AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾದೇವ್ ಬೆಟ್ಟಿಂಗ್​ ಆ್ಯಪ್ ಪ್ರಕರಣ: ಬಂಧನದ ಭೀತಿಯಲ್ಲಿ ನಟ ಸಾಹಿಲ್​ ಖಾನ್​

ಮಹಾದೇವ್ ಬೆಟ್ಟಿಂಗ್​ ಆ್ಯಪ್ ಪ್ರಕರಣದಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗದ ಸೈಬರ್ ಶಾಖೆಯ 3 ಅಧಿಕಾರಿಗಳನ್ನು ನೇಮಿಸಲಾಗಿದೆ. ಎಸ್‌ಐಟಿ ತನಿಖೆಯಲ್ಲಿ 139 ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಲಾಗಿದೆ. 57 ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾಹಿಲ್ ಖಾನ್​ಗೆ ಸಂಕಷ್ಟ ಎದುರಾಗಿದೆ.

ಮಹಾದೇವ್ ಬೆಟ್ಟಿಂಗ್​ ಆ್ಯಪ್ ಪ್ರಕರಣ: ಬಂಧನದ ಭೀತಿಯಲ್ಲಿ ನಟ ಸಾಹಿಲ್​ ಖಾನ್​
ಸಾಹಿಲ್​ ಖಾನ್​
TV9 Web
| Edited By: |

Updated on: Dec 14, 2023 | 3:34 PM

Share

ಮಹಾದೇವ್ ಬೆಟ್ಟಿಂಗ್ ಆ್ಯಪ್ (Mahadev Betting App) ಪ್ರಕರಣದ ಆರೋಪಿ ರವಿ ಉಪ್ಪಲ್ ಅವರನ್ನು ಮುಂಬೈ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ. ಇವರ ಬಂಧನದ ನಂತರ ಹಲವು ದೊಡ್ಡ ವ್ಯಕ್ತಿಗಳ ಹೆಸರು ಕೇಳಿಬರುವ ಸಾಧ್ಯತೆ ಇದೆ. 6,000 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಮಾಸ್ಟರ್‌ಮೈಂಡ್‌ಗಳಾದ ರವಿ ಉಪ್ಪಲ್ ಮತ್ತು ಆತನ ಸಹಚರ ನೀರಜ್ ಚಂದ್ರಕರ್ ಬಂಧನದ ನಂತರ ಈ ಪ್ರಕರಣದಲ್ಲಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೆಸರು ಕೂಡ ಕೇಳಿಬಂದಿದೆ. ಒಂದೆಡೆ ಜಾರಿ ನಿರ್ದೇಶನಾಲಯ 6000 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ. ಆ ಸಮಯದಲ್ಲಿ ಮುಂಬೈ ಪೊಲೀಸರು ಎಸ್‌ಐಟಿ ಸ್ಥಾಪಿಸಿದ್ದರು. ಇದರಲ್ಲಿ ಸೈಬರ್ ಶಾಖೆಯ ಅಧಿಕಾರಿಗಳು ಸೇರಿದ್ದಾರೆ. ಈ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ (Sahil Khan) ಅವರಿಗೆ ಸಮನ್ಸ್ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ .

ಸೆಲೆಬ್ರಿಟಿಗಳ ವಿಚಾರಣೆ:

ಮಹದೇವ್ ಬೆಟ್ಟಿಂಗ್​ ಆ್ಯಪ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕೂಡ ಮನಿ ಲಾಂಡರಿಂಗ್​ ಪ್ರಕರಣ ದಾಖಲಿಸಿಕೊಂಡಿದೆ. ಈ ಪ್ರಕರಣದಲ್ಲಿ ಸೆಲೆಬ್ರಿಟಿಗಳ ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಸಾಹಿಲ್ ಖಾನ್ ಕೂಡ ಸೇರಿದ್ದಾರೆ. ಈ ಪ್ರಕರಣದಲ್ಲಿ ಬಂಧನದಿಂದ ತಪ್ಪಿಸಲು ಸಾಹಿಲ್ ಖಾನ್ ಅವರು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅವರ ಬಂಧನಪೂರ್ವ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದರಿಂದ ಅವರನ್ನು ಕರೆಸಿ ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಹಾದೇವ್ ಬೆಟ್ಟಿಂಗ್​ ಆ್ಯಪ್ ಪ್ರಕರಣದಲ್ಲಿ ಮುಂಬೈ ಪೊಲೀಸರ ಅಪರಾಧ ವಿಭಾಗದ ಸೈಬರ್ ಶಾಖೆಯ 3 ಅಧಿಕಾರಿಗಳನ್ನು ನೇಮಿಸಲಾಗಿದೆ. ಎಸ್‌ಐಟಿ ತನಿಖೆಯಲ್ಲಿ 139 ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದೆ. 57 ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾಹಿಲ್ ಖಾನ್ ಅವರನ್ನು ಕೂಡ ತನಿಖೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿಯ ತಂದೆ ಸಾವು, ಆತ್ಮಹತ್ಯೆ ಶಂಕೆ

ಅಕ್ಟೋಬರ್‌ನಲ್ಲಿ ರಾಯ್‌ಪುರ ಸೆಷನ್ಸ್ ನ್ಯಾಯಾಲಯವು ಮಹದೇವ್ ಆ್ಯಪ್ ಪ್ರಕರಣದ ಆರೋಪಿಗಳಾದ ರವಿ ಉಪ್ಪಲ್ ಮತ್ತು ಸೌರಭ್ ಚಂದ್ರಕರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿತ್ತು. ಆ ನಂತರ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಶುಭಂ ಸೋನಿ ಎಂಬ ಯುವಕನ ವಿಡಿಯೋ ವೈರಲ್ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!