ಗೂಗಲ್ ಸರ್ಚ್​ನಲ್ಲಿರೋ ಟಾಪ್ 10 ಸಿನಿಮಾಗಳಿವು; ಕನ್ನಡದ ಯಾವ ಚಿತ್ರಕ್ಕೆ ಸ್ಥಾನ?

2024ನೇ ಇಸವಿಯಲ್ಲಿ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಾಟಗೊಂಡ ಟಾಪ್ 10 ಭಾರತೀಯ ಚಲನಚಿತ್ರಗಳ ಪಟ್ಟಿಯನ್ನು ಗೂಗಲ್ ಟ್ರೆಂಡ್ಸ್ ಬಿಡುಗಡೆ ಮಾಡಿದೆ. ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಚಿತ್ರಗಳು ಪಟ್ಟಿಯಲ್ಲಿ ಸ್ಥಾನ ಪಡೆದಿದೆ. 'ಸ್ತ್ರೀ 2' ಅತಿ ಹೆಚ್ಚು ಹುಡುಕಾಟಗೊಂಡ ಚಿತ್ರವಾಗಿದ್ದು, 'ಕಲ್ಕಿ 2898 ಎಡಿ', '12th ಫೇಲ್' ಮುಂತಾದ ಚಿತ್ರಗಳು ಅಗ್ರ ಸ್ಥಾನಗಳನ್ನು ಪಡೆದಿವೆ.

ಗೂಗಲ್ ಸರ್ಚ್​ನಲ್ಲಿರೋ ಟಾಪ್ 10 ಸಿನಿಮಾಗಳಿವು; ಕನ್ನಡದ ಯಾವ ಚಿತ್ರಕ್ಕೆ ಸ್ಥಾನ?
ಗೂಗಲ್ ಸರ್ಚ್​ನಲ್ಲಿ ಸ್ಥಾನ ಪಡೆದ ಟಾಪ್ 10 ಭಾರತದ ಸಿನಿಮಾಗಳಿವು; ಕನ್ನಡದ ಚಿತ್ರಕ್ಕಿಲ್ಲ ಸ್ಥಾನ
Follow us
ರಾಜೇಶ್ ದುಗ್ಗುಮನೆ
|

Updated on:Dec 11, 2024 | 11:42 AM

ನೋಡ ನೋಡುತ್ತಿದ್ದಂತೆ 2024ನೇ ಇಸ್ವಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಇನ್ನು 20 ದಿನ ಕಳೆದರೆ 2025 ಬರಲಿದೆ. ಚಿತ್ರರಂಗದ ಪಾಲಿಗೆ ಈ ವರ್ಷ ಆಶಾದಾಯಕವಾಗಿತ್ತು. ಹಲವು ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡವು. ಈಗ ಗೂಗಲ್ ಟ್ರೆಂಡ್ಸ್ ಈ ವರ್ಷ ಸರ್ಚ್ ಆದ ಟಾಪ್ 10 ಸಿನಿಮಾಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಪೈಕಿ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸಿನಿಮಾಗಳು ಸ್ಥಾನ ಪಡೆದಿವೆ. ಕನ್ನಡದ ಯಾವುದೇ ಸಿನಿಮಾಗೂ ಸ್ಥಾನ ಸಿಕ್ಕಿಲ್ಲ.

ಈ ವರ್ಷ ‘ಸ್ತ್ರೀ 2’ ಚಿತ್ರ ಅತಿ ಹೆಚ್ಚು ಸರ್ಚ್​ ಆದ ಭಾರತೀಯ ಸಿನಿಮಾಗಳಲ್ಲಿ ಒಂದು. ಈ ಸಿನಿಮಾ ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರ ಅತಿ ಹೆಚ್ಚು ಸರ್ಚ್ ಆದ ಸಿನಿಮಾಗಳಲ್ಲಿ ಮೊದಲ ಸ್ಥಾನದಲ್ಲಿ ಇದೆ. ಈ ಚಿತ್ರದಲ್ಲಿ ಶ್ರದ್ಧಾ ಕಪೂರ್, ರಾಜ್​ಕುಮಾರ್ ರಾವ್, ಪಂಕಜ್ ತ್ರಿಪಾಠಿ ಮೊದಲಾದವರು ನಟಿಸಿದ್ದಾರೆ.

ಎರಡನೇ ಸ್ಥಾನದಲ್ಲಿ ‘ಕಲ್ಕಿ 2898 ಎಡಿ’ ಚಿತ್ರ ಇದೆ. ಈ ಸಿನಿಮಾದಲ್ಲಿ ದೊಡ್ಡ ಕಲಾವಿದರ ದಂಡೇ ಇದೆ. ಹಿಂದಿ ಹಾಗೂ ಟಾಲಿವುಡ್ ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ. ಪ್ರಭಾಸ್, ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಬಳಿಕ ‘12th ಫೇಲ್’ ಸಿನಿಮಾ ಇದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾಗೆ ಮೂರನೇ ಸ್ಥಾನ ಸಿಕ್ಕಿದೆ.

ಈ ಬಾರಿ ಆಸ್ಕರ್ ಅವಾರ್ಡ್​ ರೇಸ್​ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ಸಿನಿಮಾ, ‘ಲಾಪತಾ ಲೇಡೀಸ್’. ಈ ಚಿತ್ರಕ್ಕೆ ನಾಲ್ಕನೇ ಸ್ಥಾನ ಸಿಕ್ಕಿದೆ. ತೆಲುಗಿನ ‘ಹನುಮಾನ್’ ಐದನೇ ಸ್ಥಾನ, ಕಾಲಿವುಡ್​ನ ಸೂಪರ್ ಹಿಟ್ ಚಿತ್ರ ‘ಮಹರಾಜ’ ಆರನೇ ಸ್ಥಾನ ಅಲಂಕರಿಸಿದೆ. ಮಲಯಾಳಂನ ‘ಮಂಜುಮ್ಮೇಲ್ ಬಾಯ್ಸ್​’ ಚಿತ್ರಕ್ಕೆ ಏಳನೇ ಸ್ಥಾನ, ದಳಪತಿ ವಿಜಯ್ ನಟನೆಯ ‘GOAT’ ಚಿತ್ರಕ್ಕೆ ಎಂಟನೇ ಸ್ಥಾನ ‘ಸಲಾರ್’ ಚಿತ್ರಕ್ಕೆ 9ನೇ ಸ್ಥಾನ, ‘ಆವೇಶಂ’ ಚಿತ್ರಕ್ಕೆ 10ನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ‘ಸ್ತ್ರೀ 2’ ನಟನ ಕಿಡ್ನ್ಯಾಪ್ ಮಾಡಲು ಅವಾರ್ಡ್ ಫಂಕ್ಷನ್ ಆಯೋಜನೆ; 12 ಗಂಟೆ ಟಾರ್ಚರ್ ಅನುಭವಿಸಿ, ಹಣ ಕಳೆದುಕೊಂಡ ಕಲಾವಿದ

ಈ ಬಾರಿ ಹೆಚ್ಚು ಸರ್ಚ್ ಆದ ಬಹುತೇಕ ಸಿನಿಮಾಗಳು ದಕ್ಷಿಣ ಭಾರತದವು ಅನ್ನೋದು ವಿಶೇಷ. ಆದರೆ, ಇದರಲ್ಲಿ ಯಾವುದೇ ಕನ್ನಡದ ಸಿನಿಮಾಗಳು ಇಲ್ಲ ಎಂಬುದು ಬೇಸರದ ಸಂಗತಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:40 am, Wed, 11 December 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ