ಬಹುಕೋಟಿ ವಂಚನೆ ಆರೋಪಿ ಜತೆ ಜಾಕ್ವೆಲಿನ್​ ಲವ್ವಿಡವ್ವಿಗೆ ಸಿಕ್ತು ಇನ್ನಷ್ಟು ಫೋಟೋಗಳ ಸಾಕ್ಷಿ

TV9 Digital Desk

| Edited By: ಮದನ್​ ಕುಮಾರ್​

Updated on:Dec 02, 2021 | 10:04 AM

Jacqueline Fernandez Viral Photo: ಸುಕೇಶ್​ ಚಂದ್ರಶೇಖರ್ ಎದುರಿಸುತ್ತಿರುವ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ಸಂಕಷ್ಟ ಎದುರಿಸುವ ಸಾಧ್ಯತೆ ದಟ್ಟವಾಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

ಬಹುಕೋಟಿ ವಂಚನೆ ಆರೋಪಿ ಜತೆ ಜಾಕ್ವೆಲಿನ್​ ಲವ್ವಿಡವ್ವಿಗೆ ಸಿಕ್ತು ಇನ್ನಷ್ಟು ಫೋಟೋಗಳ ಸಾಕ್ಷಿ
ಜಾಕ್ವೆಲಿನ್​​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​

ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಮತ್ತು ನಟಿ ಜಾಕ್ವೆಲಿನ್​​ ಫರ್ನಾಂಡಿಸ್ (Jacqueline Fernandez)​ ನಡುವೆ ಲವ್ವಿಡವ್ವಿ ನಡೆಯುತ್ತಿತ್ತು ಎಂಬುದಕ್ಕೆ ಕೆಲವೇ ದಿನಗಳ ಹಿಂದೆ ಫೋಟೋ ಸಾಕ್ಷಿ ಸಿಕ್ಕಿತ್ತು. ಈಗ ಆ ಪ್ರಕರಣಕ್ಕೆ ಪುಷ್ಠಿ ನೀಡುವಂತಹ ಇನ್ನಷ್ಟು ಫೋಟೋಗಳು (Jacqueline Fernandez Viral Photo)) ಲೀಕ್​ ಆಗಿವೆ. ಈ ಫೋಟೋಗಳಲ್ಲಿ ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಪರಸ್ಪರ ಆಪ್ತವಾಗಿ ನಡೆದುಕೊಂಡಿರುವ ಸ್ಪಷ್ಟವಾಗಿ ಕಾಣಿಸುತ್ತಿದೆ. ಹಾಗಾಗಿ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​​ ಕೂಡ ಸಂಕಷ್ಟ ಎದುರಿಸುವ ಸಾಧ್ಯತೆ ದಟ್ಟವಾಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಆ ಬಗ್ಗೆ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಜಾಕ್ವೆಲಿನ್​​ ಅವರ ಮುಂಬರುವ ಸಿನಿಮಾಗಳಿಗೆ ಈ ಪ್ರಕರಣದಿಂದ ತೊಂದರೆ ಆದರೂ ಅಚ್ಚರಿ ಏನಿಲ್ಲ.

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ​ಮೇಲೂ ಅನುಮಾನ ಮೂಡಿತ್ತು. ಈಗ ಇಬ್ಬರೂ ಆಪ್ತವಾಗಿರುವ ಫೋಟೋ ಲೀಕ್​​ ಆಗಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ಕಿಚ್ಚ ಸುದೀಪ್​ ನಟನೆಯ, ಅನೂಪ್​ ಭಂಡಾರಿ ನಿರ್ದೇಶನದ ‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಗಡಂಗ್​ ರಕ್ಕಮ್ಮ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರು ಕನ್ನಡ ಸಿನಿಪ್ರಿಯರಿಗೆ ಪರಿಚಯಗೊಳ್ಳುವ ಮುನ್ನವೇ ಈ ರೀತಿ ವಿವಾದಗಳಲ್ಲಿ ಸಿಕ್ಕಿ ಹಾಕಿಕೊಂಡಿರುವುದು ವಿಪರ್ಯಾಸ.

ಇದನ್ನೂ ಓದಿ:

ಗಡಂಗ್​ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್​ ಫರ್ನಾಂಡಿಸ್​; ವಿಕ್ರಾಂತ್​ ರೋಣದಲ್ಲಿ ವಿಶೇಷ ಪಾತ್ರ

ನಾಲ್ಕು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡ ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್; ಮುಂದಿನ ಕ್ರಮ ಏನು?

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada