AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ‘ಆದಿಪುರುಷ್​’ ಚಿತ್ರದ ಎರಡೇ ದೃಶ್ಯದಲ್ಲಿ ನಟಿಸಿ 50 ಲಕ್ಷ ರೂಪಾಯಿ ಸಂಭಾವನೆ ಪಡೆದ ಸೋನಲ್​ ಚೌಹಾಣ್​?

Sonal Chauhan: ಚಿತ್ರರಂಗದಲ್ಲಿ ಸೋನಲ್​ ಚೌಹಾಣ್​ ಅವರು ಹಲವು ವರ್ಷಗಳ ಅನುಭವ ಹೊಂದಿದ್ದಾರೆ. 2008ರಿಂದಲೂ ಅವರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

Adipurush: ‘ಆದಿಪುರುಷ್​’ ಚಿತ್ರದ ಎರಡೇ ದೃಶ್ಯದಲ್ಲಿ ನಟಿಸಿ 50 ಲಕ್ಷ ರೂಪಾಯಿ ಸಂಭಾವನೆ ಪಡೆದ ಸೋನಲ್​ ಚೌಹಾಣ್​?
ಪ್ರಭಾಸ್​ , ಸೋನಲ್​ ಚೌಹಾಣ್​
ಮದನ್​ ಕುಮಾರ್​
|

Updated on: Jun 18, 2023 | 11:51 AM

Share

ಹತ್ತು ಹಲವು ಕಾರಣಗಳಿಂದಾಗಿ ‘ಆದಿಪುರುಷ್​’ ಸಿನಿಮಾ (Adipurush Movie) ಟ್ರೆಂಡ್​ ಆಗಿದೆ. ಜೂನ್​ 16ರಂದು ತೆರೆಕಂಡ ಈ ಸಿನಿಮಾಗೆ ವಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವರ್ಗದ ಜನರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಮತ್ತೊಂದು ವರ್ಗದ ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಿದ್ದಾರೆ. ಪ್ರಭಾಸ್​, ಕೃತಿ ಸನೋನ್​, ಸೈಫ್​ ಅಲಿ ಖಾನ್​, ದೇವದತ್ತ ನಾಗೆ ಅವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಓಂ ರಾವತ್​ (Om Raut) ನಿರ್ದೇಶನ ಮಾಡಿದ್ದು, ಸಾಕಷ್ಟು ಟೀಕೆ ಎದುರಿಸುತ್ತಿದ್ದಾರೆ. ಇಷ್ಟೆಲ್ಲದರ ಮಧ್ಯೆ ಚಿಕ್ಕದೊಂದು ಪಾತ್ರ ಮಾಡಿದ ನಟಿ ಸೋನಲ್​ ಚೌಹಾಣ್​ (Sonal Chauhan) ಕೂಡ ಸುದ್ದಿ ಆಗುತ್ತಿದ್ದಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಅವರು ಮಂಡೋದರಿಯ ಪಾತ್ರ ಮಾಡಿದ್ದಾರೆ. ಅದಕ್ಕಾಗಿ ಅವರು ಬರೋಬ್ಬರಿ 50 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ‘ಆದಿಪುರುಷ್​’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿನ ಕಲಾವಿದರ ಸಂಭಾವನೆಗೂ ಹೆಚ್ಚು ಹಣ ಖರ್ಚಾಗಿದೆ. ನಟಿ ಸೋನಲ್ ಚೌಹಾಣ್​ ಅವರು ಹಿಂದಿ ಮತ್ತು ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ರಾವಣನ ಹೆಂಡತಿ ಮಂಡೋದರಿಯ ಪಾತ್ರವನ್ನು ಅವರು ನಿಭಾಯಿಸಿದ್ದು, ಇಡೀ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳುವುದು 2 ದೃಶ್ಯದಲ್ಲಿ ಮಾತ್ರ! ಹಾಗಿದ್ದರೂ ಕೂಡ ಅವರಿಗೆ ದುಬಾರಿ ಸಂಬಳ ಸಿಕ್ಕಿದೆ ಎಂದು ವರದಿ ಆಗಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲವಾದರೂ ಇಂಥದ್ದೊಂದು ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ: Adipurush: ‘ನಾವು ರಾಮಾಯಣದ ಕಥೆಯನ್ನು ಸಿನಿಮಾ ಮಾಡಿಲ್ಲ’: ಉಲ್ಟಾ ಹೊಡೆದ ‘ಆದಿಪುರುಷ್​’ ಚಿತ್ರತಂಡ

ಕನ್ನಡದಲ್ಲೂ ನಟಿಸಿರುವ ಸೋನಲ್​ ಚೌಹಾಣ್​:

ಚಿತ್ರರಂಗದಲ್ಲಿ ಸೋನಲ್​ ಚೌಹಾಣ್​ ಅವರು ಹಲವು ವರ್ಷಗಳ ಅನುಭವ ಹೊಂದಿದ್ದಾರೆ. 2008ರಿಂದಲೂ ಅವರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹಿಂದಿ ಮತ್ತು ತೆಲುಗಿನಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡಿರುವ ಅವರು ಕನ್ನಡದಲ್ಲಿ ಶಿವರಾಜ್​ಕುಮಾರ್​ ಜೊತೆ ‘ಚೆಲುವೆಯೇ ನಿನ್ನ ನೋಡಲು’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಸಿನಿಮಾ ತೆರೆಕಂಡಿದ್ದು 2010ರಲ್ಲಿ. ಕೆಲವು ಮ್ಯೂಸಿಕ್​ ವಿಡಿಯೋಗಳಲ್ಲೂ ಸೋನಲ್​ ಚೌಹಾಣ್​ ಅವರು ಕಾಣಿಸಿಕೊಂಡಿದ್ದಾರೆ. ‘ಆದಿಪುರುಷ್​’ ಚಿತ್ರದಲ್ಲಿನ ಮಂಡೋದರಿ ಪಾತ್ರದಿಂದ ಅವರಿಗೆ ಖ್ಯಾತಿ ಹೆಚ್ಚಾಗಿದೆ.

ಇದನ್ನೂ ಓದಿ: Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

‘ಆದಿಪುರುಷ್​’ ಸಿನಿಮಾದಲ್ಲಿ ನಟಿಯರ ಪಾತ್ರಗಳಿಗೆ ಹೇಳಿಕೊಳ್ಳುವಂತಹ ಸ್ಕೋಪ್​ ಸಿಕ್ಕಿಲ್ಲ. ಸೀತೆ ಪಾತ್ರದಲ್ಲಿ ಕೃತಿ ಸನೋನ್​ ನಟಿಸಿದ್ದಾರೆ. ಅವರು ಕೂಡ ಬೆರಳೆಣಿಕೆಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಶೂರ್ಪನಕಿ ಪಾತ್ರದಲ್ಲಿ ತೇಜಸ್ವಿನಿ ಪಂಡಿತ್​ ಅವರು ಅಭಿನಯಿಸಿದ್ದಾರೆ. ಅವರು ಸಹ ಎರಡೇ ದೃಶ್ಯಕ್ಕೆ ಸೀಮಿತವಾಗಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆದಿಪುರುಷ್​’ ಬಿಡುಗಡೆ ಆಗಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಮೊದಲ ದಿನ ನೂರಾರು ಕೋಟಿ ರೂಪಾಯಿ ಕಮಾಯಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?