AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಐಟಂ ಸಾಂಗ್: ಸಿನಿಮಾಗಳಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಶ್ರೀಲೀಲಾ

Pushpa 2: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾದ ಐಟಂ ಹಾಡಿನಲ್ಲಿ ಶ್ರೀಲೀಲಾ ಸೊಂಟ ಬಳುಕಿಸಿದ್ದಾರೆ. ಅಲ್ಲು ಅರ್ಜುನ್ರ-ಶ್ರೀಲೀಲಾ ಡ್ಯಾನ್ಸ್ ಫೋಟೊಗಳು ಈಗಾಗಲೇ ವೈರಲ್ ಆಗಿವೆ. ಆದರೆ ಶ್ರೀಲೀಲಾ, ತಮ್ಮ ವೃತ್ತಿ ಜೀವನದ ಮೊದಲ ಐಟಂ ಹಾಡಿನಲ್ಲಿ ಡ್ಯಾನ್ಸ್ ಮಾಡಲು ಪಡೆದಿರುವ ಸಂಭಾವನೆ ಎಷ್ಟು?

‘ಪುಷ್ಪ 2’ ಐಟಂ ಸಾಂಗ್: ಸಿನಿಮಾಗಳಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಶ್ರೀಲೀಲಾ
ಮಂಜುನಾಥ ಸಿ.
|

Updated on:Nov 10, 2024 | 7:37 AM

Share

‘ಪುಷ್ಪ 2’ ಸಿನಿಮಾಕ್ಕೆ ಇದ್ದ ಗೊಂದಲ ಕೊನೆಗೂ ಪರಿಹಾರಗೊಂಡಿದೆ. 2021ರಲ್ಲಿ ಬಿಡುಗಡೆ ಆಗಿದ್ದ ‘ಪುಷ್ಪ’ ಸಿನಿಮಾದಲ್ಲಿನ ‘ಊ ಅಂಟಾವ ಊಹು ಅಂಟಾವ’ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು. ಹಾಡಿನಲ್ಲಿ ಯಾರೂ ಊಹಿಸದ ರೀತಿಯಲ್ಲಿ ಸಮಂತಾ ಐಟಂ ಹಾಡಿಗೆ ಸೊಂಟ ಕುಣಿಸಿದ್ದರು. ‘ಪುಷ್ಪ 2’ನಲ್ಲಯೂ ಸಹ ನಿರ್ದೇಶಕ ಸುಕುಮಾರ್, ಐಟಂ ಹಾಡಿನ ಬಗ್ಗೆ ವಿಶೇಷ ಕಾಳಜಿವಹಿಸಿದ್ದಾರೆ. ಈ ಹಾಡಿಗೆ ಸಹ ಸ್ಟಾರ್ ನಟಿಯಿಂದ ಡ್ಯಾನ್ಸ್ ಮಾಡಿಸಬೇಕು ಎಂದು ಚಿತ್ರತಂಡ ಬೇರೆ ಬೇರೆ ಪ್ರಯತ್ನಗಳನ್ನು ಮಾಡಿತು, ಬಾಲಿವುಡ್, ಟಾಲಿವುಡ್, ಕಾಲಿವುಡ್ ನಾಯಕಿಯರನ್ನು ಪರಿಗಣಿಸಿದ ಬಳಿಕ ಕೊನೆಗೆ ಅಂತಿಮವಾಗಿ ಹಾಡಿಗೆ ಫೈನಲ್ ಆಗಿದ್ದ ಸ್ಯಾಂಡಲ್​ವುಡ್​ನ ನಟಿ ಶ್ರೀಲೀಲಾ.

ಶ್ರೀಲೀಲಾ, ‘ಪುಷ್ಪ 2’ ಸಿನಿಮಾದ ಐಟಂ ಹಾಡಿಗೆ ಸೊಂಟ ಕುಣಿಸಿದ್ದಾರೆ. ಅದ್ಭುತ ನೃತ್ಯಗಾರ್ತಿ ಮತ್ತು ಎಕ್ಸ್​ಪ್ರೆಶನ್ ಕ್ವೀನ್ ಎಂದೇ ಕರೆಸಿಕೊಳ್ಳುವ ಶ್ರೀಲೀಲಾ, ‘ಪುಷ್ಪ 2’ ಹಾಡಿಗೆ ನ್ಯಾಯ ಒದಗಿಸುವುದು ಖಾತ್ರಿ. ಈಗಾಗಲೇ ಅಲ್ಲು ಅರ್ಜುನ್ ಹಾಗೂ ಶ್ರೀಲೀಲಾ ಒಟ್ಟಿಗೆ ಡ್ಯಾನ್ಸ್ ಮಾಡುತ್ತಿರುವ ಕೆಲ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವು ‘ಪುಷ್ಪ 2’ ಸಿನಿಮಾದ ಹಾಡಿನ ಶೂಟಿಂಗ್​ನ ಚಿತ್ರಗಳೇ ಎಂಬುದು ಬಹುತೇಕ ಖಾತ್ರಿ.

ಅಂದಹಾಗೆ ಶ್ರೀಲೀಲಾ ಇದೇ ಮೊದಲ ಬಾರಿಗೆ ಐಟಂ ಹಾಡೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದಾರೆ. ಈ ಹಿಂದೆ ಕೆಲ ಸಿನಿಮಾಗಳಲ್ಲಿ ತುಸು ಗ್ಲಾಮರಸ್ ಆದ ಉಡುಪು ಧರಿಸಿ ಡ್ಯಾನ್ಸ್ ಮಾಡಿದ್ದಾರಾದರೂ ಇದೇ ಮೊದಲ ಬಾರಿಗೆ ಸಂಪೂರ್ಣ ಐಟಂ ಹಾಡಿನಲ್ಲಿ ಡ್ಯಾನ್ಸ್ ಮಾಡುತ್ತಿದ್ದಾರೆ. ಹಾಗಾಗಿ ಈ ಒಂದು ಹಾಡಿಗೆ ಭಾರಿ ದೊಡ್ಡ ಸಂಭಾವನೆಯನ್ನು ನಟಿ ಶ್ರೀಲೀಲಾ ಪಡೆಯುತ್ತಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಚಿತ್ರದ ವಿಶೇಷ ಹಾಡಿನ ಫೋಟೋ ಲೀಕ್; ಶ್ರೀಲೀಲಾ ವಯ್ಯಾರ ನೋಡಿ

ಶ್ರೀಲೀಲಾ ಪ್ರತಿ ಸಿನಿಮಾಕ್ಕೆ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ ಈ ಒಂದು ಐಟಂ ಹಾಡಿಗೆ 1.50 ಕೋಟಿ ಸಂಭಾವನೆಯನ್ನು ಶ್ರೀಲೀಲಾ ಪಡೆದಿದ್ದಾರೆ. ಕಳೆದ ಬಾರಿ ಸಮಂತಾ ‘ಊ ಅಂಟಾವ ಊಹು ಅಂಟಾವ’ ಹಾಡಿಗೆ ಡ್ಯಾನ್ಸ್ ಮಾಡಿದಾಗ, ಅದೇ ಸಿನಿಮಾದ ನಾಯಕಿ ರಶ್ಮಿಕಾ ಮಂದಣ್ಣಗಿಂತಲೂ ಹೆಚ್ಚಿನ ಸಂಭಾವನೆ ಪಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಈಗ ಶ್ರೀಲೀಲಾ ಸಹ, ಸಿನಿಮಾಕ್ಕಿಂತಲೂ ಹೆಚ್ಚಿನ ಸಂಭಾವನೆಯನ್ನು ಐಟಂ ಹಾಡಿಗೆ ಪಡೆದುಕೊಂಡಿದ್ದಾರೆ.

‘ಪುಷ್ಪ 2’ ಸಿನಿಮಾ ಡಿಸೆಂಬರ್ 5 ರಂದು ಬಿಡುಗಡೆ ಆಗಲಿದೆ. ಸುಕುಮಾರ್ ನಿರ್ದೇಶನ ಮಾಡಲಿರುವ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್, ಫಹಾದ್ ಫಾಸಿಲ್, ಸುನಿಲ್, ಜಗಪತಿ ಬಾಬು, ಪ್ರಕಾಶ್ ರೈ ಅವರುಗಳು ನಟಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾ ಅನ್ನು ನಿರ್ಮಾಣ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:59 am, Sun, 10 November 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ