AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೈಕಾ ಫೋಟೋ ವೈರಲ್: ‘ನಮ್ಮ ಸಂಬಂಧ ಆ ರೀತಿ ಇಲ್ಲ’ ಎಂದ ಸೋರಬ್ ಬೇಡಿ

ಮಲೈಕಾ ಅರೋರಾ ಮತ್ತು ಸೋರಬ್ ಬೇಡಿ ಸಿಕ್ಕಾಪಟ್ಟೆ ಕ್ಲೋಸ್ ಆಗಿರುವ ಫೋಟೋಗಳು ವೈರಲ್ ಆಗಿವೆ. ಹಾಗಾಗಿ ಅವರಿಬ್ಬರ ಸಂಬಂಧದ ಬಗ್ಗೆ ಜನರಿಗೆ ಅನುಮಾನ ಮೂಡಿದೆ. ನೆಟ್ಟಿಗರು ಕೆಟ್ಟ ಕಮೆಂಟ್ ಮಾಡಿದ್ದಾರೆ. ಟ್ರೋಲ್ ಕಾಟ ಜಾಸ್ತಿ ಆದ ಬಳಿಕ ಸೋರಬ್ ಬೇಡಿ ಅವರು ಮಲೈಕಾ ಜೊತೆಗಿನ ಸಂಬಂಧಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಮಲೈಕಾ ಫೋಟೋ ವೈರಲ್: ‘ನಮ್ಮ ಸಂಬಂಧ ಆ ರೀತಿ ಇಲ್ಲ’ ಎಂದ ಸೋರಬ್ ಬೇಡಿ
Malaika Arora, Sorab Bedi
ಮದನ್​ ಕುಮಾರ್​
|

Updated on: Mar 11, 2026 | 3:32 PM

Share

ಬಾಲಿವುಡ್‌ನ ಗ್ಲಾಮರಸ್ ನಟಿ ಮಲೈಕಾ ಅರೋರಾ (Malaika Arora)  ಮತ್ತು Splitsvilla X6 ಸ್ಪರ್ಧಿ ಸೋರಬ್ ಬೇಡಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿತ್ತು. ಇತ್ತೀಚೆಗೆ ಅವರಿಬ್ಬರು ಒಟ್ಟಿಗೆ ಕಾಣಿಸಿಕೊಂಡ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಈ ಚರ್ಚೆ ಶುರುವಾಗಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಸೋರಬ್ ಬೇಡಿ (Sorab Bedi) ತೆರೆ ಎಳೆದಿದ್ದಾರೆ. ‘ನಾವಿಬ್ಬರೂ ಕೇವಲ ಸ್ನೇಹಿತರು’ ಎಂದು ಅವರು ಹೇಳಿದ್ದಾರೆ. ಟ್ರೋಲ್ ಮಾಡುವವರ ವಿರುದ್ಧ ಸೋರಬ್ ಬೇಡಿ ಗರಂ ಆಗಿದ್ದಾರೆ.

ಈ ಕುರಿತು ಮಾಧ್ಯಮವೊಂದರ ಜೊತೆ ಮಾತನಾಡಿದ ಸೋರಬ್ ಬೇಡಿ, ‘ನಾವಿಬ್ಬರೂ ಕೇವಲ ಸ್ನೇಹಿತರು ಅಷ್ಟೇ. ಜನರು ಯಾವುದನ್ನಾದರೂ ಕಾಮೆಂಟ್ ಮಾಡುವ ಮೊದಲು ಯೋಚಿಸಬೇಕು. ನಮಗೆ ಕಳೆದ 4 ವರ್ಷಗಳಿಂದ ಪರಿಚಯವಿದೆ. 2022ರಲ್ಲಿ ನನ್ನ ಮಾಡೆಲಿಂಗ್ ದಿನಗಳಲ್ಲಿ ನಾನು ಮೊದಲ ಬಾರಿಗೆ ಮಲೈಕಾರನ್ನು ಭೇಟಿಯಾಗಿದ್ದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಸಭ್ಯ ಕಾಮೆಂಟ್‌ಗಳ ಬಗ್ಗೆ ಸೋರಬ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ‘ಜನರು ತಮಗೆ ಅನಿಸಿದ್ದೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ. ನಾವು ಈ ಹಿಂದೆಯೂ ಹಲವು ಬಾರಿ ಪಾರ್ಟಿ ಮಾಡಿದ್ದೇವೆ. ನಾನು ಅವರ ಜೊತೆಗಿನ ಫೋಟೋ-ವಿಡಿಯೋಗಳನ್ನು ಈ ಮೊದಲೇ ಹಂಚಿಕೊಂಡಿದ್ದೆ. ಆಗ ನಾನು ಯಾರಿಗೂ ಪರಿಚಯವಿರಲಿಲ್ಲ. ಆದರೆ ಇಂದು ಜನರು ನನ್ನನ್ನು ಗುರುತಿಸುತ್ತಿದ್ದಾರೆ ಅಷ್ಟೇ ವ್ಯತ್ಯಾಸ’ ಎಂದಿದ್ದಾರೆ.

‘ನಮ್ಮ ಬಗ್ಗೆ ಮತ್ತು ಮಲೈಕಾ ಬಗ್ಗೆ ಬರುತ್ತಿರುವ ಕೀಳುಮಟ್ಟದ ಕಾಮೆಂಟ್‌ಗಳನ್ನು ಓದಿದಾಗ ನೋವಾಗುತ್ತದೆ. ಅವರೊಬ್ಬ ಮಹಿಳೆ, ಅವರ ಬಗ್ಗೆ ಇಷ್ಟು ಕೀಳಾಗಿ ಮಾತನಾಡಲು ಹೇಗೆ ಸಾಧ್ಯ? ನಿಮ್ಮ ಮನೆಯಲ್ಲೂ ಸಹೋದರಿ ಅಥವಾ ಮಗಳು ಇರುತ್ತಾರೆ ಅಲ್ವೇ? ಸತ್ಯ ತಿಳಿಯದೆ ಮಾತನಾಡುವುದು ಸರಿಯಲ್ಲ’ ಎಂದು ಸೋರಬ್ ಬೇಡಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: 52ರ ವಯಸ್ಸಲ್ಲೂ ಮಲೈಕಾ ಅರೋರಾ ಫಿಟ್ ಆಗಿರುವುದು ಹೇಗೆ? ಡಯಟ್ ಏನು?

ಸೋರಬ್ ಬೇಡಿ ಪ್ರಸಿದ್ಧ ಮಾಡೆಲ್ ಮತ್ತು ನಟ. ಇವರು ‘ದಿಲ್ವಾಲಿ ದುಲ್ಹಾ ಲೇ ಜಾಯೇಗಿ’ ಮತ್ತು ‘ಚಾಂದ್ ಜಲ್ನೇ ಲಗಾ’ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಎಂಟಿವಿ ಸ್ಪ್ಲಿಟ್ಸ್‌ವಿಲ್ಲಾ ಸೀಸನ್ 16ರಲ್ಲಿ ಸ್ಪರ್ಧಿಯಾಗಿದ್ದಾರೆ. ಈ ಹಿಂದೆ ಅಪೂರ್ವ ರಾಮ್​ಪಾಲ್ ಅವರೊಂದಿಗೆ 9 ವರ್ಷಗಳ ಕಾಲ ರಿಲೇಷನ್​ಶೀಪ್​ನಲ್ಲಿ ಇದ್ದರು. ಬಳಿಕ ಬ್ರೇಕಪ್​ ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ