ತಂದೆ-ತಾಯಿಯಿಂದಲೇ ಹಣ ಪಡೆದಿದ್ದಾರೆ ಸೋನಾಕ್ಷಿ ಸಿನ್ಹಾ; ಒಟ್ಟೂ ಸಾಲ ಎಷ್ಟು?

ಶತ್ರುಘ್ನ ಸಿನ್ಹಾ ಆರಂಭದ ದಿನಗಳಲ್ಲಿ ಗಡ್ಗಂಜ್ ಆಸ್ತಿಯನ್ನು ಖರೀದಿ ಮಾಡಿದ್ದರು. ಶತ್ರುಘ್ನ ಸಿನ್ಹಾ ಇತ್ತೀಚೆಗೆ ಅಸನ್ಸೋಲ್​ನಿಂದ ಸ್ಪರ್ಧಿಸಿ ಗೆದ್ದಿದ್ದರು. ಟಿಎಂಸಿ ಪರವಾಗಿ ಸ್ಪರ್ಧಿಸಿದ್ದ ಶತ್ರುಘ್ನ ಸಿನ್ಹಾ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದರು. ಇದರಲ್ಲಿ ಸಂಪೂರ್ಣ ಆಸ್ತಿ ವಿವರ ಇದೆ.

ತಂದೆ-ತಾಯಿಯಿಂದಲೇ ಹಣ ಪಡೆದಿದ್ದಾರೆ ಸೋನಾಕ್ಷಿ ಸಿನ್ಹಾ; ಒಟ್ಟೂ ಸಾಲ ಎಷ್ಟು?
ಸೋನಾಕ್ಷಿ-ಝಹೀರ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jun 26, 2024 | 11:14 AM

ಬಾಲಿವುಡ್​ನ ನಟ ಶತ್ರುಘ್ನ ಸಿನ್ಹಾ (Sonakshi Sinha) ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಶತ್ರುಘ್ನ ಸಿನ್ಹಾ ಅವರ ಬಳಿ ಕೋಟ್ಯಂತರ ರೂಪಾಯಿ ಸಂಪತ್ತು ಇದೆ. ಇಂದು ಶತ್ರುಘ್ನ ಸಿನ್ಹಾ ಕುಟುಂಬದೊಂದಿಗೆ ಐಷಾರಾಮಿ ಜೀವನವನ್ನು ನಡೆಸುತ್ತಿದ್ದಾರೆ. ಶತ್ರುಘ್ನ ಸಿನ್ಹಾ ಅವರು ಜಮೀನು, ಮನೆ ಮತ್ತು ದುಬಾರಿ ಕಾರುಗಳನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ಶತ್ರುಘ್ನ ಸಿನ್ಹಾ ಅವರ ಪುತ್ರಿ, ನಟಿ ಸೋನಾಕ್ಷಿ ಸಿನ್ಹಾ ಅವರು ನಟ ಝಹೀರ್ ಇಖ್ಬಾಲ್ ಅವರನ್ನು ವಿವಾಹವಾಗಿದ್ದಾರೆ. ಸೋನಾಕ್ಷಿ ಸಾಲ ಮಾಡಿ ಸ್ವಂತ ಮನೆ ಖರೀದಿ ಮಾಡಿದ್ದಾರೆ.

ಶತ್ರುಘ್ನ ಸಿನ್ಹಾ ಆರಂಭದ ದಿನಗಳಲ್ಲಿ ಗಡ್ಗಂಜ್ ಆಸ್ತಿಯನ್ನು ಖರೀದಿ ಮಾಡಿದ್ದಾರೆ. ಶತ್ರುಘ್ನ ಸಿನ್ಹಾ ಇತ್ತೀಚೆಗೆ ಅಸನ್ಸೋಲ್​ನಿಂದ ಸ್ಪರ್ಧಿಸಿ ಗೆದ್ದಿದ್ದರು. ಟಿಎಂಸಿ ಪರವಾಗಿ ಸ್ಪರ್ಧಿಸಿದ್ದ ಶತ್ರುಘ್ನ ಸಿನ್ಹಾ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದರು. ಇದರಲ್ಲಿ ಸಂಪೂರ್ಣ ಆಸ್ತಿ ವಿವರ ಇತ್ತು.

ವರದಿಗಳ ಪ್ರಕಾರ ಶತ್ರುಘ್ನ ಸಿನ್ಹಾ ಅವರ ಒಟ್ಟೂ ಆಸ್ತಿ ಮೌಲ್ಯ 210 ಕೋಟಿ ರೂಪಾಯಿ. ಅವರ ಬಳಿ 10.93 ಕೋಟಿ ಚರಾಸ್ತಿ ಹಾಗೂ ಪತ್ನಿ ಪೂನಂ ಸಿನ್ಹಾ 10.40 ಕೋಟಿ ಚರಾಸ್ತಿ ಹೊಂದಿದ್ದಾರೆ. ಪೂನಂ ಸಿನ್ಹಾ ಅವರೂ ಸಾಕಷ್ಟು ಆಸ್ತಿ ಹೊಂದಿದ್ದಾರೆ.

ಶತ್ರುಘ್ನ ಸಿನ್ಹಾ ಮತ್ತು ಪೂನಂ ಸಿಂಗ್ ಕೂಡ ಕೋಟ್ಯಂತರ ರೂಪಾಯಿ ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ರಾಮಾಯಣ ಹೆಸರಿನ ಅವರ ಮನೆ 88 ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ‘ರಾಮಾಯಣ’ ಬಂಗಲೆಯಲ್ಲಿ ಸಿನ್ಹಾ ಕುಟುಂಬ ವಾಸವಾಗಿದೆ. ಬಂಗಲೆ ಮನೆಗೆ ಪೂನಂ ಸಿನ್ಹಾ ಅವರೇ ಹೆಸರಿಟ್ಟಿದ್ದರು. ಇದಲ್ಲದೇ ಇವರಿಬ್ಬರೂ ಇನ್ನೂ ನಾಲ್ಕು ಮನೆಗಳನ್ನು ಹೊಂದಿದ್ದಾರೆ. ಇವು ಪಾಟ್ನಾ, ಮುಂಬೈ, ಮೆಹ್ರಾಲಿ, ಡೆಹ್ರಾಡೂನ್ ಮತ್ತು ದೆಹಲಿಯಲ್ಲಿವೆ. ಸಿಕ್ಕಿರುವ ಮಾಹಿತಿ ಪ್ರಕಾರ ಸೋನಾಕ್ಷಿ ತನ್ನ ತಂದೆಯಿಂದ 11.58 ಕೋಟಿ ಹಾಗೂ ತಾಯಿಯಿಂದ 4.77 ಕೋಟಿ ರೂಪಾಯಿ ಸಾಲ ಪಡೆದಿದ್ದಾರೆ. ಹಾಗಾಗಿ ಸೋನಾಕ್ಷಿ 16.35 ಕೋಟಿ ರೂಪಾಯಿ ಸಾಲ ಹೊಂದಿದ್ದಾರೆ.

ಇದನ್ನೂ ಓದಿ: ಬೇರೆ ಧರ್ಮದವರನ್ನು ಮದುವೆ ಆದಿರಿ ಎಂದು ಟೀಕಿಸಿದವರಿಗೆ ಸೋನಾಕ್ಷಿ ಕೊಟ್ಟರು ಖಡಕ್ ಉತ್ತರ

ಸೋನಾಕ್ಷಿ ಅವರ ವೃತ್ತಿಜೀವನದ ಬಗ್ಗೆ ಮಾತನಾಡುತ್ತಾ, ಸೋನಾಕ್ಷಿ ಅವರು ನಟ ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಮೊದಲ ಚಲನಚಿತ್ರದಲ್ಲಿಯೇ ನಟಿಯ ಜನಪ್ರಿಯತೆ ಮತ್ತು ಖ್ಯಾತಿಯು ಬಹಳವಾಗಿ ಹೆಚ್ಚಾಯಿತು. ಅದರ ನಂತರ ನಟಿ ಹಿಂತಿರುಗಿ ನೋಡಲಿಲ್ಲ. ಪ್ರಸ್ತುತ, ನಟಿ ತಮ್ಮ ವೈಯಕ್ತಿಕ ಜೀವನದ ಕಾರಣದಿಂದ ಸುದ್ದಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ