‘ಸಿಂಗ್ ಅಗೇನ್’ ಚಿತ್ರತಂಡದಿಂದ ಬಿಡುಗಡೆ ಆಯ್ತು ಕರೀನಾ ಕಪೂರ್ ಫಸ್ಟ್ ಲುಕ್ ಪೋಸ್ಟರ್
ಕರೀನಾ ಕಪೂರ್ ಖಾನ್ ಅವರು ‘ಸಿಂಗಂ ಅಗೇನ್’ ಸಿನಿಮಾದಲ್ಲಿ ಅವನಿ ಎಂಬ ಪಾತ್ರ ಮಾಡುತ್ತಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ನಲ್ಲಿ ಅವರು ಗನ್ ಹಿಡಿದು ನಿಂತಿದ್ದಾರೆ. ಅಭಿಮಾನಿಗಳ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ಪೋಸ್ಟರ್ ಸಖತ್ ವೈರಲ್ ಆಗಿದೆ. ನಟ ಅಜಯ್ ದೇವಗನ್ ಕೂಡ ಪೋಸ್ಟರ್ ಶೇರ್ ಮಾಡಿಕೊಂಡಿದ್ದಾರೆ.
ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ (Kareena Kapoor Khan) ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಮೊದಲಿನ ರೀತಿ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿಲ್ಲ. ತಮಗೆ ಸೂಕ್ತ ಎನಿಸುವ ಪಾತ್ರಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಮದುವೆ ಬಳಿಕ ಅವರು ಸಖತ್ ಚ್ಯೂಸಿ ಆಗಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಿಂದ ಕರೀನಾ ಕಪೂರ್ (Kareena Kapoor) ಅವರಿಗೆ ಹೀನಾಯ ಸೋಲು ಎದುರಾಗಿತ್ತು. ಹಾಗಂತ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಬಾಲಿವುಡ್ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಸಿಂಗಂ ಅಗೇನ್’ (Singham Again) ಚಿತ್ರದಲ್ಲಿ ಕರೀನಾ ಕಪೂರ್ ಖಾನ್ ನಟಿಸುತ್ತಿದ್ದಾರೆ. ಈಗ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ.
‘ಸಿಂಗ್ ಅಗೇನ್’ ಸಿನಿಮಾಗೆ ರೋಹಿತ್ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದು ಬಹುತಾರಾಗಣದ ಸಿನಿಮಾ. ಭರ್ಜರಿ ಆ್ಯಕ್ಷನ್ ದೃಶ್ಯಗಳನ್ನು ಒಳಗೊಳ್ಳಲಿರುವ ಈ ಸಿನಿಮಾದಲ್ಲಿ ಅಜಯ್ ದೇವಗನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ದೀಪಿಕಾ ಪಡುಕೋಣೆ, ಟೈಗರ್ ಶ್ರಾಫ್ ಮುಂತಾದವರು ನಟಿಸುತ್ತಿದ್ದಾರೆ. ಅವರ ಸಾಲಿಗೆ ಕರೀನಾ ಕಪೂರ್ ಖಾನ್ ಕೂಡ ಸೇರ್ಪಡೆ ಆಗಿದ್ದಾರೆ. ಪ್ರತಿ ಪಾತ್ರದ ಪೋಸ್ಟರ್ಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡುವ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಲಾಗುತ್ತಿದೆ.
View this post on Instagram
ಕರೀನಾ ಕಪೂರ್ ಖಾನ್ ಅವರು ‘ಸಿಂಗಂ ಅಗೇನ್’ ಸಿನಿಮಾದಲ್ಲಿ ಅವನಿ ಎಂಬ ಪಾತ್ರ ಮಾಡುತ್ತಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ನಲ್ಲಿ ಅವರು ಗನ್ ಹಿಡಿದು ನಿಂತಿದ್ದಾರೆ. ಅಭಿಮಾನಿಗಳ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ಪೋಸ್ಟರ್ ಸಖತ್ ವೈರಲ್ ಆಗಿದೆ. ಅಜಯ್ ದೇವಗನ್ ಕೂಡ ಈ ಪೋಸ್ಟರ್ ಶೇರ್ ಮಾಡಿಕೊಂಡಿದ್ದಾರೆ. ಇದೇ ಸಿನಿಮಾದಲ್ಲಿ ಅರ್ಜುನ್ ಕಪೂರ್ ಕೂಡ ನಟಿಸುತ್ತಿದ್ದಾರೆ. ಹಿಂದಿ ಚಿತ್ರರಂಗದ ಹಲವು ಪ್ರಮುಖ ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇರುವುದರಿಂದ ಸಹಜವಾಗಿಯೇ ಹೈಪ್ ಸೃಷ್ಟಿ ಆಗಿದೆ.
ಇದನ್ನೂ ಓದಿ: ‘ಸಿಂಗಂ ಅಗೇನ್’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆಗೆ ಶಕ್ತಿ ಶೆಟ್ಟಿ ಪಾತ್ರ
ಸಿನಿಮಾಗಳ ಜೊತೆಯಲ್ಲಿ ಸಂಸಾರದ ಕಡೆಗೂ ಕರೀನಾ ಕಪೂರ್ ಅವರು ಗಮನ ಹರಿಸುತ್ತಿದ್ದಾರೆ. 2012ರಲ್ಲಿ ಸೈಫ್ ಅಲಿ ಖಾನ್ ಅವರ ಜೊತೆ ಮದುವೆ ಆದ ಕರೀನಾಗೆ ಇಬ್ಬರು ಮಕ್ಕಳು ಇದ್ದಾರೆ. ಮಕ್ಕಳ ಆರೈಕೆಯ ಸಲುವಾಗಿ ಅವರ ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ. ಹಾಗಂತ ಸಿನಿಮಾಗಳಿಂದ ಅವರು ದೂರ ಉಳಿದುಕೊಂಡಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ‘ಸಿಂಗಂ ಅಗೇನ್’ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿ ಇರಲಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.