ಬೆಚ್ಚಿ ಬೀಳಿಸುತ್ತಿದೆ ಆಮಿರ್​ ಖಾನ್​ ಹೊಸ ಲುಕ್​; ಅಭಿಮಾನಿಗಳಲ್ಲಿ ಹೆಚ್ಚಿದೆ ಕೌತುಕ

ಈ ಬಾರಿ ಬಾಲಿವುಡ್​ ನಟ ಆಮಿರ್​ ಖಾನ್​ ಅವರು ಹೊಸದೇನನ್ನೋ ಪ್ರಯತ್ನಿಸುತ್ತಿದ್ದಾರೆ. ಅವರ ಹಲವು ಗೆಟಪ್​ಗಳು ವೈರಲ್​ ಆಗಿವೆ. ಒಂದು ಲುಕ್​ನಲ್ಲಿ ಅವರು ಹಾರರ್​ ಫೀಲ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಈ ಫೋಟೋಗಳನ್ನು ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಶೀಘ್ರದಲ್ಲೇ ಅವರ ಹೊಸ ಸಿನಿಮಾ ಬಗ್ಗೆ ಅಪ್​ಡೇಟ್​ ಸಿಗಲಿದೆ.

ಬೆಚ್ಚಿ ಬೀಳಿಸುತ್ತಿದೆ ಆಮಿರ್​ ಖಾನ್​ ಹೊಸ ಲುಕ್​; ಅಭಿಮಾನಿಗಳಲ್ಲಿ ಹೆಚ್ಚಿದೆ ಕೌತುಕ
ಆಮಿರ್​ ಖಾನ್​
Follow us
ಮದನ್​ ಕುಮಾರ್​
|

Updated on: Mar 05, 2024 | 3:55 PM

ಖ್ಯಾತ ನಟ ಆಮಿರ್ ಖಾನ್​ (Aamir Khan) ಅವರು ಸತತ ಸೋಲಿನಿಂದ ಕಂಗೆಟ್ಟಿದ್ದಾರೆ. ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಸೋತ ಬಳಿಕ ಅವರು ಸ್ಕ್ರಿಪ್ಟ್​ ಆಯ್ಕೆಗೆ ಹೆಚ್ಚು ತಲೆ ಕೆಡಿಸಿಕೊಂಡಿದ್ದಾರೆ. ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರ ಒಂದು ಹೊಸ ಗೆಟಪ್​ ವೈರಲ್​ ಆಗಿದೆ. ಭಯಬೀಳಿಸುವ ರೀತಿಯಲ್ಲಿ ಇರುವ ಅವರ ಫೋಟೋವನ್ನು (Aamir Khan Viral​ Photo) ನೋಡಿದ ಬಳಿಕ ಆಮಿರ್ ಖಾನ್ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಬಗ್ಗೆಯೇ ಚರ್ಚೆ ಆಗುತ್ತಿದೆ.

ಅಂದಹಾಗೆ, ಆಮಿರ್​ ಖಾನ್​ ಅವರ ಈ ಹೊಸ ಗೆಟಪ್​ ಅಪ್​ಲೋಡ್​ ಆಗಿರುವುದು ಪಾಪರಾಜಿಯೊಬ್ಬರ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ. ಆಮಿರ್ ಖಾನ್​ ಅವರು ಇದನ್ನು ಇನ್ನೂ ಶೇರ್​ ಮಾಡಿಕೊಂಡಿಲ್ಲ. ‘ಸಿತಾರೆ ಜಮೀನ್​ ಪರ್​’ ಸಿನಿಮಾದಲ್ಲಿ ನಟಿಸುತ್ತಿರುವ ದರ್ಶೀಲ್​ ಸಫಾರಿ ಅವರು ಕೂಡ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಇದು ಆಮಿರ್​ ಖಾನ್​ ಅವರ ಮಲ್ಟಿವರ್ಸ್​. ನಾವೆಲ್ಲರೂ ಅದರಲ್ಲಿ ಜೀವಿಸುತ್ತಿದ್ದೇವೆ ಅಷ್ಟೇ’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ. ಹಾಗಾಗಿ ಇದು ನಿಜವಾಗಿಯೂ ಯಾವ ಸಿನಿಮಾದ ಗೆಟಪ್​ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ನಾಟು ನಾಟು ಸ್ಟೆಪ್​ ಹಾಕಲಾಗದೇ ಸೋತ ಆಮಿರ್​, ಸಲ್ಲು, ಶಾರುಖ್​; ಮುಜುಗರ ತಪ್ಪಿಸಲು ಮಾಡಿದ್ದೇನು?

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು ಪ್ರಚಾರಕ್ಕಾಗಿ ಇಲ್ಲಸಲ್ಲದ ಸರ್ಕಸ್​ ಮಾಡುತ್ತಿದ್ದಾರೆ. ತಾವು ಒಪ್ಪಿಕೊಂಡಿರುವ ಬ್ರ್ಯಾಂಡ್​ಗಳ ಪ್ರಚಾರಕ್ಕಾಗಿ ಹೊಸ ಹೊಸ ತಂತ್ರಗಳನ್ನು ಬಳಸಲಾಗುತ್ತಿದೆ. ಈಗ ಆಮಿರ್​ ಖಾನ್​ ಅವರ ವೈರಲ್​ ಫೋಟೋದ ಹಿಂದೆಯೂ ಅಂಥದ್ದೇ ಪ್ರಚಾರ ತಂತ್ರ ಇರಬಹುದು ಎಂದು ಕೆಲವರು ಊಹಿಸುತ್ತಿದ್ದಾರೆ. ಇದು ಯಾವುದೋ ಜಾಹೀರಾತಿನ ಫೋಟೋ ಇರಬಹುದು ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ಆಮಿರ್​ ಖಾನ್​ ಅವರ ವೈರಲ್​ ಫೋಟೋ:

ಆಮಿರ್​ ಖಾನ್​ ನಿರ್ದೇಶನ ಮಾಡಿದ್ದ ‘ತಾರೆ ಜಮೀನ್​ ಪರ್​’ ಸಿನಿಮಾ 2007ರಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಆಮಿರ್ ಖಾನ್​ ಜೊತೆ ಬಾಲನಟ ದರ್ಶೀಲ್​ ಸಫಾರಿ ಅವರು ಅಭಿನಯಿಸಿದ್ದರು. ಈಗ ಬರೋಬ್ಬರಿ 16 ವರ್ಷಗಳ ಬಳಿಕ ಅವರು ‘ಸಿತಾರೆ ಜಮೀನ್​ ಪರ್​’ ಸಿನಿಮಾದಲ್ಲಿ ಮತ್ತೊಮ್ಮೆ ಒಂದಾಗಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಶೂಟಿಂಗ್​ ಸೆಟ್​ನಿಂದ ಒಂದು ಫೋಟೋವನ್ನು ದರ್ಶೀಲ್​ ಸಫಾರಿ ಅವರು ಇತ್ತೀಚೆಗೆ ಹಂಚಿಕೊಂಡಿದ್ದರು. ಈ ಸಿನಿಮಾ ಬಗ್ಗೆ ಶೀಘ್ರದಲ್ಲೇ ಅಪ್​ಡೇಟ್​ ಸಿಗಲಿದೆ. ಮತ್ತೊಮ್ಮೆ ಆಮಿರ್​ ಖಾನ್ ಮತ್ತು ದರ್ಶೀಲ್​ ಸಫಾರಿ ಅವರನ್ನು ಒಟ್ಟಿಗೆ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾದ ಕಥೆಯ ಬಗ್ಗೆ ಸಿಕ್ಕಾಪಟ್ಟೆ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ