ಸೋನು ಸೂದ್ ಪತ್ನಿ ಸೊನಾಲಿ ಸೂದ್ ಕಾರು ಅಪಘಾತ; ಆಸ್ಪತ್ರೆಗೆ ಓಡೋಡಿ ಬಂದ ನಟ

ಮುಂಬೈ-ನಾಗಪುರ ಹೈವೇಯಲ್ಲಿ ಸೋನು ಸೂದ್ ಪತ್ನಿ ಸೊನಾಲಿ ಸೂದ್ ಕಾರು ಅಪಘಾತಕ್ಕೆ ಒಳಗಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳಿಗೆ ಆತಂಕ ಆಗಿದೆ. ಸೊನಾಲಿ ಸೂದ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಸೋನು ಸೂದ್ ಪತ್ನಿ ಸೊನಾಲಿ ಸೂದ್ ಕಾರು ಅಪಘಾತ; ಆಸ್ಪತ್ರೆಗೆ ಓಡೋಡಿ ಬಂದ ನಟ
Sonu Sood, Sonali Sood

Updated on: Mar 25, 2025 | 3:34 PM

ಖ್ಯಾತ ನಟ ಸೋನು ಸೂದ್ (Sonu Sood)ಅವರ ಮನೆಯಲ್ಲಿ ದುಃಖದ ವಾತಾವರಣ ನಿರ್ಮಾಣ ಆಗಿದೆ. ಸೋನು ಸೂದ್ ಪತ್ನಿ ಸೊನಾಲಿ ಸೂದ್ ಚಲಿಸುತ್ತಿದ್ದ ಕಾರು ಅಪಘಾತಕ್ಕೆ (Sonali Sood Car Accident) ಒಳಗಾಗಿದೆ. ಸೋಮವಾರ (ಮಾರ್ಚ್​ 24) ರಾತ್ರಿ ಈ ಘಟನೆ ನಡೆದಿದೆ. ಮುಂಬೈ-ನಾಗಪುರ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ನಜ್ಜುಗುಜ್ಜಾದ ಕಾರಿನ ಫೋಟೋ ವೈರಲ್ ಆಗಿದೆ. ಕಾರಿನಲ್ಲಿ ಪ್ರಯಾಣ ಮಾಡುವಾಗ ಸೊನಾಲಿ ಸೂದ್ (Sonali Sood) ಜೊತೆ ಅವರ ಸಹೋದರಿ ಹಾಗೂ ಸಹೋದರಿಯ ಮಗ ಕೂಡ ಇದ್ದರು. ಈ ಮೂವರ ಹೆಲ್ತ್ ಅಪ್​ಡೇಟ್ ಇನ್ನಷ್ಟೇ ಬರಬೇಕಿದೆ. ಸೊನಾಲಿ ಸೂದ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಬಳಿಕ ಸೋನಾಲಿ ಸೂದ್ ಹಾಗೂ ಅವರ ಸಹೋದರಿಯ ಮಗನನ್ನು ನಾಗಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಬ್ಬರಿಗೂ ತೀವ್ರ ಗಾಯಗಳು ಆಗಿವೆ ಎನ್ನಲಾಗಿದೆ. ಕೂಡಲೇ ಸೋನು ಸೂದ್ ಕೂಡ ಆಸ್ಪತ್ರಗೆ ತೆರಳಿದ್ದಾರೆ. ಮುಂದಿನ 48ರಿಂದ 72 ಗಂಟೆಗಳ ಕಾಲ ಇಬ್ಬರನ್ನೂ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ.

ನಾಗಪುರ-ಮುಂಬೈ ಹೈವೇಯಲ್ಲಿ ಸೊನಾಲಿ ಸೂದ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ ಎಂಬ ಸುದ್ದಿಯನ್ನು ಅವರ ಕುಟುಂಬದವರು ಖಚಿತಪಡಿಸಿದ್ದಾರೆ. ಈ ಅಪಘಾತದಲ್ಲಿ ಸೊನಾಲಿ ಸೂದ್ ಅವರ ಸಹೋದರಿಗೆ ಹೆಚ್ಚಿನ ಗಾಯಗಳು ಆಗಿಲ್ಲ. ಕೇವಲ ಸಣ್ಣ ಪುಟ್ಟ ಗಾಯಗಳು ಆಗಿವೆ. ಆದರೆ ಸೊನಾಲಿ ಮತ್ತು ಸಹೋದರಿಯ ಪುತ್ರನಿಗೆ ಗಂಭೀರವಾಗಿ ಪೆಟ್ಟಾಗಿದೆ.

ಇದನ್ನೂ ಓದಿ
ಸೋನು ಸೂದ್​ಗೆ ಕೊಡಲಾಗಿತ್ತು ಸಿಎಂ ಸೀಟಿನ ಆಫರ್, ಕೈಬಿಟ್ಟಿದ್ದು ಏಕೆ?
ಪ್ರತಿ ವರ್ಷ ಕೋಟ್ಯಂತರ ರೂಪಾಯಿ ದಾನ ಮಾಡೋ ಸೋನು ಸೂದ್ ಆಸ್ತಿ ಎಷ್ಟು?
‘ಅವರೇ ನನಗೆ ದೇವರು’; ಯುವತಿಯ ಕರಗಿದ ಕನಸಿಗೆ ಮತ್ತೆ ಜೀವ ತುಂಬಿದ ಸೋನು ಸೂದ್
ವಿಮಾನ ತಡ ಆಗಿದ್ದಕ್ಕೆ ಪೈಲೆಟ್​ ಮೇಲೆ ಹಲ್ಲೆ; ವಿಡಿಯೋಗೆ ಸೋನು ಪ್ರತಿಕ್ರಿಯೆ

ಸೋನು ಸೂದ್ ಕುಟುಂಬಕ್ಕೆ ಈ ರೀತಿ ಸಂಕಷ್ಟ ಎದುರಾಗಿರುವುದು ಅವರ ಅಭಿಮಾನಿಗಳಿಗೆ ನೋವುಂಟು ಮಾಡಿದೆ. ಜನರ ಪಾಲಿಗೆ ಸೋನು ಸೂದ್ ಅವರು ರಿಯಲ್ ಹೀರೋ ಆಗಿದ್ದಾರೆ. ಮೊದಲ ಲಾಕ್​ಡೌನ್​ ಸಂದರ್ಭದಿಂದಲೂ ಅವರು ಅನೇಕರಿಗೆ ಸಹಾಯ ಮಾಡಿದ್ದಾರೆ. ಬಡವರಿಗೆ ಆರ್ಥಿಕ ನೆರವು ನೀಡಿದ್ದಾರೆ. ಹಲವರಿಗೆ ಕೆಲಸ ಕೊಡಿಸಿದ್ದಾರೆ. ಎಷ್ಟೋ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್

ಇಷ್ಟೆಲ್ಲ ಒಳ್ಳೆಯ ಕೆಲಸ ಮಾಡಿದ ಸೋನು ಸೂದ್ ಅವರ ಕುಟುಂಬಕ್ಕೆ ಅಪಘಾತದ ನೋವು ಎದುರಾಗಿರುವುದು ಅಭಿಮಾನಿಗಳು ಬೇಸರ ತಂದಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಸೋನು ಸೂದ್ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us