ ಅವರ ಹಿಂಬಾಲಕರಿಗೆ ತೀವ್ರ ಬೇಸರ ಆಗಿದೆ. ಅವರು ಈ ಬಗ್ಗೆ ಆದಷ್ಟು ಬೇಗ ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ