AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು, ಸಹೋದರಿ ಮದುವೆ ಆಗಿದ್ದು ಹಿಂದೂಗಳನ್ನೇ; ಲವ್ ಜಿಹಾದ್ ಆರೋಪಕ್ಕೆ ಆಮಿರ್ ಖಾನ್ ಉತ್ತರ

ಆಮಿರ್ ಖಾನ್ ಅವರ ಮೇಲೆ ಕೆಲವರು ಲವ್ ಜಿಹಾದ್ ಆರೋಪ ಹೊರಿಸಿದ್ದರು. ಅವುಗಳಿಗೆ ಈಗ ಆಮಿರ್ ಖಾನ್ ಪ್ರತಿಕ್ರಿಯಿಸಿದ್ದಾರೆ. ತಮ್ಮ ಕುಟುಂಬದಲ್ಲಿ ಆಗಿರುವ ಅಂತರ್​ ಧರ್ಮೀಯ ವಿವಾಹಗಳ ಬಗ್ಗೆ ಆಮಿರ್ ಖಾನ್ ಉಲ್ಲೇಖಿಸಿದ್ದಾರೆ. ಸಂದರ್ಶನವೊಂದರಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಮಗಳು, ಸಹೋದರಿ ಮದುವೆ ಆಗಿದ್ದು ಹಿಂದೂಗಳನ್ನೇ; ಲವ್ ಜಿಹಾದ್ ಆರೋಪಕ್ಕೆ ಆಮಿರ್ ಖಾನ್ ಉತ್ತರ
Aamir Khan
ಮದನ್​ ಕುಮಾರ್​
|

Updated on: Jun 16, 2025 | 8:08 PM

Share

2014ರಲ್ಲಿ ಬಿಡುಗಡೆ ಆದ ‘ಪಿಕೆ’ ಸಿನಿಮಾ ಸೂಪರ್ ಹಿಟ್ ಆಯಿತು. ಆದರೆ ಸಾಕಷ್ಟು ವಿವಾದಗಳನ್ನು ಕೂಡ ಮಾಡಿಕೊಂಡಿತು. ಈ ಚಿತ್ರದಲ್ಲಿ ಲವ್ ಜಿಹಾದ್ (Love Jihad) ಇದೆ ಎಂದು ಕೆಲವರು ಆರೋಪ ಮಾಡಿದ್ದರು. ಆ ಆರೋಪಗಳಿಗೆ ಈಗ ನಟ ಆಮಿರ್ ಖಾನ್ (Aamir Khan) ಉತ್ತರ ನೀಡಿದ್ದಾರೆ. ಸದ್ಯ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದ್ದಾರೆ. ಈ ನಡುವೆ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಲವ್ ಜಿಹಾದ್ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ಕುಟುಂಬದ ಉದಾಹರಣೆಯನ್ನು ಅವರು ತೆಗೆದುಕೊಂಡಿದ್ದಾರೆ.

‘ಎರಡು ಪ್ರತ್ಯೇಕ ಧರ್ಮಗಳ ಜನರ ನಡುವೆ ಪ್ರೀತಿ ಮೂಡಿದಾಗ, ಅದು ಯಾವಾಗಲೂ ಲವ್ ಜಿಹಾದ್ ಆಗಿರುವುದಿಲ್ಲ. ಇಬ್ಬರು ಪರಸ್ಪರ ಪ್ರೀತಿಸುತ್ತಾರೆ. ಅದು ಮನುಷ್ಯತ್ವದ ಬಂಧ. ಅದು ಧರ್ಮವನ್ನೂ ಮೀರಿದ್ದು’ ಎಂದು ಆಮಿರ್ ಖಾನ್ ಹೇಳಿದ್ದಾರೆ. ಆಮಿರ್ ಖಾನ್ ಅಕ್ಕ ನಿಖತ್ ಖಾನ್ ಅವರು ಸಂತೋಷ್ ಹೆಗಡೆ ಜೊತೆ ಮದುವೆ ಆದರು. ತಂಗಿ ಫರ್ಹತ್ ಖಾನ್ ಅವರು ರಾಜೀವ್ ದತ್ತ ಜೊತೆ ಮದುವೆ ಆದರು. ಆಮಿರ್ ಖಾನ್ ಮಗಳು ಇರಾ ಖಾನ್ ಮದುವೆ ನೂಪುರ್ ಶಿಕಾರೆ ಜೊತೆ ನಡೆಯಿತು.

ಆಮಿರ್ ಖಾನ್ ಮದುವೆ ಆಗಿರುವುದು ಕೂಡ ಹಿಂದೂ ಧರ್ಮದವರನ್ನು. ಮೊದಲ ಪತ್ನಿ ರೀನಾ ದತ್ತ, ಎರಡನೇ ಪತ್ನಿ ಕಿರಣ್ ರಾವ್ ಅವರು ಹಿಂದು ಧರ್ಮದವರು. ಈಗ ಆಮಿರ್ ಖಾನ್ ಅವರಿಗೆ ಬೆಂಗಳೂರು ಮೂಲದ ಗೌರಿ ಎಂಬ ಮಹಿಳೆ ಜೊತೆ ಪ್ರೀತಿ ಚಿಗುರಿದೆ. ಗೌರಿ ಕೂಡ ಹಿಂದು ಧರ್ಮದವರು.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

‘ಪಿಕೆ’ ಸಿನಿಮಾದಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಮಾಡಲಾಗಿತ್ತು ಎಂಬ ಆರೋಪವನ್ನು ಕೂಡ ಆಮಿರ್ ಖಾನ್ ತಳ್ಳಿ ಹಾಕಿದ್ದಾರೆ. ‘ನಾವು ಯಾವುದೇ ಧರ್ಮದ ವಿರುದ್ಧ ಇಲ್ಲ. ಎಲ್ಲ ಧರ್ಮದವರನ್ನು ನಾವು ಗೌರವಿಸುತ್ತೇವೆ. ಹಣ ಕೀಳುವ ಉದ್ದೇಶದಿಂದ ಧರ್ಮವನ್ನು ದುರ್ಬಳಕೆ ಮಾಡಿಕೊಂಡು ಸಾಮಾನ್ಯ ಜನರಿಗೆ ಮೋಸ ಮಾಡುವ ವ್ಯಕ್ತಿಗಳ ಬಗ್ಗೆ ಎಚ್ಚರ ಇರಲಿ ಎಂಬುದನ್ನು ಆ ಸಿನಿಮಾ ಹೇಳುತ್ತೇನೆ. ಅಂಥ ವ್ಯಕ್ತಿಗಳು ನಿಮಗೆ ಎಲ್ಲ ಧರ್ಮದಲ್ಲಿ ಸಿಗುತ್ತಾರೆ. ಅದನ್ನು ತಿಳಿಸುವುದೇ ಸಿನಿಮಾದ ಉದ್ದೇಶ’ ಎಂದಿದ್ದಾರೆ ಆಮಿರ್ ಖಾನ್.

ಇದನ್ನೂ ಓದಿ: ಭಾರತದ ಧ್ವಜ ತೆಗೆಯಬೇಕು: ಆಮಿರ್ ಖಾನ್​ಗೆ ಸೂಚನೆ ನೀಡಿದ್ದ ಪಾಕಿಸ್ತಾನ; ನಟ ಮಾಡಿದ್ದೇನು?

ಆಮಿರ್ ಖಾನ್ ನಟಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಜೂನ್ 20ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ಆಮಿರ್ ಖಾನ್​ಗೆ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ